Fact Check ಪತ್ತೆಗೆ ವಿಶೇಷ ತಂಡ ರಚನೆ
ಪ್ರತಿ ಠಾಣೆಯಲ್ಲಿ ಇಬ್ಬರು ಸಿಬ್ಬಂದಿ ನೇಮಕ | ಆಯುಕ್ತರ ಕಚೇರಿಯಲ್ಲಿ ದೊಡ್ಡ ಮಟ್ಟದ ತಂಡ
Team Udayavani, Aug 27, 2023, 8:19 AM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಫ್ಯಾಕ್ಟ್ ಚೆಕ್ ಪತ್ತೆಗೆ ಪ್ರತಿ ಠಾಣೆ ವ್ಯಾಪ್ತಿಯಲ್ಲಿ ಸಿಬ್ಬಂದಿ ನಿಯೋಜಿ ಸುವ ಕುರಿತು ಚರ್ಚೆ ನಡೆದ ಬೆನ್ನಲ್ಲೇ ನಗರದ ಠಾಣಾ ಮಟ್ಟದಿಂದ ಪೊಲೀಸ್ ಆಯುಕ್ತರ ಕಚೇರಿ ವರೆಗೆ ಫ್ಯಾಕ್ಟ್ ಚೆಕ್ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ.
ಈ ಕುರಿತು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಕೆಲವೊಂದು ಪೋಸ್ಟ್‌ಗಳು ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುತ್ತವೆ. ಕೆಲವೊಂದು ವಿರೋಧ, ಪ್ರಚೋದನಾಕಾರಿ ಹಾಗೂ ತಪ್ಪು ಮಾಹಿತಿಯ ಪೋಸ್ಟ್‌ಗಳಿಂದ ಸಮಾಜದಲ್ಲಿ ಅಶಾಂತಿ ಮೂಡುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಠಾಣಾ ಮಟ್ಟದಿಂದ ಆಯುಕ್ತರ ಕಚೇರಿವರೆಗೆ 3 ಹಂತದಲ್ಲಿ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದರು.
ಪ್ರತಿ ಠಾಣೆಯಲ್ಲಿ ತಾಂತ್ರಿಕವಾಗಿ ಪರಿಣಿತಿ ಹೊಂದಿರುವ ಇಬ್ಬರು ಸಿಬ್ಬಂದಿ ಆಯ್ಕೆ ಮಾಡಿ ತಂಡ ರಚಿಸಲಾಗಿದ್ದು, ಸಾಮಾಜಿಕ ಜಾಲತಾಣ ಗಳಲ್ಲಿ ಸುಳ್ಳು ಸುದ್ದಿ, ಪ್ರಚೋದನಾಕಾರಿ, ಪರ ಮತ್ತು ವಿರೋಧ ಪೋಸ್ಟ್‌ಗಳನ್ನು ಆ ಸಿಬ್ಬಂದಿ ಪತ್ತೆ ಹಚ್ಚಲಿದ್ದಾರೆ. ಇದೇ ರೀತಿ ಡಿಸಿಪಿ ಕಚೇರಿಯಲ್ಲಿ ಕೂಡ ಮತ್ತೂಂದು ಸಣ್ಣ ಮಟ್ಟದ ತಂಡ ಇದ್ದರೆ, ಆಯುಕ್ತರ ಕಚೇರಿ ಯಲ್ಲಿ ದೊಡ್ಡ ಮಟ್ಟದ ತಂಡ ಕಾರ್ಯ ನಿರ್ವಹಿಸಲಿವೆ ಎಂದು ವಿವರಿಸಿದರು.
ಸುಳ್ಳು ಸುದ್ದಿ ಪತ್ತೆ ಹಚ್ಚುವುದು ಹೇಗೆ?
ಠಾಣಾ ಮಟ್ಟದ ತಂಡ ಸುಳ್ಳು ಸುದ್ದಿ ಹಾಗೂ ಪ್ರಚೋದನಾಕಾರಿ ಬರಹಗಳ ಬಗ್ಗೆ ಡಿಸಿಪಿ ಕಚೇರಿ ಯ ತಂಡಕ್ಕೆ ಮಾಹಿತಿ ನೀಡಲಿವೆ. ಆ ತಂಡ ಆಯುಕ್ತರ ಕಚೇರಿಯ ಘಟಕಕ್ಕೆ ವರದಿ ಮಾಡಲಿದೆ. ಕಚೇರಿಯ ಅತ್ಯಾಧುನಿಕ ಸಲಕರಣೆಗಳು ಹಾಗೂ ತಂತ್ರಜ್ಞಾನದ ಮೂಲಕ ತಪ್ಪು ಮಾಡಿದವರ ಪತ್ತೆ ಹಚ್ಚುವುದು ಸೇರಿ ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುತ್ತದೆ. ಜತೆಗೆ ನಕಲಿ ಖಾತೆ ಪತ್ತೆ ಹಚ್ಚಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದರು. ಫೇಕ್ ನ್ಯೂಸ್ ವೈರಲ್ ಆದ ತಕ್ಷಣ ಪರಿಶೀಲನೆ
ಠಾಣೆ ಮತ್ತು ಡಿಸಿಪಿ ಹಾಗೂ ಆಯಕ್ತರ ಕಚೇರಿಯಲ್ಲಿ ಕಾರ್ಯನಿರ್ವಹಿಸುವ ತಂಡಗಳು ಸಾಮಾಜಿಕ ಜಾಲತಾಣಗಳ ಮೇಲೆ ಹದ್ದಿನ ಕಣ್ಣಿಡಲಿವೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳು ವೈರಲ್ ಆದರೆ ಕೂಡಲೇ ಅವುಗಳನ್ನು ಪರಿಶೀಲಿಸಲಾಗುತ್ತದೆ. ಫ್ಯಾಕ್ಟ್ ಚೆಕ್ ಮಾಡಿ ಸ್ಪಷ್ಟೀಕರಣ ನೀಡಲಾಗುತ್ತದೆ. ಈ ಮೂಲಕ ಸತ್ಯಾಸತ್ಯತೆ ಜನರಿಗೆ ಮನವರಿಕೆ ಮಾಡಿಕೊಡುತ್ತವೆ. ಈಗಾಗಲೇ ಸಿಬ್ಬಂದಿಗೆ ಈ ಕುರಿತು ತರಬೇತಿ ನೀಡಲಾಗಿದೆ. ಸುಳ್ಳು ಸುದ್ದಿಗಳನ್ನು ಯಾವ ರೀತಿ ಪತ್ತೆ ಹಚ್ಚಬೇಕು ಎಂಬುದನ್ನು ಸಿಬ್ಬಂದಿಗೆ ತಿಳಿಸಲಾಗಿದೆ ಎಂದು ಬಿ.ದಯಾನಂದ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.