Bengaluru; 3 ಅಕ್ರಮ ಡ್ಯಾನ್ಸ್ ಬಾರ್ ಗಳ ಮೇಲೆ ದಾಳಿ: 87 ಮಹಿಳೆಯರ ರಕ್ಷಣೆ
210 ಗ್ರಾಹಕರು ವಶಕ್ಕೆ, 9 ಮಂದಿ ಅರೆಸ್ಟ್
Team Udayavani, Jun 19, 2023, 7:43 PM IST
ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಮೂರು ಡ್ಯಾನ್ಸ್ ಬಾರ್ಗಳ ಮೇಲೆ ಕೇಂದ್ರ ಅಪರಾಧ ವಿಭಾಗದ ಪೊಲೀಸರು ಭಾನುವಾರ ಏಕಕಾಲದಲ್ಲಿ ದಾಳಿ ನಡೆಸಿ ಒಂಬತ್ತು ಮಂದಿಯನ್ನು ಬಂಧಿಸಿ, 210 ಗ್ರಾಹಕರನ್ನು ವಶಕ್ಕೆ ಪಡೆದು, 87 ಮಹಿಳೆಯರನ್ನು ರಕ್ಷಿಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಬಾರ್ಗಳಲ್ಲಿ ಅಕ್ರಮವಾಗಿ ಲೈವ್ ಬ್ಯಾಂಡ್ಗಳನ್ನು ನಡೆಸುತ್ತಿರುವ ಬಗ್ಗೆ ಬಂದ ದೂರುಗಳ ಆಧಾರದ ಮೇಲೆ ದಾಳಿ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ, ಅಲ್ಲಿ ಮಹಿಳೆಯರನ್ನು ಗ್ರಾಹಕರ ಮುಂದೆ ನೃತ್ಯ ಮಾಡಲು ಬಳಸಿಕೊಳ್ಳಲಾಗುತ್ತಿತ್ತು ಎಂದು ಹೇಳಿದ್ದಾರೆ.
ಬಂಧಿತ ಒಂಬತ್ತು ಮಂದಿ ಈ ಬಾರ್ಗಳ ಮಾಲಕರು ಮತ್ತು ವ್ಯವಸ್ಥಾಪಕರಾಗಿದ್ದಾರೆ. ಮಹಿಳೆಯರನ್ನು ದೇಶದ ವಿವಿಧ ಭಾಗಗಳಿಂದ ಕರೆತರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರಲ್ಲಿ ಕೆಲವರು ವಿದೇಶದಿಂದ ಬಂದವರು ಇದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.