ಆರೋಗ್ಯ ಸಮಸ್ಯೆ: ಷರತ್ತುಬದ್ಧ ಗೃಹ ದಿಗ್ಬಂಧನ

Team Udayavani, May 17, 2020, 3:59 AM IST

sharattubadda

ಬೆಂಗಳೂರು: ನಗರಕ್ಕೆ ಹೊರ ರಾಜ್ಯದಿಂದ ಬಂದು ಕ್ವಾರಂಟೈನ್‌ ಆಗುವವರನ್ನು ಕ್ವಾರಂಟೈನ್‌ ಆದ 10ನೇ ದಿನ ಕೊರೊನಾ ಸೋಂಕು ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್‌.ಅನಿಲ್‌ಕುಮಾರ್‌  ತಿಳಿಸಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಆಯುಕ್ತರು, ಕ್ವಾರಂಟೈನ್‌ ಮಾಡಿದ 10ನೇ ದಿನ ಕೊರೊನಾ ಸೋಂಕು ಪರೀಕ್ಷೆಗೆ ಒಳಪಡಿಸಲಾಗುವುದು.

ಇವರು ಕಡ್ಡಾಯವಾಗಿ 14ದಿನಗಳ ಕಾಲ ಕ್ವಾರಂಟೈನ್‌ ನಲ್ಲಿ  ಇರಬೇಕು. ಉಳಿದಂತೆ ಗರ್ಭಿಣಿಯರು, 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು, 80 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ ದೀರ್ಘ‌ಕಾಲದಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ (ಕ್ಯಾನ್ಸರ್‌, ಉಸಿರಾಟದ ತೊಂದರೆ,  ಮೂತ್ರಪಿಂಡ ಸೋಂಕು ಅಥವಾ ಸಮಸ್ಯೆ) ಇದ್ದಲ್ಲಿ ಅವರನ್ನು ಮೊದಲ ಎರಡು ದಿನಗಳಲ್ಲಿ ಆದ್ಯತೆಯ ಮೇರೆಗೆ ಕೊರೊನಾ ಸೋಂಕು ಪರೀಕ್ಷೆಗೆ ಒಳಪಡಿಸಲಾಗುವುದು.

ಸೋಂಕು ದೃಢಪಡದೆ ಇದ್ದಲ್ಲಿ ಷರತ್ತುಗಳ ಅನ್ವಯ ಕಡ್ಡಾಯ  14ದಿನಗಳ ಹೋಂಕ್ವಾರಂಟೈನ್‌ಗೆ ಕಳುಹಿಸಲಾಗುವುದು. ಇವರು 10ರಿಂದ 12 ದಿನಗಳ ನಂತರ ಮತ್ತೆ ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಬೇಕು ಎಂದು ಮಾಹಿತಿ ನೀಡಿದರು.

ಪ್ರಮಾಣ ಪತ್ರಕ್ಕೆ ಸಹಿ: ಷರತ್ತಿನ ಆಧಾರದ ಮೇಲೆ ಹೋಂ ಕ್ವಾರಂಟೈನ್‌ನಲ್ಲಿರುವವರು 10ರಿಂದ 12ನೇ ದಿನಗಳ ಮಧ್ಯೆ ಕಡ್ಡಾಯವಾಗಿ ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗುತ್ತೇವೆ ಎಂದು ಪತ್ರಕ್ಕೆ ಸಹಿ ಹಾಕ  ಬೇಕು. ಈ ರೀತಿ ಪತ್ರಕ್ಕೆ  ಸಹಿ ಮಾಡಿಸಿಕೊಂಡೇ ಅವ ರನ್ನು ಕಳುಹಿಸಲಾಗುವುದು ಎಂದು ಬಿಬಿಎಂಪಿಯ ಆರೋಗ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹೈ ರಿಸ್ಕ್ ಪ್ರಕರಣ ಮಾತ್ರ ಕ್ವಾರಂಟೈನ್‌: ರಾಜ್ಯದಲ್ಲಿ ಕೊರೊನಾ ಪೀಡಿತರ ಪ್ರಕರಣಗಳು ಹೆಚ್ಚಾಗುತ್ತಿರುವದರಿಂದ ಸೋಂಕಿತ ವ್ಯಕ್ತಿಗೆ ಸಂಪರ್ಕಕ್ಕೆ ಬಂದವರ ಆರೋಗ್ಯ ತಪಾಸಣೆ ಮಾಡಿ ಅಗತ್ಯವಿದ್ದರೆ ಮಾತ್ರ ಕ್ವಾರಂಟೈನ್‌ ಗೆ ಒಳಪಡಿಸುವಂತೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೆದ್‌ ಅಕ್ತರ್‌ ಸುತ್ತೋಲೆ ಹೊರಡಿಸಿದ್ದಾರೆ. ಸೋಂಕಿತರ ಸಂಪರ್ಕಕ್ಕೆ ಬರುವ ವ್ಯಕ್ತಿಗಳನ್ನು ಲೊ ರಿಸ್ಕ್ ಹಾಗೂ ಹೈ ರಿಸ್ಕ್ ಎಂದು ಪ್ರತ್ಯೇಕಿಸಿ.ಹೈ ರಿಸ್ಕ್ ಇರುವ ಪ್ರಕರಣಗಳನ್ನು  ಮಾತ್ರ ಕ್ವಾರಂಟೈನ್‌ ಗೆ ಒಳಪಡಿಸುವಂತೆ ಸೂಚಿಸಿದ್ದಾರೆ.

ಟಾಪ್ ನ್ಯೂಸ್

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.