ಮೇಕಪ್ ಆರ್ಟಿಸ್ಟ್ಗೆ ವಂಚನೆ
Team Udayavani, Jul 6, 2020, 5:51 AM IST
ಬೆಂಗಳೂರು: ಲಾಕ್ಡೌನ್ ನಡುವೆಯೂ ಸೈಬರ್ ವಂಚಕರು ಸಕ್ರಿಯರಾಗಿದ್ದು, ಮಹಿಳಾ ಮೇಕಪ್ ಆರ್ಟಿಸ್ಟ್ ಒಬ್ಬರಿಗೆ ಸಾವಿರಾರು ರೂ. ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಹೊಸಕೆರೆಹಳ್ಳಿ ನಿವಾಸಿ ಪ್ರೀತಿ ಎಂಬವರು ದಕ್ಷಿಣ ವಿಭಾಗದ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕೃತ್ಯ ಎಸಗಿದ ಆರೋಪಿ ದಿನೇಶ್ ಎಂಬಾತ ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದರು. ಮೇಕಪ್ ಆರ್ಟಿಸ್ಟ್ ಆಗಿರುವ ಪ್ರೀತಿ ಅವರಿಗೆ ಕೆಲ ದಿನಗಳ ಹಿಂದೆ ಆರೋಪಿ ಕರೆ ಮಾಡಿದ್ದಾನೆ. ಈ ವೇಳೆ ನಾವು ವೆರಿಫೈಡ್ ಪೇಜ್ ನಿಂದ ಕರೆ ಮಾಡುತ್ತಿದ್ದೇವೆ ಎಂದು ಪರಿಚಯಿಸಿಕೊಂಡಿದ್ದಾನೆ. ಪೇಜ್ ನ ಸ್ಕ್ರೀನ್ ಶಾಟ್ ಅನ್ನು ಮಹಿಳೆಗೆ ಕಳುಹಿಸಿದ್ದಾನೆ.
ಅಲ್ಲದೆ, ಗೋವಾದಲ್ಲಿ ಕಾರ್ಯಕ್ರಮವೊಂದು ಆಯೋಜಿಸಿದ್ದು, ಗಾಯಕಿ ನೇಹಾ ಕಕ್ಕರ್ ಸೇರಿ ಹಲವು ನಟರು ಪಾಲ್ಗೊಳ್ಳಲಿದ್ದಾರೆ. ಪ್ರತಿಯೊಬ್ಬರಿಗೂ ಮೇಕಪ್ ಮಾಡಬೇಕು. ಅದರ ಸಂಪೂರ್ಣ ವೆಚ್ಚ ಪಾವತಿಸುತ್ತೇವೆ ಎಂದು ನಂಬಿಸಿದ್ದಾನೆ. ಹೀಗಾಗಿ ಪ್ರೀತಿ ಅವರೇ ವಿಮಾನ ಟಿಕೆಟ್ ಕಾಯ್ದಿರಿಸಲು 20 ಸಾವಿರ ರೂ. ಹಣವನ್ನು ಆರೋಪಿಗೆ ಗೂಗಲ್ ಪೇ ಮೂಲಕ ಕಳುಹಿಸಿದ್ದಾರೆ.
ಆದರೆ, ಆರೋಪಿ ನಕಲಿ ಟಿಕೆಟ್ ಕಳುಹಿಸಿ ವಂಚಿಸಿದ್ದಾನೆ. ಆ ನಂತರ ಪರಿಶೀಲಿಸಿದಾಗ ವಂಚನೆ ಗೊತ್ತಾಗಿದೆ ಎಂದು ಪ್ರೀತಿ ದೂರಿನಲ್ಲಿ ಉಲ್ಲೇಖೀಸಿದ್ದಾರೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ
Udupi; ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ರಮೇಶ್ ಕಾಂಚನ್ ಆಯ್ಕೆ
Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ
Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ
Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.