Ganesh Chaturthi: ಗಣೇಶ ಹಬ್ಬಕ್ಕೆ ವಸೂಲಿಗಿಳಿದರೆ ಜೋಕೆ: ಕಮಿಷನರ್‌

ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ಗಣೇಶ ಪ್ರತಿಷ್ಠಾಪಿಸಿ ; 30 ಅಂಶಗಳ ಮಾರ್ಗಸೂಚಿ ಹೊರಡಿಸಿದ ಪೊಲೀಸ್‌ ಇಲಾಖೆ

Team Udayavani, Aug 31, 2024, 10:56 AM IST

3-ganapa

ಬೆಂಗಳೂರು: ಗಣೇಶ ಹಬ್ಬಕ್ಕೆ ಬಲವಂತವಾಗಿ ಚಂದ ವಸೂಲಿ ಮಾಡಿದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಎಚ್ಚರಿಕೆ ಕೊಟ್ಟಿದ್ದಾರೆ.

ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಶುಕ್ರವಾರ ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಅವರು, ಸೆ.7ರಿಂದ ನಗರಾದ್ಯಂತ ಗೌರಿ-ಗಣೇಶ ಹಬ್ಬವನ್ನು ಆಚರಿಸುವ ಸಮಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ಸೂಚಿಸಿರುವ 30 ಅಂಶಗಳ ಮಾರ್ಗಸೂಚಿಯನ್ನು ಪ್ರತಿಯೊಬ್ಬರೂ ಪಾಲಿಸಬೇಕು. ಗಣೇಶ ವಿಗ್ರಹ ಪ್ರತಿಷ್ಠಾಪನೆ ಹಾಗೂ ಇತರೆ ಕಾರ್ಯಕ್ರಮಗಳ ಆಯೋಜನೆಗಾಗಿ ಬಲವಂತವಾಗಿ ಹಾಗೂ ಕಾನೂನು ಬಾಹಿರವಾಗಿ ವಂತಿಗೆಯನ್ನು ಸಂಗ್ರಹಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮಾರ್ಗಸೂಚಿಯಲ್ಲೇನಿದೆ?:

ಗಣೇಶ ಮೂರ್ತಿ ಯನ್ನು ಸಾರ್ವಜನಿಕ ಸ್ಥಳದಲ್ಲಿ ಪ್ರತಿಷ್ಠಾಪಿಸುವ ಮೊದಲು ಸಂಬಂಧಪಟ್ಟ ಪೊಲೀಸ್‌ ಠಾಣೆಯಿಂದ ಅನುಮತಿ ಪಡೆದು ಸಾರ್ವಜನಿಕರು ಮತ್ತು ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ಪ್ರತಿಷ್ಠಾಪಿಸಬೇಕು. ಸಾರ್ವಜನಿಕರು ಹಾಗೂ ವಾಹನ ಸಂಚಾರ ಒತ್ತಡವಿರುವ ರಸ್ತೆಗಳಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶವಿಲ್ಲ.

 ಗಣೇಶ ವಿಗ್ರಹ ಪ್ರತಿಷ್ಠಾಪನೆ ಹಾಗೂ ಇತರೆ ಕಾರ್ಯಕ್ರಮಗಳ ಆಯೋಜನೆಗಾಗಿ ಬಲವಂತವಾಗಿ ವಂತಿಗೆ ಸಂಗ್ರಹಿಸುವಂತಿಲ್ಲ. ಮೂರ್ತಿ ಪ್ರತಿಷ್ಠಾಪಿಸುವ ಸಾರ್ವಜನಿಕ ಸ್ಥಳದಲ್ಲಿ ಚಪ್ಪರ, ಶಾಮಿಯಾನಗಳನ್ನು ಬಂದೋಬಸ್ತಾಗಿ ನಿರ್ಮಿಸಬೇಕು. ಈ ಬಗ್ಗೆ ಪರವಾನಗಿ ಪಡೆಯಯಬೇಕು.

 ಯಾವುದೇ ಕಾರಣಕ್ಕೂ ವಿವಾದಿತ ಸ್ಥಳದಲ್ಲಿ ಪ್ರತಿಷ್ಠಾಪಿಸಬಾರದು. ಪ್ರತಿಷ್ಠಾಪಿಸುವ ಸ್ಥಳದ ಮಾಲೀಕರ ಅನುಮತಿ ಪಡೆದು ಮಾಹಿತಿಯನ್ನು ಪೊಲೀಸ್‌ ಠಾಣೆಗೆ ನೀಡಬೇಕು.

 ಪ್ಲೆಕ್ಸ್‌, ಬ್ಯಾನರ್‌ಗಳ ಸಂಬಂಧ ಬಿಬಿಎಂಪಿ ಮಾರ್ಗಸೂಚಿ ಪಾಲಿಸಬೇಕು. ಗಣೇಶ ವಿಗ್ರಹಗಳ ಕುರಿತು ಕೆಎಸ್‌ಪಿಸಿಬಿ ಹೊರಡಿಸಿರುವ ಮಾರ್ಗಸೂಚಿ ಪಾಲಿಸತಕ್ಕದ್ದು. ಗಣೇಶ ಪ್ರತಿಷ್ಠಾಪಿಸಿದ ಸ್ಥಳದಲ್ಲಿ ಆಯೋಜಕರ ಪರವಾಗಿ ಇಬ್ಬರು ಜವಾಬ್ದಾರಿಯುತ ಕಾರ್ಯಕರ್ತರು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ದಿನದ 24 ಗಂಟೆಗಳ ಕಾಲ ಇರುವಂತೆ ನೋಡಿಕೊಳ್ಳುವುದು.

 ಆಯೋಜಕರು ಸ್ಥಳದಲ್ಲಿ ಸಿಸಿ ಕ್ಯಾಮೆರಾ ಅಳವಡಿಸಬೇಕು, ಸ್ಥಳಗಳಲ್ಲಿ ಬೆಂಕಿ ನಂದಿಸುವ ಸಾಮಗ್ರಿಗಳನ್ನು ಸ್ಥಳೀಯ ಪೊಲೀಸ್‌ ಠಾಣೆ¿ಮತ್ತು ಅಗ್ನಿಶಾಮಕ ದಳದ ದೂರವಾಣಿ ಸಂಖ್ಯೆ ಹಾಗೂ ಪದಾಧಿಕಾರಿಗಳ ಮೊಬೈಲ್‌ ಸಂಖ್ಯೆಗಳನ್ನು ನಮೂದಿಸಿ ಪ್ರದರ್ಶಿಸಬೇಕು. ಬೆಂಕಿ ನಂದಿಸುವ ಸಾಮಗ್ರಿಗಳನ್ನು ಅಳವಡಿಸಿಕೊಳ್ಳಬೇಕು.

 ಗಣೇಶ ಪ್ರತಿಷ್ಠಾಪನಾ ಸ್ಥಳದಲ್ಲಿ ಹಾಗೂ ಸುತ್ತಮುತ್ತ ಯಾವುದೇ ಅಡುಗೆ ಮಾಡುವ ಕಟ್ಟಿಗೆ, ಉರುವಲು, ಸೀಮೆಎಣ್ಣೆ ಸಾಧನಗಳನ್ನು ಇಡಬಾರದು. ಅಡುಗೆ ಮಾಡಬಾರದು. ವಿದ್ಯುತ್‌ ಮತ್ತು ಅಲಂಕಾರಕ್ಕೆ ಸಂಬಂಧಿಸಿದಂತೆ ವೈರಿಂಗ್‌ ಬಗ್ಗೆ ಬೆಸ್ಕಾಂನಿಂದ ಅನುಮತಿ ಪಡೆಯಬೇಕು. ಅಗ್ನಿಶಾಮಕ ದಳ ಹಾಗೂ ಸಂಚಾರ ಪೊಲೀಸರಿಂದ ಎನ್‌ಒಸಿ ಪಡೆಯಬೇಕು.

 ಗಣೇಶ ಮೂರ್ತಿ ಪ್ರತಿಷಷ್ಠಾಪನಾ ಸ್ಥಳದಲ್ಲಿ ದಿನದ 24 ಗಂಟೆ ಸಮರ್ಪಕ ಬೆಳಕು ಇರುವಂತೆ ನೋಡಿಕೊಳ್ಳ ಬೇಕು. ಹಿರಿಯ ನಾಗಕರಿಕರಿಗೆ ಶಾಲಾ ಮಕ್ಕಳಿಗೆ ಹಾಗೂ ಇತರರಿಗೆ ತೊಂದರೆಯಾಗದಂತೆ ಧ್ವನಿವರ್ಧಕಗಳನ್ನು ಬೆಳಗ್ಗೆ 6 ಗಂಟೆಯಿಂದ ರಾತ್ರಿ 10ಗಂಟೆಯವರೆಗೆ ಮಾತ್ರ ಬಳಸಿಕೊಳ್ಳಲು ಸ್ಥಳೀಯ ಪೊಲೀಸರ ಅನುಮತಿ / ಪರವಾನಗಿ ಪಡೆಯಬೇಕು. ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಧ್ವನಿವರ್ಧಕಗಳಿಂದ ಹೊರಡುವ ಶಬ್ದದ ಪ್ರಮಾಣವನ್ನು ಕಡಿಮೆ ಮಟ್ಟದಲ್ಲಿ ಇಟ್ಟುಕೊಳ್ಳಬೇಕು. ಯಾವುದೇ ಕಾರಣಕ್ಕೂ ಡಿ.ಜೆ. ಸೌಂಡ್‌ ಸಿಸ್ಟಂ ಅಳವಡಿಸಲು ಅವಕಾಶ ಇರುವುದಿಲ್ಲ.

ಆಯೋಜಕರ ಜವಾಬ್ದಾರಿಗಳು

 ಆಯೋಜಕರು ಗಣೇಶ ಪ್ರತಿಷ್ಠಾಪನ ಸ್ಥಳಕ್ಕೆ ಆಗಮಿಸುವ ಸಾರ್ವಜನಿಕರಿಗೋಸ್ಕರ ಸಮರ್ಪಕವಾಗಿ ಆಗಮನ ಮತ್ತು ನಿರ್ಗಮನದ ವ್ಯವಸ್ಥೆಯನ್ನು ಮಾಡುವುದರ ಜೊತೆಗೆ ಜನಸಂದಣಿಯನ್ನು ನಿಯಂತ್ರಿಸುವ ಬಗ್ಗೆ ಬ್ಯಾರಿಕೇಡ್‌ಗಳನ್ನು ನಿರ್ಮಿಸಬೇಕು. ಸ್ವಯಂ ಸೇವಕರನ್ನು ನೇಮಿಸಿಕೊಂಡು ಜನದಟ್ಟಣೆಗೆ ಆಸ್ಪದ ನೀಡಬಾರದು. ಗಣೇಶ ವಿಗ್ರಹ ಪ್ರತಿಷ್ಠಾಪನೆಯ ಪರಿಕರಗಳ ರಕ್ಷಣೆಗಾಗಿ ಕಾರ್ಯಕ್ರಮಗಳನ್ನು ಆಯೋಜಿಸುವವರೆ ಜವಾಬ್ದಾರರಾಗಿರುತ್ತಾರೆ.

 ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನಾ ಮೆರವಣಿಗೆ ಸಮಯದಲ್ಲಿ ಯಾವುದೇ ಅಪರಾಧಗಳು ನಡೆಯದಂತೆ ಗಮನಹರಿಸಬೇಕು. ಮೆರವಣಿಗೆ ಸಮಯದಲ್ಲಿ ಯಾವುದೇ ಅಪರಾಧಗಳು ನಡೆದರೆ ಆಯೋಜಕರೇ ಹೊಣೆ.

 ಗಣೇಶ ಮೂರ್ತಿ ಪ್ರತಿಷ್ಠಾಪನೆ, ಮನರಂಜನಾ ಕಾರ್ಯಕ್ರಮ, ಮೆರವಣಿಗೆ ಮತ್ತು ವಿಸರ್ಜನಾ ಸ್ಥಳಗಳಲ್ಲಿ ಹೆಣ್ಣುಮಕ್ಕಳನ್ನು ಚುಡಾಯಿಸುವುದು ಹಾಗೂ ಕೀಟಲೆ ಮಾಡದಂತೆ ನೋಡಿಕೊಳ್ಳಬೇಕು.

 ಗಣೇಶ ಮೂರ್ತಿ ಪ್ರತಿಷ್ಠಾಪನ ಮಂಡಳಿಯ ಸಂಘಟಕರು ತಮ್ಮ ಮಂಡಳಿಯ ಅಧ್ಯಕ್ಷ, ಕಾರ್ಯದರ್ಶಿ ಮತ್ತು ಇತರ ಪದಾಧಿಕಾರಿಗಳ ಹೆಸರು, ವಿಳಾಸ ಮತ್ತು ದೂರವಾಣಿ ಸಂಖ್ಯೆಯನ್ನು ಸಂಬಂಧಪಟ್ಟ ಠಾಣಾಧಿಕಾರಿಗಳಿಗೆ ಒದಗಿಸಬೇಕು.

ವಿಸರ್ಜನೆ ವೇಳೆ ಪಾಲಿಸಬೇಕಾದ ಕ್ರಮಗಳು

ನಗದರಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ಸಮಯದಲ್ಲಿ ಆಯೋಜಕರು ಸ್ವಯಂಸೇವಕರನ್ನು ಗುರುಸಲು ಅವರಿಗೆ ಗುರುತಿನ ಚೀಟಿ, ಬ್ಯಾಡ್ಜ್, ಟೀ-ಶರ್ಟ್‌ ಅಥವಾ ಕ್ಯಾಪ್‌ಗ್ಳನ್ನು ನೀಡಿ, ಅವರುಗಳನ್ನು ಗುರುತಿಸಲು ಕ್ರಮ ಕೈಗೊಂಡು, ಮೆರವಣಿಗೆ ಶಾಂತರೀತಿಯಲ್ಲಿ ವಿಸರ್ಜನಾ ಸ್ಥಳಕ್ಕೆ ಹೋಗಲು ಅನುವು ಮಾಡಿಕೊಡಲು ಕೋರಲಾಗಿದೆ.

ಗಣೇಶ ಪ್ರತಿಷ್ಠಾಪನಾ ಸ್ಥಳದಲ್ಲಿ ಏನಾದರೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವುದಿದ್ದಲ್ಲಿ ಸಂಬಂಧಪಟ್ಟ ಪೊಲೀಸ್‌ ಠಾಣೆಗೆ ಮುಂಚಿತವಾಗಿ ಮಾಹಿತಿ ನೀಡಿ ಸೂಕ್ತ ಬಂದೋಬಸ್ತ್ ಮಾಡಿಕೊಳ್ಳಲು ಸ್ಥಳೀಯ ಪೊಲೀಸರೊಂದಿಗೆ ಕಾರ್ಯಕ್ರಮ ಆಯೋಜಕರು ಸಹಕಾರ ನೀಡಬೇಕು.

ಗಣೇಶ ಮೂರ್ತಿ ಮೆರವಣಿಗೆಯು ಸೂಕ್ಷ್ಮ ಸ್ಥಳ, ಅತೀ ಸೂಕ್ಷ್ಮಸ್ಥಳ ಹಾಗೂ ಪ್ರಾರ್ಥನಾ ಸ್ಥಳಗಳ ಮುಂಭಾಗದಲ್ಲಿ ಸಾಗುವಾಗ ಸಿಡಿಮದ್ದು, ಪಟಾಕಿಗಳನ್ನು ಸಿಡಿಸದಂತೆ ಹಾಗೂ ಕರ್ಪೂರಗಳನ್ನು ಹಚ್ಚಬಾರದು.

ಗಣೇಶ ವಿಸರ್ಜನೆ ಮೆರವಣಿಗೆ ಸಂಬಂಧ ಯಾವುದೇ ಕಾರಣಕ್ಕೂ ಮೆರವಣಿಗೆ ಮಾರ್ಗಗಳನ್ನು ಬದಲಾಯಿಸಬಾರದು, ಮಾರ್ಗಗಳನ್ನು ಬದಲಾಯಿಸಿದ್ದಲ್ಲಿ ಆಯೋಜಕರನ್ನೇ ಹೊಣೆಗಾರರನ್ನಾಗಿ ಮಾಡಿ ಕಾನೂನು ರೀತಿಯಲ್ಲಿ ಕಠಿಣ ಕ್ರಮಗಳನ್ನು ಜರುಗಿಸಲಾಗುವುದು.

ಗಣೇಶ ವಿಸರ್ಜನೆ ಸಂಬಂಧ ಮೆರವಣಿಗೆಯು ರಾತ್ರಿ 10ಗಂಟೆಯೊಳಗೆ ಮುಗಿಯುವಂತೆ ಆಯೋಜಕರು ನೋಡಿಕೊಳ್ಳಬೇಕು. ಮೆರವಣಿಗೆ ಸಮಯದಲ್ಲಿ ಎಲೆಕ್ಟ್ರಿಕ್‌ಕಲ್‌ ವೈರುಗಳು, ಮರದ ಕೊಂಬೆಗಳ ಬಗ್ಗೆ ಗಮನಹರಿಸಿ, ವಿಸರ್ಜನಾ ಮೆರವಣಿಗೆ ಸುಸೂತ್ರವಾಗಿ ಹೋಗಲು ಮುಂಜಾಗ್ರತಾ ಕ್ರಮಗಳನ್ನು ಸಂಬಂಧ ಪಟ್ಟ ಇಲಾಖೆಯವರಿಂದ (ಅರಣ್ಯ ಮತ್ತು ಕೆ.ಇ.ಬಿ) ಪಡೆದುಕೊಳ್ಳಬೇಕು.

ಟಾಪ್ ನ್ಯೂಸ್

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್‌, ಮತ್ತಿಬ್ಬರ ಮೇಲೆ ಕೇಸ್‌

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ

Bengaluru: ಸೆಂಟ್ರಿಂಗ್‌ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

Bengaluru: ಸೆಂಟ್ರಿಂಗ್‌ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.