ವೈಫಲ್ಯ ಸರಿಪಡಿಸಿಕೊಳ್ಳಿ: ಸುಧಾಕರ್
Team Udayavani, Jun 27, 2020, 5:04 AM IST
ಬೆಂಗಳೂರು : ಮಾನವ ಸಂಪನ್ಮೂಲ ಮತ್ತು ಸೌಲಭ್ಯಗಳನ್ನು ಯೋಜಿತ ರೀತಿಯಲ್ಲಿ ಪರಿಣಾಮಕಾರಿಯಾಗಿ ಬಳಕೆ ಮಾಡಿಕೊಳ್ಳುವ ಮೂಲಕ ಕೋವಿಡ್ ನಿಯಂತ್ರಣದಲ್ಲಿ ಎದುರಾಗಿರುವ ಸಮಸ್ಯೆ ಪರಿಹರಿಸಿಕೊಳ್ಳಲು ಸಾಧ್ಯವಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಬೆಂಗಳೂರು ನಗರದಲ್ಲಿ ಸೋಂಕಿತರು ಮತ್ತು ಮರಣ ಹೊಂದುತ್ತಿರುವವರ ಪ್ರಮಾಣ ಹೆಚ್ಚುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಆರೋಗ್ಯ, ವೈದ್ಯ ಶಿಕ್ಷಣ, ಬಿಬಿಎಂಪಿ ಹಿರಿಯ ಅಧಿಕಾರಿಗಳು, ವಿಕ್ಟೋರಿಯಾ, ಬೌರಿಂಗ್ ಮತ್ತು ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆ ನಿರ್ದೇಶಕರು, ಪರಿಣಿತರ ಜತೆ ಶುಕ್ರವಾರ ವಿಡಿಯೋ ಸಂವಾದ ನಡೆಸಿ ಈ ಸೂಚನೆ ನೀಡಿದರು.
ಹವಾಮಾನ ಬದಲಾವಣೆ ಹಾಗೂ ಇತರೆ ಕಾರಣಗಳಿಂದ ವಿಷಮಶೀತ ಜ್ವರ ಪೀಡಿತರ ಸಂಖ್ಯೆ ಹೆಚ್ಚುತ್ತಿದ್ದು ಅವರಲ್ಲಿ ಬಹುತೇಕರಿಗೆ ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ನಗರದಾದ್ಯಂತ ಐದು ಸಾವಿರಕ್ಕೂ ಹೆಚ್ಚು ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್‌ಗಳನ್ನು ಸಜ್ಜುಗೊಳಿಸಲಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.