ಬಾಬೂಜಿ ತತ್ವಾದರ್ಶಗಳ ಪಾಲನೆಯಾಗಲಿ: ಸಿಎಂ
Team Udayavani, Apr 6, 2020, 10:42 AM IST
ಬೆಂಗಳೂರು: ಹಸಿರು ಕ್ರಾಂತಿ ಹರಿಕಾರ, ಮಾಜಿ ಉಪ ಪ್ರಧಾನಿ ದಿ. ಡಾ. ಬಾಬು ಜಗಜೀವನ ರಾಮ್ ಅವರ ತತ್ವಾದರ್ಶವನ್ನು ಯುವಜನರು ಪಾಲಿಸಬೇಕು ಎಂದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ಡಾ. ಬಾಬು ಜಗಜೀವನ ರಾಮ್ 113ನೇ ಜನ್ಮ ದಿನಾಚರಣೆ ಅಂಗ ವಾಗಿ ವಿಧಾನಸೌಧ ಆವರಣದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಗೌರವ ಸಮರ್ಪಿಸಿದ ನಂತರ ಸುದ್ದಿಗಾರೊಂದಿಗೆ ಮಾತ ನಾಡಿದ ಅವರು, ಸ್ವಾತಂತ್ರ್ಯನಂತರ ದೇಶದಲ್ಲಿ ಆಹಾರ ಸಮಸ್ಯೆ ಉಂಟಾಗಿದ್ದಾಗ ಕೇಂದ್ರ ಕೃಷಿ ಸಚಿವರಾಗಿದ್ದ ಬಾಬೂಜಿ ಸುಧಾರಿತ ಬಿತ್ತನೆ ಬೀಜದ ತಳಿಗಳ ಆವಿಷ್ಕಾ ರಕ್ಕೆ ಆದ್ಯತೆ ನೀಡುವ ಮೂಲಕ ಹಸಿರು ಕ್ರಾಂತಿಯ ಹರಿಕಾರೆನ್ನಿಸಿದ್ದಾರೆ ಎಂದರು.
ಅವರು ರಕ್ಷಣಾ ಸಚಿವರಾಗಿ ಮಾಡಿದ ಸಾಧನೆ ಅಪಾರ ಎಂದರು. ಬಾಬೂಜಿ ಅವರು ಶೋಷಿತರ ದನಿಯಾಗಿ ಹೋರಾಟ ನಡೆಸಿದ್ದರು ಎಂದು ಬಣ್ಣಿಸಿದರು. ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ, ವಸತಿ ಸಚಿವ ವಿ.ಸೋಮಣ್ಣ, ಸಂಸದ ನಾರಾಯಣ ಸ್ವಾಮಿ, ಮಾಜಿ ಸಚಿವ ಎಚ್. ಆಂಜನೇಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ್, ಸಲಹೆಗಾರರಾದ ಇ. ವೆಂಕಟಯ್ಯ, ಆಯುಕ್ತ ಪೆದ್ದಪ್ಪಯ್ಯ, ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತ ಅನಿಲ್ ಕುಮಾರ್, ಬಾಬು ಜಗಜೀವನರಾಮ್ ಚರ್ಮ ಕೈಗಾರಿಕೆ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ. ಎಚ್. ನಟರಾಜ್, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ನಿರ್ದೇಶಕ ಸಂಗಪ್ಪ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಮಗದ ವ್ಯವಸ್ಥಾಪಕ ನಿರ್ದೇಶಕ ಹನುಮನರಸಯ್ಯ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.