Ganesha ಉತ್ಸವ: ತೀರ್ಮಾನ ಡೀಸಿ ಅಂಗಳಕ್ಕೆ
ಚಾಮರಾಜಪೇಟೆ ಮೈದಾನದಲ್ಲಿ ಉತ್ಸವ ನಡೆಸಲು ಕೋರಿಕೆ
Team Udayavani, Sep 21, 2023, 7:45 AM IST
ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಉತ್ಸವ ಆಚರಿಸುವ ಸಂಬಂಧ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಸಲ್ಲಿಸಿರುವ ಮನವಿ ಬಗ್ಗೆ ಏನಾದರೊಂದು ತೀರ್ಮಾನ ಕೈಗೊಳ್ಳಿ ಎಂದು ನಗರ ಜಿಲ್ಲಾಧಿಕಾರಿಗಳಿಗೆ ಹೈಕೋರ್ಟ್ ಮೌಖಿಕವಾಗಿ ಹೇಳಿದೆ.
ಈ ವಿಚಾರವಾಗಿ ಚಾಮರಾಜಪೇಟೆ ನಾಗರಿಕರ ಒಕ್ಕೂಟದ ಪರ ವಕೀಲ ಶ್ರೀಧರಪ್ರಭು, ಬುಧವಾರ ಕೋರ್ಟ್ ಕಲಾಪ ಆರಂಭವಾಗು ತ್ತಿದ್ದಂತೆ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ ಹಾಗೂ ನ್ಯಾ. ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಹಾಜರಾಗಿ, ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಪರಿಗಣಿಸಬೇಕು ಎಂದು ಕೋರಿದರು.
ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಗಣೇಶ ಚತುರ್ಥಿ ಮುಗಿದು ಎರಡು ದಿನ ಆಗಿದೆ. ಸೆ.18 ರಂದು ಹಬ್ಬ ಇದೆ ಎಂದು ಬಹಳ ಹಿಂದೆಯೇ ದಿನ ನಿಗದಿಯಾಗಿತ್ತು. ಈ ವಿಚಾರ ನಿಮಗೆ ಗೊತ್ತಿ ರಲಿಲ್ಲ ಎಂದು ಹೇಳುವಂತಿಲ್ಲ. ಅಧಿಕ ಮಾಸದ ಕಾರಣಕ್ಕೆ ಕೆಲವು ಕಡೆ ಸೆ.19ಕ್ಕೆ ಹಬ್ಬ ಆಚರಿಸ ಲಾಗಿದೆ. ಏನೇ ಇರಲಿ ಹಬ್ಬ ಮುಗಿದ ಎರಡು ದಿನಗಳ ನಂತರ ವಿಳಂಬವಾಗಿ ಕೋರ್ಟ್‌ಗೆ ಯಾಕೆ ಬಂದಿದಿರಿ, ಮುಂಚಿತವಾಗಿ ಬಂದಿದ್ದರೆ ಏನಾದರೊಂದು ಪರಿಹಾರ ಸೂಚಿಸಬಹುದಿತ್ತು ಎಂದು ಒಕ್ಕೂಟದ ಪರ ವಕೀಲರನ್ನು ಪ್ರಶ್ನಿಸಿತು.
ನಾವು ಆಚರಿಸುತ್ತಿರುವುದು ಸಾರ್ವಜನಿಕ ಗಣೇಶ ಉತ್ಸವ. ವಿವಿಧತೆಯಲ್ಲಿ ಏಕತೆಯ ಸಂದೇಶ ಸಾರುವುದು ನಮ್ಮ ಉದ್ದೇಶವಾಗಿದೆ. ಕನ್ನಡ ರಾಜ್ಯೋತ್ಸವ ನವೆಂಬರ್ 1ಕ್ಕೆ ಇರುತ್ತದೆ. ಆದರೆ, ತಿಂಗಳಿಡೀ ಆಚರಿಸಲಾಗುತ್ತದೆ. ಅದೇ ರೀತಿ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಸೆ.22ರಿಂದ 24ರವರೆಗೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಚರಿಸಲು ನಿರ್ಧರಿಸಿದೆ ಎಂದು ವಕೀಲರು ನ್ಯಾಯ ಪೀಠಕ್ಕೆ ಮನವರಿಕೆ ಮಾಡಿಕೊಟ್ಟರು. ನಿಮ್ಮ ಉದ್ದೇಶ ಒಳ್ಳೆಯದಾಗಿರಬಹುದು, ಆದರೆ, ತಡವಾಗಿ ನೀವು ಕೋರ್ಟ್‌ಗೆ ಬಂದಿದಿರಿ. ಅಷ್ಟಕ್ಕೂ ಖಾಸಗಿ ವ್ಯಕ್ತಿಗಳಿಗೆ, ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ದಿನ ಬೇರೆ-ಬೇರೆ ಇರಲ್ಲ. ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ಸಂಪ್ರದಾಯ ನಮ್ಮ ದೇಶದಲ್ಲಿ ಸುಮಾರು 80 ವರ್ಷಗಳಿಂದ ನಡೆದುಕೊಂಡು ಬಂದಿರುವುದು ಗಮನಾರ್ಹ ಎಂದು ನ್ಯಾಯಪೀಠ ಹೇಳಿತು.
ಕೊನೆಗೆ ಇದಕ್ಕಾಗಿ ಸಕ್ಷಮ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದ್ದೀರಾ ಎಂದು ವಕೀಲರನ್ನು ನ್ಯಾಯಪೀಠ ಪ್ರಶ್ನಿಸಿತು. ನಗರ ಜಿಲ್ಲಾಧಿಕಾರಿಗಳಿಗೆ ಸೆ.13ರಂದು ಮನವಿ ಕೊಡಲಾಗಿದೆ. ಆದರೆ, ಈವರೆಗೆ ಯಾವುದೇ ಕ್ರಮ ಆಗಿಲ್ಲ ಎಂದು ವಕೀಲರು ತಿಳಿಸಿದರು. ಆಗಲಿ, ನಿಮ್ಮ ಮನವಿ ಸರ್ಕಾರಿ ವಕೀಲರಿಗೆ ಕೊಡಿ ಅವರು, ನಗರ ಜಿಲ್ಲಾಧಿಕಾರಿ ಜತೆ ಚರ್ಚಿಸಿ ಏನಾದರೊಂದು ತೀರ್ಮಾನವನ್ನು ನಿಮಗೆ ತಿಳಿಸುತ್ತಾರೆ ಎಂದು ಒಕ್ಕೂಟದ ಪರ ವಕೀಲರಿಗೆ ನ್ಯಾಯಪೀಠ ಮೌಖಿಕವಾಗಿ ಹೇಳಿತು.
ಅರ್ಜಿಯಲ್ಲಿ ಏನಿದೆ? ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ದಸರಾ, ಶಿವರಾತ್ರಿ, ಗಣೇಶ ಉತ್ಸವ, ಕನ್ನಡ ರಾಜ್ಯೋತ್ಸವ, ಕ್ರೀಡೆಗಳು ಆಯೋಜಿಸುವ ಸಂಬಂಧ 2006ರ ಸೆ.19ರಂದು ಅಂದಿನ ಸಚಿವರು, ಶಾಸಕರು ಪಾಲಿಕೆ ಸದಸ್ಯರು, ವಿವಿಧ ಪಕ್ಷಗಳ ಮುಖಂಡರ ಸಮಕ್ಷಮ ಚಾಮರಾಜಪೇಟೆ ಸಹಾಯಕ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಒಮ್ಮತದ ನಿರ್ಣಯ ಕೈಗೊಳ್ಳಲಾಗಿತ್ತು. ಅಲ್ಲದೇ 2022ರ ಆ.25ರಂದು ಈ ಮೈದಾನದಲ್ಲಿ ಸ್ವಾತಂತ್ರೋತ್ಸವ ಆಚರಣೆಗೆ ಸರ್ಕಾರ ಮತ್ತು ಬಿಬಿಎಂಪಿಗೆ ಅವಕಾಶ ನೀಡಿದ್ದ ಹೈಕೋರ್ಟ್, ಆಟದ ಮೈದಾನ ಮತ್ತು ಮುಸ್ಲಿಂ ಸಮುದಾಯಕ್ಕೆ ವರ್ಷದಲ್ಲಿ ಎರಡು ಬಾರಿ (ರಂಜಾನ್ ಮತ್ತು ಬಕ್ರೀದ್) ಹಬ್ಬದ ಪ್ರಾರ್ಥನೆಗೆ ಅವಕಾಶ ಮುಂದುವರಿಸುವಂತೆ ಆದೇಶ ನೀಡಿತ್ತು. ಈ ಆದೇಶವನ್ನು ಮಾರ್ಪಡಿಸಿದ್ದ ಹೈಕೋರ್ಟ್, ಈದ್ಗಾ ಮೈದಾನದಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಆಚರಣೆಗೆಗಳನ್ನು ಆಚರಿಸಲು ಅನುಮತಿ ನೀಡಿತ್ತು. ಇದನ್ನು ಪ್ರಶ್ನಿಸಿ ಸೆಂಟ್ರಲ್ ಮುಸ್ಲಿಂ ಅಸೋಸಿಯೇಷನ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇತ್ಯರ್ತಪಡಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.