ಹಂಪಿ ಬೈ ನೈಟ್ ಯೋಜನೆಗೆ ಮರುಜೀವ
Team Udayavani, Jul 25, 2021, 10:00 PM IST
ಹೊಸಪೇಟೆ:ರಾತ್ರಿಯಲ್ಲಿ ಝಗಮಗಿಸುವ ವಿದ್ಯುತ್ ಬೆಳಕಿನಲ್ಲಿ ಹಂಪಿ ಸೊಬಗನ್ನು ಕಣ್ತುಂಬಿಕೊಳ್ಳುವ ಹಂಪಿಬೈ ನೈಟ್ ಯೋಜನೆಗೆ ಮರು ಜೀವ ಬಂದಿದೆ.
ವಿಶ್ವ ಪರಂಪರೆ ತಾಣ ಹಂಪಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ರೂಪಿಸಿರುವ ಹಂಪಿಬೈ ನೈಟ್ ಯೋಜನೆಗೆ ಹಂಪಿ ಎದುರು ಬಸವಣ್ಣ ಮಂಟಪ ಹತ್ತಿರ ಭಾನುವಾರ ರಾತ್ರಿ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ ಅವರ ನೇತೃತ್ವದಲ್ಲಿ ಹಂಪಿಬೈ ನೈಟ್ ಪ್ರಾಯೋಗಿಕ ಕಾರ್ಯಕ್ರಮ ನಡೆಯಿತು.
ವಾಲಿ ಸುಗ್ರೀವ ಕಥಾ ಹಂದರವುಳ್ಳ ಕಾರ್ಯಕ್ರಮ ವಿದ್ಯುದೀಪಾಲಂಕಾರದಲ್ಲಿ ಪ್ರಸ್ತುತ ಪಡಿಸಲಾಯಿತು. ಹಂಪಿ ಬೈನೈಟ್ ಕಾರ್ಯಕ್ರಮದ ಮೂಲಕ ಹಂಪಿಗೆ ಪ್ರವಾಸಿಗರನ್ನು ಸೆಳೆಯುವ ಯೋಜನೆಯನ್ನು ಹಂಪಿ ಅಭಿವೃದ್ಧಿ ಪ್ರಾಧಿಕಾರ ಹಾಗೂ ಪ್ರವಾಸೋದ್ಯಮ ಇಲಾಖೆಗಳು ಜಂಟಿಯಾಗಿ ಈ ವಿನೂತನ ಕಾರ್ಯ ಕ್ರಮ ರೂಪಿಸಿದ್ದು, ಕೋವಿಡ್ ಹಿನ್ನೆಲೆ ಕಾರ್ಯಕ್ರಮದ ಸಾಕಾರ ವಿಳಂಬವಾಗಿತ್ತು.
ಇದನ್ನೂ ಓದಿ:ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ; ರಾಗ ಬದಲಿಸಿದ ನಾಯಕರು?
ಪ್ರಾಯೋಗಿಕವಾಗಿ ಕಾರ್ಯಕ್ರಮದ ವೀಕ್ಷಣೆ ಬಳಿಕ ಕೊಪ್ಪಳ ಹಾಗೂ ಬಳ್ಳಾರಿ- ವಿಜಯನಗರ ಜಿಲ್ಲಾಧಿಕಾರಿಗಳು ಟಿಕೆಟ್ ದರ ನಿಗದಿಪಡಿಸಲಿದ್ದಾರೆ. ಬಳಿಕ ಸರಕಾರ ಅಧಿಕೃತ ವಾಗಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಕೊಪ್ಪಳ ಜಿಲ್ಲಾಧಿಕಾರಿ ವಿಕಾಸ, ಪ್ರಾಧಿಕಾರದ ಆಯುಕ್ತ ಸಿದ್ದರಾಮೇಶ್ವರ ಸೇರಿದಂತೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hagaribommanahalli: ಹಳಿ ದಾಟುತ್ತಿರುವಾಗ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು
Deepawali; ಸರಣಿ ರಜೆ :ಹಂಪಿಯಲ್ಲಿ ಪ್ರವಾಸಿಗರ ದಂಡು, ಪರದಾಟ!
Hoskote: 16.50 ಲ.ರೂ. ಲಂಚ ಪಡೆಯುವಾಗ ಇಬ್ಬರು ಅಧಿಕಾರಿಗಳ ಸೆರೆ
Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ
Harapanahalli: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; ಮಹಿಳೆ ಸಾವು; ಹಲವರಿಗೆ ಗಂಭೀರ ಗಾಯ
MUST WATCH
ಹೊಸ ಸೇರ್ಪಡೆ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.