ಆನ್‌ಲೈನ್‌ ದೂರುಗಳ ಸಂಖ್ಯೆ ಹೆಚ್ಚಳ

Team Udayavani, Jul 4, 2020, 5:55 AM IST

online-dooru

ಬೆಂಗಳೂರು: ನಗರದಲ್ಲಿ ಕೋವಿಡ್‌ 19 ಸೋಂಕಿನ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆನ್‌ಲೈನ್‌ ಮೂಲಕ ದೂರು ನೀಡುವವರ ಸಂಖ್ಯೆ ಹೆಚ್ಚಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿ, ಚರಂಡಿ ನೀರು, ಬೀದಿ ದೀಪ  ಬದಲಾಯಿಸುವುದು ಹಾಗೂ ರಸ್ತೆ ಗುಂಡಿ ಸೇರಿದಂತೆ ಹಲವು ವಿಚಾರಗಳಿಗೆ ನಿತ್ಯ ದೂರುಗಳು ದಾಖಲಾಗುತ್ತವೆ. ವಿಶೇಷವೆಂದರೆ ಬಿಬಿಎಂಪಿ ಸಹಾಯ ಆ್ಯಪ್‌ 2.0 ಮೂಲಕ ದೂರು ನೀಡುವುದು ಹೆಚ್ಚಾಗಿದೆ. ಕಳೆದ ಎರಡು ತಿಂಗಳಲ್ಲಿ  ಸಹಾಯ 2.0ಗೆ 20,591 ದೂರುಗಳು ದಾಖಲಾಗಿವೆ. ಇದರಲ್ಲಿ 17,994 ದೂರುಗಳಿಗೆ ಪರಿಹಾರ ಕಂಡುಕೊಳ್ಳಲಾಗಿದ್ದು, 2,597 ದೂರುಗಳು ಇನ್ನು ಬಾಕಿ ಇವೆ.

ಲಾಕ್‌ಡೌನ್‌ ಅವಧಿಯಲ್ಲೂ ಪರಿಹಾರ: ಸಹಾಯ 2.0 ಮೂಲಕ ಮೇನಲ್ಲಿ ಅತಿ ಹೆಚ್ಚು 11,916 ದೂರು ದಾಖಲಾಗಿವೆ. ಅದೇ ರೀತಿ, ಜೂನ್‌ನಲ್ಲಿ 8,675 ದೂರುಗಳು ದಾಖಲಾಗಿವೆ. ಇದುವರೆಗೆ ಸಕಾಲದ ಖಾತಾ ವಿಭಾಗಕ್ಕೆ  ಸಂಬಂಧಿಸಿದಂತೆ ಒಟ್ಟು 3,570 ಅರ್ಜಿಗಳು ಸಲ್ಲಿಕೆಯಾಗಿದ್ದು, 3,438 ಅರ್ಜಿಗಳು ವಿಲೇವಾರಿಯಾಗಿವೆ. ಇನ್ನು 132 ಅರ್ಜಿಗಳು ಪ್ರಗತಿಯಲ್ಲಿವೆ. ಆರೋಗ್ಯ ವಿಭಾಗಕ್ಕೆ ಸಂಬಂಧಿಸಿ 228 ಅರ್ಜಿಗಳು ಬಾಕಿ ಇವೆ. ಅತಿ ಹೆಚ್ಚು ದೂರುಗಳು ಕಸ  ವಿಲೇವಾರಿಗೆ ಸಂಬಂಧಿಸಿದ್ದಾಗಿದ್ದು, 10,122 ದೂರುಗಳು ದಾಖಲಾಗಿವೆ.

ಇವುಗಳಲ್ಲಿ 8,975 ದೂರುಗಳನ್ನು ಪರಿಹರಿಸಲಾಗಿದೆ. ಇದಕ್ಕೂ ಹೆಚ್ಚು ದೂರುಗಳು ನಗರದ ಬೀದಿ ದೀಪಗಳು, ವಿದ್ಯುತ್‌ ಕಂಬ ಹಾಗೂ ವಿದ್ಯುತ್‌ ಪೈಪ್‌ಗ್ಳಿಗೆ  (ಎಲೆಕ್ಟ್ರಿಕಲ್ಸ್‌ಗೆ) ಸಂಬಂಧಿಸಿದ್ದಾಗಿವೆ. ಈ ವಿಭಾಗದಲ್ಲಿ 12,130 ದೂರುಗಳು ದಾಖಲಾಗಿದ್ದು, 9,418 ದೂರುಗಳನ್ನು ಪರಿಹರಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಕೊವೀಡ್‌-19ಗೆ ಸಂಬಂಧಿಸಿದಂತೆ 444 ದೂರುಗಳು ಸಹಾಯ 2.0ಗೆ ಬಂದಿವೆ.  ಆದರೆ, ಇವುಗಳಲ್ಲಿ ಕೇವಲ 8 ದೂರುಗಳನ್ನಷ್ಟೇ ಪಾಲಿಕೆ ಪರಿಹರಿಸಿದ್ದು, ಇನ್ನೂ 436 ದೂರುಗಳು ಬಾಕಿ ಇವೆ.

ದೂರುಗಳಿಗೆ ಸಮರ್ಪಕ ಸ್ಪಂದನೆ: ಸೋಂಕಿಗೆ ಸಂಬಂಧಿಸಿದ ದೂರುಗಳು ಹೊಸ ಸೇರ್ಪಡೆಯಾಗಿದೆ. ಸೋಂಕು ದೃಢಪಟ್ಟವರ ಅಕ್ಕಪಕ್ಕದ ಮನೆಯವರು ಆತಂಕದಿಂದ ದೂರು ನೀಡುತ್ತಿದ್ದಾರೆ. ಇದರಲ್ಲಿ ಸಾಧ್ಯವಾದಷ್ಟು ದೂರುಗಳನ್ನು  ಪರಿಹರಿಸಲಾಗುತ್ತಿದೆ. ಆರೋಗ್ಯ ವಿಭಾಗದ ಅಧಿಕಾರಿಗಳಿಗೆ ಈ ದೂರುಗಳ ಬಗ್ಗೆ ಮಾಹಿತಿ ರವಾನಿಸಲಾಗುತ್ತಿದೆ. ಸಾರ್ವಜನಿಕರು ಸಾಧ್ಯವಾದಷ್ಟು ಬಿಬಿಎಂಪಿ ಸಹಾಯ 2.0ಗೆ ದೂರು ನೀಡಿದರೆ ಉತ್ತಮ. ಈ ದೂರುಗಳನ್ನು ಸಾಧ್ಯವಾದಷ್ಟು  ಬೇಗ ಪರಿಹರಿಸಲಾಗುವುದು ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಆಡಳಿತ) ಅನ್ಬುಕುಮಾರ್‌ ಹೇಳಿದರು.

ಟಾಪ್ ನ್ಯೂಸ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Vijay Hazare Trophy: ಮಯಾಂಕ್‌ ಅಗರ್ವಾಲ್‌ ಶತಕದಾಟ; ಪಂಜಾಬ್‌ ಕೈನಿಂದ ಜಯ ಕಸಿದ ಕರ್ನಾಟಕ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

Maulana Masood: 26/11‌ ದಾಳಿಯ ಮಾಸ್ಟರ್‌ ಮೈಂಡ್: ಭಯೋ*ತ್ಪಾದಕ ಮಸೂದ್‌ ಗೆ ಹೃದಯಾಘಾತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್‌

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್‌ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?

3

Bengaluru: ಕ್ಯಾಬ್‌ ಡಿಕ್ಕಿ;ಬುಲೆಟ್‌ನಲ್ಲಿ ತೆರಳುತ್ತಿದ್ದ ಸಾಫ್ಟ್ವೇರ್‌ ಎಂಜಿನಿಯರ್‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

Belagavi: ಪಿಒಕೆ ಬಗ್ಗೆ ಕಾಂಗ್ರೆಸ್‌ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.