![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Nov 13, 2022, 3:45 PM IST
ಬೆಂಗಳೂರು: ನಗರ ವಾಹನ ನಿಲುಗಡೆ ಸಮಸ್ಯೆ ನೀಗಿಸುವ ಸಲುವಾಗಿ 723 ರಸ್ತೆಗಳಲ್ಲಿ ಪೇ ಆ್ಯಂಡ್ ಪಾರ್ಕಿಂಗ್ ವ್ಯವಸ್ಥೆ ಜಾರಿ ಮಾಡಲಾಗುತ್ತಿದೆ. ಆ ರಸ್ತೆಗಳಲ್ಲಿ ಗುತ್ತಿಗೆದಾರರ ಬದಲು ಬಿಬಿಎಂಪಿಯಿಂದಲೇ ವಾಹನ ನಿಲುಗಡೆಗೆ ಅಗತ್ಯ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ.
ನಗರದಲ್ಲಿ 1 ಕೋಟಿಗೂ ಹೆಚ್ಚಿನ ವಾಹನಗಳಿವೆ. ಹೀಗಾಗಿ ಸಂಚಾರ ದಟ್ಟಣೆಯ ಜತೆಗೆ ವಾಹನ ನಿಲುಗಡೆಗೂ ಸಾಕಷ್ಟು ಸಮಸ್ಯೆಯಾ ಗುತ್ತಿದೆ. ಇದರ ನಿವಾರಣೆಗಾಗಿ ಬಿಬಿಎಂಪಿ ನಗರದ 723 ರಸ್ತೆಗಳಲ್ಲಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ ಜಾರಿಗೊಳಿಸಲಾಗುತ್ತಿದೆ. ಆದರೆ, ಈ ವ್ಯವಸ್ಥೆ ಜಾರಿ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಕರೆಯಲಾಗಿದ್ದ ಟೆಂಡರ್‌ನಲ್ಲಿ ಸಂಪೂರ್ಣವಾಗಿ ಬಿಡ್ ಸಲ್ಲಿಕೆಯಾಗಿರಲಿಲ್ಲ. ಹೀಗಾಗಿ ಮರು ಟೆಂಡರ್ ಕರೆಯಲು ಬಿಬಿಎಂಪಿ ಸಿದ್ಧತೆ ನಡೆಸಿದೆ. ಹೀಗೆ ರಸ್ತೆಗಳಲ್ಲಿ ವಾಹನ ನಿಲುಗಡೆಗೆ ಸಂಬಂಧಿಸಿದಂತೆ ವ್ಯವಸ್ಥೆ ಮಾಡುವುದು ಹಾಗೂ ಶುಲ್ಕ ವಸೂಲಿ ಸೇರಿ ನಿರ್ವಹಣೆಗೆ ಗುತ್ತಿಗೆದಾರರನ್ನು ನೇಮಿಸು ವವರೆಗೆ ನಿಗದಿತ ರಸ್ತೆಗಳಲ್ಲಿ ಉಚಿತವಾಗಿ ವಾಹನ ನಿಲುಗಡೆಗೆ ಅವಕಾಶ ನೀಡಲಾಗುತ್ತಿದೆ.
ಆಟೋ, ಸೈಕಲ್ ನಿಲ್ಲಿಸಲೂ ವ್ಯವಸ್ಥೆ: 8 ವಲಯಗಳಲ್ಲಿ ಎ, ಬಿ ಮತ್ತು ಸಿ ಎಂದು ರಸ್ತೆಗಳನ್ನು ವಿಭಾಗಿಸಿ ವಾಹನ ನಿಲುಗಡೆಗೆ ಅವಕಾಶ ಕಲ್ಪಿಸಲಾಗುತ್ತಿದೆ. ಅದರಲ್ಲಿ ಎ ವಿಭಾಗದ ರಸ್ತೆಗಳಲ್ಲಿ ಕೇವಲ ಕಾರುಗಳ ನಿಲುಗಡೆ ಮಾತ್ರ ಅವಕಾಶ ನೀಡಲಾಗುತ್ತಿದೆ. ಉಳಿದಂತೆ ಬಿ ಮತ್ತು ಸಿ ರಸ್ತೆಗಳಲ್ಲಿ ದ್ವಿಚಕ್ರ ವಾಹನ, ಕಾರುಗಳ ನಿಲುಗಡೆಗೆ ಅವಕಾಶ ಕೊಡಲಾಗುತ್ತಿದೆ. ಅವುಗಳ ಜತೆಗೆ ಸೈಕಲ್, ಆಟೋ ನಿಲುಗಡೆಗೆ ಸ್ಥಳ ಮೀಸಲಿರಿಸಲಾಗುತ್ತಿದೆ. ಹೀಗೆ ಪೇ ಆ್ಯಂಡ್ ಪಾರ್ಕಿಂಗ್ ವ್ಯವಸ್ಥೆಯಿಂದ 723 ರಸ್ತೆಗಳಲ್ಲಿ 16 ಸಾವಿರಕ್ಕೂ ಹೆಚ್ಚಿನ ದ್ವಿಚಕ್ರ ಮತ್ತು 5 ಸಾವಿರಕ್ಕೂ ಹೆಚ್ಚಿನ ಕಾರುಗಳ ನಿಲುಗಡೆಗೆ ಸ್ಥಳಾವಕಾಶ ಸಿಗಲಿದೆ. ಆ ಮೂಲಕ ಎಲ್ಲೆಂ ದರಲ್ಲಿ ವಾಹನ ನಿಲುಗಡೆ ಮಾಡುವುದಕ್ಕೆ ಬ್ರೇಕ್ ಹಾಕಲಾಗುತ್ತಿದೆ.
ಉಚಿತ ನಿಲುಗಡೆಗೆ ಅವಕಾಶ: ಸದ್ಯ ಬಿಬಿಎಂಪಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ ಜಾರಿ ಕುರಿತಂತೆ 8 ವಲಯಗಳಿಗೆ ಪ್ರತ್ಯೇಕ ಪ್ಯಾಕೇಜ್ ಗಳಂತೆ ಟೆಂಡರ್ ಪ್ರಕ್ರಿಯೆ ನಡೆಸಿದೆ. ಅದರೆ, ಗುತ್ತಿಗೆದಾರರಿಂದ ಸಮರ್ಪಕ ಬಿಡ್ ಸಲ್ಲಿಕೆ ಯಾಗಿರಲಿಲ್ಲ. ಹೀಗಾಗಿ ಮರು ಟೆಂಡರ್ ನಡೆಸಲು ಬಿಬಿಎಂಪಿ ನಿರ್ಧರಿಸಿದೆ. ಹೀಗೆ ಗುತ್ತಿಗೆದಾರರ ನೇಮಕ ವಿಳಂಬವಾಗುತ್ತಿರುವ ಕಾರಣ, ನಿಗದಿತ ರಸ್ತೆಗಳಲ್ಲಿ ಬಿಬಿಎಂಪಿ ಯಿಂದಲೇ ವಾಹನ ನಿಲುಗಡೆಗೆ ಮಾರ್ಕಿಂಗ್ ಸೇರಿ ಇನ್ನಿತರ ವ್ಯವಸ್ಥೆ ಮಾಡಲಾಗುತ್ತಿದೆ. ಅಲ್ಲದೆ ಈ ರಸ್ತೆಗಳಲ್ಲಿ ವಾಹನಗಳನ್ನು ನಿಲ್ಲಿಸಿದರೆ ಯಾವುದೇ ಶುಲ್ಕ ವಸೂಲಿ ಮಾಡದಿರಲು ಬಿಬಿಎಂಪಿ ನಿರ್ಧರಿಸಿದೆ. ಅದರೆ, ಗುತ್ತಿಗೆದಾರರು ನೇಮಕವಾದ ನಂತರದಿಂದ ವಾಹನ ನಿಲುಗಡೆಗೆ ಶುಲ್ಕ ವಸೂಲಿ ಮಾಡಲಾಗುತ್ತದೆ.
ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ ಜಾರಿಗೆ ಸಂಬಂಧಿಸಿದಂತೆ ಗುತ್ತಿಗೆದಾರರ ನೇಮಕಕ್ಕೆ ಮತ್ತೂಮ್ಮೆ ಟೆಂಡರ್ ಪ್ರಕ್ರಿಯೆ ನಡೆಸಲಾಗುವುದು. ಗುತ್ತಿಗೆದಾರರು ನೇಮಕವಾಗುವವರೆಗೆ ನಿಗದಿತ ರಸ್ತೆಗಳಲ್ಲಿ ವಾಹನ ನಿಲುಗಡೆಗೆ ಬಿಬಿಎಂಪಿಯಿಂದಲೇ ಮಾರ್ಕಿಂಗ್ ಸೇರಿ ಇನ್ನಿತರ ವ್ಯವಸ್ಥೆ ಮಾಡಲಾಗುವುದು. ಜತೆಗೆ ವಾಹನ ನಿಲುಗಡೆ ಶುಲ್ಕ ವಸೂಲಿ ಮಾಡುವುದಿಲ್ಲ. ● ತುಷಾರ್ ಗಿರಿನಾಥ್, ಬಿಬಿಎಂಪಿ ಮುಖ್ಯ ಆಯುಕ್ತ
-ಗಿರೀಶ್ ಗರಗ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.