ಗುಡಿಸಲಿಗೆ ಬೆಂಕಿ ಪ್ರಕರಣ: ಪರಿಹಾರಕ್ಕೆ ನಿರ್ದೇಶನ
Team Udayavani, Jun 25, 2020, 5:11 AM IST
ಬೆಂಗಳೂರು: ನಗರದ ಕಾಚರಕನಹಳ್ಳಿ ಬಳಿಯ ಕೊಳೆಗೇರಿಯಲ್ಲಿ ವಲಸೆ ಕಾರ್ಮಿಕರಿಗೆ ಸೇರಿದ 90ಕ್ಕೂ ಹೆಚ್ಚು ಗುಡಿಸಲುಗಳಿಗೆ ಬೆಂಕಿ ಹಚ್ಚಿ ನಾಶಪಡಿಸಿರುವುದರಿಂದ ಸಂತ್ರಸ್ತ ಕಾರ್ಮಿಕರಿಗೆ ಪುನರ್ವಸತಿ ಹಾಗೂ ಪರಿಹಾರ ಕಲ್ಪಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಘಟನೆ ಕುರಿತು ವಕೀಲೆ ವೈಶಾಲಿ ಹೆಗ್ಡೆ ಬರೆದಿದ್ದ ಪತ್ರ ಆಧರಿಸಿ ದಾಖಲಿಸಿಕೊಂಡ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಎ.ಎಸ್. ಓಕ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ, ಗುಡಿಸಲುಗಳನ್ನು ನಾಶಪಡಿಸುವ ಮೂಲಕ ನಿವಾಸಿಗಳ ಹಕ್ಕುಗಳನ್ನು ಉಲ್ಲಂ ಸಲಾಗಿದೆ. ಪ್ರಕರಣದ ಹಿಂದೆ ಪ್ರಭಾವಿಗಳ ಕೈವಾಡ ಇರುವುದು ಮೇಲ್ನೋಟಕ್ಕೆ ತಿಳಿದು ಬರುತ್ತದೆ ಎಂದು ಅಭಿಪ್ರಾಯಪಟ್ಟಿತು.
ಅಲ್ಲದೆ, ಗುಡಿಸಲುಗಳಲ್ಲಿದ್ದ ಕಾರ್ಮಿಕರು ಸದ್ಯ ಎಲ್ಲಿದ್ದಾರೆ ಎಂಬ ಬಗ್ಗೆ ಸರ್ಕಾರ ವಿಚಾರಣೆ ನಡೆಸಬೇಕು ಹಾಗೂ ಅವರಿಗೆ ಪುನರ್ವಸತಿ ಕಲ್ಪಿಸಬೇಕು. ಹಾಗೆಯೇ, ಗುಡಿಸಲಿನಲ್ಲಿದ್ದ ವಸ್ತುಗಳ ನಾಶವಾಗಿರುವುದಕ್ಕೆ ಪರಿಹಾರ ನೀಡಬೇಕು. ಗುಡಿಸಲುಗಳಿದ್ದ ಜಾಗದ ಸದ್ಯ ಸ್ಥಿತಿಗತಿ ಬಗ್ಗೆ ಮಾಹಿತಿ ನೀಡಬೇಕು ಎಂದು ನಿರ್ದೇಶಿಸಿದ ನ್ಯಾಯಪೀಠ,
ಈ ಆದೇಶ ಪಾಲನೆಗೆ ಕೈಗೊಂಡ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಜುಲೈ 7ಕ್ಕೆ ಮುಂದೂಡಿತು. ವಿಚಾರಣೆ ವೇಳೆ ಸರ್ಕಾರಿ ವಕೀಲರು, ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾಗಿರುವ ಹಾಗೂ ತಲೆಮರೆಸಿಕೊಂಡಿರುವ ದುಷ್ಕರ್ಮಿಗಳು ರಾಜಕೀಯ ಹಿನ್ನೆಲೆ ಹೊಂದಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.