ರಾಜಧಾನಿಯಲ್ಲಿ ಗಂಟೆಗೊಬ್ಬರು ಸಾವು‌!


Team Udayavani, Jul 5, 2020, 5:53 AM IST

ajadhani-gante

ಬೆಂಗಳೂರು: ರಾಜಧಾನಿಯಲ್ಲಿ ಕೋವಿಡ್‌ 19  ರಣಕೇಕೆ ಮುಂದುವರಿದಿದ್ದು, ಗಂಟೆಗೆ ಒಬ್ಬರಂತೆ ಮೃತಪಡುತ್ತಿದ್ದಾರೆ. ನಗರದಲ್ಲಿ ಕಳೆದ 24 ಗಂಟೆಯಲ್ಲಿ 24 ಸೋಂಕಿತರು ಮೃತಪಟ್ಟಿದ್ದು, ರಾಜ್ಯದಲ್ಲಿಯೇ ದಾಖಲೆಯ ಸಾವು  ಸಂಭವಿಸಿವೆ. ಒಂದು ವಾರದಿಂದ ಸೋಂಕಿತರ ಸಂಖ್ಯೆ 500 ಗಡಿ ದಾಟುತ್ತಿದ್ದು, ಶನಿವಾರ ಏಕಾಏಕಿ 1172 ಮಂದಿಗೆ ಸೋಂಕು ದೃಢಪಟ್ಟಿದೆ.

ಈ ಮೂಲಕ ಸೋಂಕಿತರ ಸಂಖ್ಯೆ 8345 ಏರಿಕೆಯಾದಂತಾಗಿದೆ. 124 ಜನ ತೀವ್ರ ನಿಗಾ  ಘಟಕದಲ್ಲಿ ಚಿಕಿತ್ಸೆ ಪಡೆ ಯುತ್ತಿದ್ದು, ನಿಗದಿತ ಕೋವಿಡ್‌ 19 ಆಸ್ಪತ್ರೆ, ಆರೋಗ್ಯ ಕೇಂದ್ರ ಹಾಗೂ ಆರೈಕೆ ಕೇಂದ್ರಗಳಲ್ಲಿ 7,250 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೆ 129 ಜನ ಸೋಂಕಿಗೆ ಬಲಿಯಾಗಿದ್ದು, ಶನಿವಾರ 195  ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯ 31 ಜ್ವರ ಚಿಕಿತ್ಸಾಲಯಲ್ಲಿ ಒಟ್ಟು 1,88,960 ವ್ಯಕ್ತಿಗಳಿಗೆ ತಪಾಸಣೆ ಮಾಡಲಾಗಿದೆ. ಶನಿವಾರ ದೃಢಪಟ್ಟಿರುವ ಸೋಂಕಿತರಿಗೆ ಹೇಗೆ ಸೋಂಕು ಹರಡಿದೆ ಎಂಬ ಬಗ್ಗೆ  ಪಾಲಿಕೆ ಅಧಿಕಾರಿಗಳ ಬಳಿ ಮಾಹಿತಿಯೇ ಇಲ್ಲ. ಇಂತಹ ಸಂದಿಗಟಛಿ ಪರಿಸ್ಥಿತಿಯಲ್ಲಿ ಸೋಂಕಿತರ ಪ್ರಥಮ ಮತ್ತು ದ್ವಿತೀಯ ಸೋಂಕಿತರನ್ನು ಪತ್ತೆ ಹಚ್ಚುವುದೇ ಸವಾಲಾಗಿ ಪರಿಣಮಿಸಿದೆ.

ಧರ್ಮಗುರು ಬರ್ನಾರ್ಡ್‌ ಮೊರಸ್‌ಗೆ ಸೋಂಕು ದೃಢ: ಬೆಂಗಳೂರಿನ ವಿಶ್ರಾಂತ ಧರ್ಮಾಧ್ಯಕ್ಷರಾದ ಬರ್ನಾರ್ಡ್‌ ಮೊರಸ್‌ ಅವರಿಗೆ ಕೋವಿಡ್‌ 19 ಪಾಸಿಟಿವ್‌ ಬಂದ ಹಿನ್ನೆಲೆ ಸೇಂಟ್‌ ಜಾನ್ಸ್‌ ವೈದ್ಯಕೀಯ ಕಾಲೇಜಿನಲ್ಲಿ ದಾಖಲಿಸಲಾಗಿದೆ ಎಂದು ಆರ್ಚ್‌ ಡಿಯೋಸಿಸ್‌ ಆಫ್‌ ಬೆಂಗಳೂರು ಪ್ರಕಟಣೆ ಹೊರಡಿಸಿದೆ. ಬರ್ನಾರ್ಡ್‌ ಮೊರಸ್‌ ಅನಾರೋಗ್ಯದ ಹಿನ್ನೆಲೆ ಜು.2 ರಂದು ಸೇಂಟ್‌ ಜಾನ್ಸ್‌ ವೈದ್ಯಕೀಯ ಕಾಲೇಜಿಗೆ  ದಾಖಲಿಸಲಾಯಿತು. ಜು.3ರಂದು ಅವರಿಗೆ ಕೋವಿಡ್‌  ಲಕ್ಷಣ ಕಾಣಿಸಿಕೊಂಡಿದ್ದು  ವೈದ್ಯರು ಅವರ ಆರೋಗ್ಯ ಸ್ಥಿತಿ ಸಾಧಾರಣವಾಗಿದೆ ಎಂದಿದ್ದಾರೆ.

ಅಗ್ನಿಶಾಮಕ ದಳ ಸಿಬ್ಬಂದಿಗೆ ಸೋಂಕು: ಪೊಲೀಸ್‌ ಇಲಾಖೆ ಬಳಿಕ ಈಗ ಅಗ್ನಿಶಾಮಕ ದಳದ ಸಿಬ್ಬಂದಿಗೆ ಸೋಂಕು ಕಾಣಿಸಿಕೊಳ್ಳುತ್ತಿದೆ. ರಾಜಾಜಿನಗರ, ನಾಗರಬಾವಿ, ಎಂಎಸ್‌ ಬಿಲ್ಡಿಂಗ್‌, ಸುಂಕದ ಕಟ್ಟೆ, ಯಶವಂತಪುರದಲ್ಲಿ  ಅಗ್ನಿಶಾಮಕ ದಳದ 14 ಮಂದಿ ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ. ಸೋಂಕಿತರ ಕುಟುಂಬಸ್ಥರು, ಸಂಪರ್ಕಿತರನ್ನು ಕ್ವಾರಂಟೈನ್‌ ಮಾಡಲಾಗಿದೆ. ಮಾಗಡಿ ರಸ್ತೆ ಹೊನ್ನಗನಹಟ್ಟಿ ಅಗ್ನಿಶಾಮಕ ಠಾಣೆಯ 34 ವರ್ಷದ ಮಹಿಳಾ ಸಿಬ್ಬಂದಿಗೆ ಪಾಸಿಟಿವ್‌ ದೃಢಪಟ್ಟಿದೆ. ಬೆಂಗಳೂರು ಉತ್ತರ ತಾಲೂಕಿನ ಸೊಂಡೆಕೊಪ್ಪ ನಿವಾಸಿ ಆಗಿದ್ದ ಮಹಿಳಾ ಸಿಬ್ಬಂದಿ ಕಳೆದೆರಡು ದಿನಗಳ ಹಿಂದೆ ರಾಜಾಜಿನಗರದಲ್ಲಿ ಪರೀಕ್ಷೆಗೆ ಒಳಪಟ್ಟಿದ್ದು, ಶನಿವಾರ ವರದಿ ಬಂದಿದೆ. ಸದ್ಯ ಇವರನ್ನು ಬೆಂಗಳೂರಿನ ಕೋವಿಡ್‌ ಆಸ್ಪತ್ರೆಗೆ ರವಾನಿಸಲಾಗಿದೆ.

ಸಂಜಯಗಾಂಧಿ ಅಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ 10 ಸಿಬ್ಬಂದಿಗೆ ಸೋಂಕು ದೃಢಪಟ್ಟಿದ್ದು, ಆಸ್ಪತ್ರೆ ಅಧಿಕಾರಿಗಳು ಸೋಂಕು ಇರುವುದನ್ನು ಮರೆಮಾಚಿ ಕೆಲಸಕ್ಕೆ  ಬರುವಂತೆ ಸೂಚಿಸಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿವೆ. ಇನ್ನು, ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಕೆ.ಸಿ. ಜನರಲ್‌ ಆಸ್ಪತ್ರೆ ಕೋವಿಡ್‌ ಐಸಿಯುನಲ್ಲಿ ರೋಗಿಗಳ ಆರೈಕೆ ಮಾಡುತ್ತಿದ್ದ 5 ನರ್ಸ್‌ಗಳಿಗೆ ಕೋವಿಡ್‌ 19 ಪಾಸಿಟಿವ್‌  ಬಂದಿದ್ದು, ಇವರ ಸಂಪರ್ಕ ದಲ್ಲಿರುವವರನ್ನು ಕ್ವಾರಂಟೈನ್‌ ಮಾಡಲಾಗಿದೆ.

ಸೋಮವಾರದಿಂದ ಒಪಿಡಿ ಆರಂಭ: ಜಯದೇವ ಆಸ್ಪತ್ರೆ ಸಿಬ್ಬಂದಿಗೆ ಸೋಂಕು ತಗುಲಿದ್ದರಿಂದ ತಾತ್ಕಾಲಿಕವಾಗಿ ಬಂದ್‌ ಮಾಡಲಾಗಿದ್ದ ಆಸ್ಪತ್ರೆ ಹೊರ ರೋಗಿಗಳ ವಿಭಾಗ (ಒಪಿಡಿ) ಸೋಮವಾರ ಆರಂಭವಾಗಲಿದೆ. ಸಾಮಾಜಿಕ  ಅಂತರದೊಂದಿಗೆ ದಿನಕ್ಕೆ 400 ರೋಗಿಗಳಿಗೆ ಸೀಮಿತಗೊಳಿಸಲಾಗುವುದು. ತುರ್ತು ಸೇವೆ ದಿನದ 24 ಗಂಟೆಯೂ ಸಿಗಲಿದೆ ಎಂದು ಜಯದೇವ ಆಸ್ಪತ್ರೆ ನಿರ್ದೇಶಕ ಸಿ.ಎನ್‌. ಮಂಜುನಾಥ್‌ ತಿಳಿಸಿದ್ದಾರೆ.

ಚಿಕಿತ್ಸೆ ಫಲಿಸದೆ ಸೋಂಕಿತ ಮೃತ: ಕೋವಿಡ್‌ 19 ವೈರಸ್‌ನಿಂದ ಶಂಕರ ಮಠ ವಾರ್ಡ್‌ನ ಕುರುಬರಹಳ್ಳಿಯ 60ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಗೊರಗುಂಟೆಪಾಳ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತ ಚಿಕಿತ್ಸೆ  ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.