1091ಕ್ಕೆ ಕರೆ ಮಾಡಿದರೆ ಡ್ರಾಪ್ ನೀಡುವುದು ಫೇಕ್ ನ್ಯೂಸ್: ಪೊಲೀಸ್ ಇಲಾಖೆ ಸ್ಪಷ್ಟನೆ
Team Udayavani, Aug 23, 2024, 2:45 PM IST
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಇತ್ತೀಚೆಗೆ ರಾತ್ರಿ ವೇಳೆ ಒಂಟಿಯಾಗಿ ಓಡಾಡುವ ಮಹಿಳೆಯರು 1091ಗೆ ಕರೆ ಮಾಡಿದರೆ, ಪೊಲೀಸರು ಕರೆದೊಯ್ದು ಮನೆಗೆ ಡ್ರಾಪ್ ಕೊಡುತ್ತಾರೆ ಎಂಬ ಸುದ್ದಿಯನ್ನು ಕೆಲ ಕಿಡಿಗೇಡಿಗಳು ವೈರಲ್ ಮಾಡಿದ್ದು, ಅದಕ್ಕೆ ಸ್ಪಷ್ಟನೆ ನೀಡಿರುವ ರಾಜ್ಯ ಪೊಲೀಸರು, ಇದೊಂದು ಸುಳ್ಳು ಸಂದೇಶ ಎಂದು ಸ್ಪಷ್ಟಪಡಿಸಿದ್ದಾರೆ.
ಕೆಲ ದಿನಗಳ ಹಿಂದೆ ಎಕ್ಸ್ ಹಾಗೂ ಫೇಸ್‌ಬುಕ್‌ನಲ್ಲಿ ಕೆಲ ಕಿಡಿಗೇಡಿಗಳು “ರಾತ್ರಿ 10 ಗಂಟೆಯಿಂದ ಮುಂಜಾನೆ 6 ಗಂಟೆ ಅವಧಿಯಲ್ಲಿ ಒಂಟಿಯಾಗಿ ಓಡಾಡುವ ಮಹಿಳೆಯರಿಗೆ ಯಾವುದಾದರೂ ವಾಹನ ದೊರೆಯದಿದ್ದಾಗ, ಸಹಾಯ ವಾಣಿ 1091ಗೆ ಕರೆ ಮಾಡಿದರೆ, ಪೊಲೀಸರೇ ವಾಹನದಲ್ಲಿ ಉಚಿತವಾಗಿ ಕರೆದೊಯ್ದು ಮನೆಗೆ ಡ್ರಾಪ್ ಕೊಡುತ್ತಾರೆ’ ಎಂದು ಪೋಸ್ಟ್ ಮಾಡಿದ್ದರು.
ಅದಕ್ಕೆ ಸ್ಪಷ್ಟನೆ ನೀಡಿರುವ ಪೊಲೀಸರು, ಇಂತಹ ಹೊಸ ಯೋಜನೆಯನ್ನು ಪೊಲೀಸರು ಜಾರಿಗೆ ತಂದಿಲ್ಲ. ಇದು ಶುದ್ಧ ಸುಳ್ಳು. ಇದನ್ನು ಸಾರ್ವಜನಿಕರು ನಂಬಬಾರದು. ತುರ್ತು ಸಂದರ್ಭದಲ್ಲಿ 112 ಸಂಖ್ಯೆಗೆ ಕರೆ ಮಾಡಿ ಸಹಾಯ ಪಡೆದುಕೊಳ್ಳಬಹುದು. ಈ ಪೋಸ್ಟ್ ಮಾಡಿದ ಕಿಡಿಗೇಡಿಗಳ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.