ಕಂಟೈನ್ಮೆಂಟ್ ವಲಯಗಳಲ್ಲಿ ಅಗತ್ಯ ಸೇವೆ
Team Udayavani, Jul 8, 2020, 6:11 AM IST
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಕಂಟೈನ್ಮೆಂಟ್ ವಲಯಗಳಲ್ಲಿ ಆಹಾರ ಪೂರೈಕೆ ಹಾಗೂ ಮುಂಜಾಗ್ರತಾ ಕ್ರಮ ವಹಿಸುವ ಸಂಬಂಧ ಸಾರ್ವಜನಿಕ ಆದೇಶ ಹೊರಡಿಸಿರುವ ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್, ಆದೇಶದ ಪಾಲನೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ.
ಈ ಹಿನ್ನೆಲೆಯಲ್ಲಿ ಕಂಟೈನ್ಮೆಂಟ್ ಝೋನ್‌ಗಳು ಕೂಡ ಹೆಚ್ಚಾಗುತ್ತಿವೆ. ಹೀಗಾಗಿ, ಈ ಝೋನ್‌ಗಳಲ್ಲಿರುವ ಜನರಿಗೆ ಯಾವುದೇ ಸಮಸ್ಯೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ. ಸರಿಯಾದ ಸ್ಪಂದನೆ ಸಿಗದಿದ್ದರೆ ಬಿಬಿಎಂಪಿ ಸಹಾಯವಾಣಿ: 080- 22660000 ಅಥವಾ 94806 85888ಗೆ ಕರೆ ಮಾಡಿ ದೂರು ನೀಡಬಹುದಾಗಿದೆ.
ಕಂಟೈನ್ಮೆಂಟ್ ಝೋನ್‌ಗಳಿಗೆ ಸೂಚಿಸಿರುವ ಕ್ರಮ
* ನೀರಿನ ಸಮಸ್ಯೆ ಇದ್ದಲ್ಲಿ ಜಲಮಂಡಳಿ ಅಧಿಕಾರಿಗಳೊಂದಿಗೆ ಚರ್ಚಿಸಿ ಸರಿಪಡಿಸಬೇಕು.
* ಪ್ರತಿ ಮನೆಗೂ ಅಗತ್ಯ ವಸ್ತುಗಳು ಪೂರೈಸುವುದು. ಈ ಭಾಗದಲ್ಲಿ ಬಡವರಿದ್ದರೆ, ಉಚಿತ ಆಹಾರದ ಕಿಟ್‌ಗಳನ್ನು ಪಾಲಿಕೆ ನೀಡಲಿದೆ.
* ಈ ನಿರ್ದಿಷ್ಟ ಭಾಗದಲ್ಲಿ ಆಹಾರದ ಕಿಟ್ ಹಾಗೂ ಪಡಿತರ ಚೀಟಿ ಅಡಿ ನೀಡುವ ಆಹಾರವನ್ನು ಎಲ್ಲರಿಗೂ ಸಿಗುವಂತೆ ನೋಡಿಕೊಳ್ಳಬೇಕು. ಪಡಿತರಚೀಟಿ ಇರುವವರ ಮನೆ ಬಾಗಿಲಿಗೇ ಆಹಾರ ಪೂರೈಸತಕ್ಕದ್ದು.
* ಸೋಂಕು ದೃಢಪಟ್ಟ ಪ್ರದೇಶದಲ್ಲಿ ಗರ್ಭಿಣಿಯರು, ಮಧುಮೇಹ, ಉಸಿರಾಟದ ಸಮಸ್ಯೆ ಸೇರಿದಂತೆ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು ಇದ್ದರೆ ಆಯಾ ವ್ಯಾಪ್ತಿಯ ಆರೋಗ್ಯಾಧಿಕಾರಿಗಳು ಸಹಕಾರ ನೀಡುವುದು ಮತ್ತು ಹತ್ತಿರದ ಪ್ರಾಥಮಿಕ ಆರೋಗ್ಯ ಕೇಂದ್ರದ ನೆರವು ಪಡೆದುಕೊಳ್ಳಬೇಕು.
* ಇವುಗಳ ಮೇಲುಸ್ತುವಾರಿಯನ್ನು ವಿಶೇಷ ಅಧಿಕಾರಿಯನ್ನಾಗಿ ನೇಮಿಸಲಾಗಿರುವ ಕಮಾಂಡರ್ ನೋಡಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ!
Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ
Digital arrest: ವೃದ್ಧೆಗೆ ಡಿಜಿಟಲ್ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್ ವಂಚಕ
Drunk & Drive Case: ಅತಿ ವೇಗದ ಚಾಲನೆ: 522 ಕೇಸ್, 1.29 ಲಕ್ಷ ದಂಡ
Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ
MUST WATCH
ಹೊಸ ಸೇರ್ಪಡೆ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.