ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ: ಮನವಿ
Team Udayavani, Jun 15, 2020, 6:16 AM IST
ಬೆಂಗಳೂರು: ಸಮುದಾಯದ ಸಮಗ್ರ ಏಳಿಗೆಗಾಗಿ “ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ’ ಸ್ಥಾಪಿಸಬೇಕು ಎಂದು ರಾಷ್ಟ್ರೀಯ ಬಸವ ಸೇನೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದೆ. ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಭಾನುವಾರ ಮುಖ್ಯಮಂತ್ರಿಗಳನ್ನು ಭೇಟಿಯಾದ ಬಸವ ಸೇನೆ ನಿಯೋಗ, ಈ ಸಂಬಂಧ ಮನವಿ ಸಲ್ಲಿಸಿತು.
ಹಿಂದುಳಿದ ಬ್ರಾಹ್ಮಣರ ಅಭಿವೃದ್ಧಿಗಾಗಿ ಈಗಾಗಲೇ ಸರ್ಕಾರ ಅಭಿವೃದ್ಧಿ ನಿಗಮ ಸ್ಥಾಪಿಸಿದೆ. ಇಷ್ಟೇ ಅಲ್ಲ, ಸಣ್ಣ ಸಣ್ಣ ಸಮುದಾಯಗಳ ಅಭಿವೃದ್ಧಿಗಾಗಿ ಈ ಹಿಂದೆಯೂ ಹಲವು ನಿಗಮಗಳನ್ನು ಸ್ಥಾಪಿಸುವ ಮೂಲಕ ಮೇಲೆತ್ತುವ ಕೆಲಸ ಮಾಡಲಾಗುತ್ತಿದೆ. ಅದೇ ರೀತಿ, ವೀರಶೈವ ಲಿಂಗಾಯ ಸಮುದಾಯದ ಏಳಿಗೆಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮದ ಅವಶ್ಯಕತೆ ಇದ್ದು, ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ರಾಜ್ಯದ ಲಕ್ಷಾಂತರ ಜನ ವೀರಶೈವ ಲಿಂಗಾಯತರು ಆರ್ಥಿಕವಾಗಿ ಸಬಲರಾಗಿಲ್ಲ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ, ಮೈಸೂರು ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗಗಳಲ್ಲಿ ಸಮುದಾಯದ ಜನ ಬಹುಸಂಖ್ಯಾತರಾಗಿದ್ದರೂ ಹಿಂದುಳಿ ದವರಾಗಿದ್ದಾರೆ. ಎಲ್ಲ ಪಕ್ಷದ ಶಾಸಕರುಗಳಿಗೆ ಈ ಹಿಂದೆ ಹಲವು ಬಾರಿ ಮನವಿ ಮಾಡಿಕೊಂಡಿದ್ದರೂ ಪ್ರಯೋಜನವಾಗಿಲ್ಲ. ಈಗ ಸರ್ಕಾರ ಈ ನಿಟ್ಟಿನಲ್ಲಿ ಮನಸ್ಸು ಮಾಡಬೇಕು ಎಂದು ಆಗ್ರಹಿಸಿದರು.
ಬಸವ ಜಯಂತಿಯನ್ನು ರಾಷ್ಟ್ರೀಯ ಉತ್ಸವವಾಗಿ ಆಚರಿಸಬೇಕು. ಹಾಗೂ ಬಸವಣ್ಣನವರ ಐಕ್ಯಸ್ಥಳ ಕೂಡಲ ಸಂಗಮವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸುವಂತೆ ಇದೇ ವೇಳೆ ಮನವಿ ಮಾಡಲಾಯಿತು. ರಾಷ್ಟ್ರೀಯ ಬಸವ ಸೇನೆ ರಾಜ್ಯ ಘಟಕದ ಅಧ್ಯಕ್ಷ ಶಿವನಗೌಡ ಪಾಟೀಲ್, ಪದಾಧಿಕಾರಿ ಭೀಮಾಶಂಕರ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ
Air India: ಕೈಕೊಟ್ಟ ಏರಿಂಡಿಯಾ ವಿಮಾನ: ಪ್ರಯಾಣಿಕರು 80 ಗಂಟೆಗಳಿಂದ ಅತಂತ್ರ!
Anandiben Patel: ವಿಮಾನ ಅನ್ವೇಷಿಸಿದ್ದು ರೈಟ್ ಸೋದರರಲ್ಲ, ಋಷಿ ಭಾರದ್ವಾಜ: ರಾಜ್ಯಪಾಲೆ
bomb cyclone: ಶೀಘ್ರ ಅಮೆರಿಕ ಕರಾವಳೀಲಿ “ಬಾಂಬ್ ಸೈಕ್ಲೋನ್’ ಸ್ಫೋಟ!
Manipur: ಖಾಲಿ ಶವಪೆಟ್ಟಿಗೆ ಹಿಡಿದು ನ್ಯಾಯಕ್ಕಾಗಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.