ತೈಲ ಬೆಲೆ ಏರಿಕೆಗೆ ಡಿಕೆಶಿ ಆಕ್ರೋಶ
Team Udayavani, Jun 13, 2020, 5:30 AM IST
ಬೆಂಗಳೂರು: ಆರು ದಿನಗಳಿಂದ ನಿರಂತರವಾಗಿ ಪೆಟ್ರೋಲ್ ಹಾಗೂ ಡೀಸೆಲ್ ದರ ಗಣನೀಯವಾಗಿ ಏರುತ್ತಲೇ ಬಂದಿದ್ದು ಕೋವಿಡ್ 19 ಸಂಕಷ್ಟ ಪರಿಸ್ಥಿತಿಯಲ್ಲಿ ನರಳುತ್ತಿರುವ ಜನಸಾಮಾನ್ಯರ ಮೇಲೆ ಹೊರೆ ಬೀಳುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಕಳೆದ ಭಾನುವಾರದಿಂದ ಇವತ್ತಿನವರೆಗೂ ನಿತ್ಯ ಇಂಧನ ಬೆಲೆ ಏರಿಕೆಯಾಗುತ್ತಲೇ ಇದೆ. ಆರು ದಿನಗಳಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ 3.31 ರೂ. ಹಾಗೂ ಡೀಸೆಲ್ ಪ್ರತಿ ಲೀಟರ್‌ಗೆ 3.42 ರೂ. ಹೆಚ್ಚಾಗಿದೆ.
ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 76.57 ರೂ. ಹಾಗೂ ಡೀಸೆಲ್ ದರ 69.22 ರೂ. ಆಗಿದೆ. ಸಂಕಷ್ಟ ಸಮಯದಲ್ಲಿ ಜನರಿಗೆ ಸ್ಪಂದಿಸಬೇಕಾದ ಸರ್ಕಾರ ಅದರ ಬದಲು ಇಂಧನ ಬೆಲೆ ಏರಿಕೆ ಮಾಡುವ ಮೂಲಕ ಗಾಯದ ಮೇಲೆ ಬರೆ ಎಳೆಯುತ್ತಿದೆ ಎಂದು ದೂರಿದ್ದಾರೆ. 2011ರಲ್ಲಿ ಯುಪಿಎ ಸರ್ಕಾರದ ಅವಧಿಯಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲಬೆಲೆ ಪ್ರತಿ ಬ್ಯಾರೆಲ್ ಗೆ 110 ಅಮೆರಿಕನ್ ಡಾಲರ್ ಇತ್ತು. ಈಗ ಪ್ರತಿ ಬ್ಯಾರೆಲ್ ಗೆ 30 ಅಮೆರಿಕನ್ ಡಾಲರ್ ಮಾತ್ರ. ಇದೆ. ಪ್ರತಿ ಬ್ಯಾರೆಲ್ ಬೆಲೆ ಶೇ.70 ರಷ್ಟು ಅಂದರೆ 80 ಅಮೆರಿಕನ್ ಡಾಲರ್ ನಷ್ಟು ಇಳಿದಿದೆ.
ಆದರೆ ಗ್ರಾಹನಿಗೆ ಸಿಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಮಾತ್ರ ಇಳಿದಿಲ್ಲ. ಆಗಲೂ ಪೆಟ್ರೋಲ್ ಬೆಲೆ 70 ರೂ. ಆಸುಪಾಸಿನಲ್ಲಿತ್ತು. ಈಗಲೂ ಅಷ್ಟೇ ಇದೆ. ಕಚ್ಚಾತೈಲ ಬೆಲೆ ಕುಸಿತದ ನಯಾ ಪೈಸೆ ಲಾಭ ಗ್ರಾಹಕನಿಗೆ ಸಿಗುತ್ತಿಲ್ಲ ಎಂದು ಆರೋಪಿಸಿದ್ದಾರೆ. ಇಂಧನ ಬೆಲೆ ಏರಿಕೆ ಕೈಗಾರಿಕೆ, ಸಣ್ಣ ಹಾಗೂ ಮಧ್ಯಮ ಹಂತದ ಉದ್ದಿಮೆಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ತಕ್ಷಣವೇ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯನ್ನು ಅಂತಾರಾಷ್ಟ್ರೀಯ ತೈಲಬೆಲೆ ಇಳಿಕೆ ಪ್ರಮಾಣಕ್ಕೆ ಅನುಗುಣವಾಗಿ ಕಡಿಮೆ ಮಾಡಬೇಕೆಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.