ಹಗಲು ವೇಳೆ ಕೋವಿಡ್ ಸೋಂಕು ಹರಡುವುದಿಲ್ಲವೇ?: ಡಿ.ಕೆ. ಶಿವಕುಮಾರ್
Team Udayavani, Dec 24, 2020, 3:19 PM IST
ಬೆಂಗಳೂರು: ರಾಜ್ಯ ಸರ್ಕಾರ ತನಗೆ ಇಚ್ಛೆಗೆ ಬಂದಂತೆ ನಿರ್ಧಾರ ತೆಗೆದುಕೊಳ್ಳುತ್ತಿದೆ. ಹಗಲು ವೇಳೆ ಕೋವಿಡ್ ಸೋಂಕು ಹರಡುವುದಿಲ್ಲವೇ ಹಗಲು ವೇಳೆ ಎಲ್ಲ ತೆರೆದು, ರಾತ್ರಿ ಕರ್ಫ್ಯೂ ಜಾರಿ ಮಾಡಿರುವುದು ಯಾವ ರೀತಿಯ ಕ್ರಮ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿದ್ದಾರೆ.
ಗುರುವಾರ ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಅವರು ಮಾತನಾಡಿದರು.
ಸುಧಾಕರ್ ಆಗಲಿ, ಬೇರೆ ಯಾರೇ ಆಗಲಿ ಯಾರೊಬ್ಬರ ಹೇಳಿಕೆಗೂ ನಾನು ಉತ್ತರ ನೀಡುವುದಿಲ್ಲ. ಕೋವಿಡ್ ಸಮಯದಲ್ಲಿ ನಾವು ಸಹಕಾರ ಕೊಟ್ಟಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಲಿ ನೋಡೋಣ ಅವರು ಮಾಡುವ ಭ್ರಷ್ಟಾಚಾರಗಳಿಗೆ ನಾವು ಸಹಕಾರ ಕೊಡಬೇಕಾ, ಅದರಲ್ಲಿ ಭಾಗಿಯಾಗಬೇಕಾ, ಇವರು ಪ್ರಚಾರಕ್ಕೋಸ್ಕರ ಏನು ಬೇಕೊ ಅದನ್ನು ಮಾಡುತ್ತಿದ್ದಾರೆ. ಏನೇನೋ ಹೇಳಿಕೆ ಕೊಡುತ್ತಿದ್ದಾರೆ. ಇವರಿಗೆ ಹೇಳುವವರು ಕೇಳುವವರು ಯಾರೂ ಇಲ್ಲ ಪ್ರಶ್ನಿಸಿದರು.
‘ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸರಕಾರದ ಪ್ರತಿನಿಧಿಗಳು ಜನರನ್ನು ಬೇರೆ ರೀತಿಯಲ್ಲಿ ದಿಕ್ಕು ತಪ್ಪಿಸುತ್ತಿದ್ದಾರೆ. ಹಗಲು ವೇಳೆ ಓಡಾಟ ಮಾಡಬಹುದು, ರಾತ್ರಿ ಹೊತ್ತು ಕರ್ಫ್ಯು ಮಾಡುವುದೇಕೆ ಎಂದು ಪ್ರಶ್ನಿಸಿದ ಡಿ.ಕೆ. ಶಿವಕುಮಾರ್ ಸೋಂಕು ನಿಯಂತ್ರಣ ಸಾಧ್ಯವೇ ಈ ಬಗ್ಗೆ ಯಾರ ಬಳಿ ಚರ್ಚೆ ಮಾಡಿದ್ದಾರೆ ರಾತ್ರಿ ವೇಳೆ ಸೋಂಕು ಹರಡುತ್ತದೆ ಎನ್ನುವುದಕ್ಕೆ ಪುರಾವೆ, ದಾಖಲೆಗಳಿವೆಯೇ? ಹಗಲು ವೇಳೆ ಹರಡುವುದಿಲ್ಲವೇ?’ಎಂದು ಹೇಳಿದರು.
ಇದನ್ನೂ ಓದಿ:ಬಳಸಿದ ಅಲ್ಯುಮಿನಿಯಂ ಕ್ಯಾನ್ ಸಂಗ್ರಾಹಕರ ಕಲ್ಯಾಣಕ್ಕೆ ರೀಸೈಕಲ್, ಬಾಲ್ ಕಾರ್ಪೊರೇಟ್ ಹೊಸಯೋಜನೆ
‘ಹಗಲಲ್ಲಿ ಸಾವಿರಾರು ಜನ ಸೇರುತ್ತಾರೆ, ಆಗ ಕೋವಿಡ್ ಸೋಂಕು ತಗುಲುವುದಿಲ್ಲವೇ? ಯಾವುದೋ ಕೆಲವು ವರ್ಗಗಳಿಗೆ ತೊಂದರೆ ಕೊಡಲು ಈ ರೀತಿಯ ತೀರ್ಮಾನ ಕೈಗೊಳ್ಳಬಾರದು ಎಂದು ಹೇಳಿದರು.
ಹೊಸ ವರ್ಷ ಆಚರಣೆ ಬೇರೆ ವಿಚಾರ. ಆದರೆ ನೀವು ಕೋವಿಡ್ ನಿಯಂತ್ರಣ ಎಲ್ಲಿ ಮಾಡಿದ್ದೀರಿ? ಸುಮ್ಮನೆ ವಿರೋಧ ಪಕ್ಷಗಳ ಬಗ್ಗೆ ಮಾತನಾಡುವುದಲ್ಲ. ಅಧಿವೇಶನ ಕರೆಯಿರಿ. ಎಲ್ಲರೂ ಚರ್ಚೆ ಮಾಡೋಣ. ಅವರ ಇಷ್ಟಕ್ಕೆ ತಕ್ಕಂತೆ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಅವರು ಸರ್ಕಾರವನ್ನು ತಮ್ಮ ಖಾಸಗಿ ಆಸ್ತಿ ಎಂದು ಭಾವಿಸಿದ್ದಾರೆ. ನಿರ್ಧಾರ ತೆಗೆದುಕೊಳ್ಳುವ ಮುನ್ನ ಈ ವಿಚಾರವಾಗಿ ಯಾರನ್ನಾದರೂ ಕರೆದು ಮಾತನಾಡಿದ್ದಾರಾ? ಯಾರದ್ದಾದರೂ ಸಲಹೆ ಪಡೆದಿದ್ದಾರಾ?’ ಎಂದು ಆಡಳಿತ ಪಕ್ಷವನ್ನು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.