ಕೆಲಸದ ಅವಧಿ ಹೆಚ್ಚಳ: ಹೈ ಎಚ್ಚರಿಕೆ
Team Udayavani, Jun 12, 2020, 6:01 AM IST
ಬೆಂಗಳೂರು: ಕೋವಿಡ್ 19 ಪರಿಸ್ಥಿತಿಯನ್ನು “ಸಾರ್ವಜನಿಕ ತುರ್ತು ಪರಿಸ್ಥಿತಿ” ಎಂದು ಪರಿಗಣಿಸಿ ಕೈಗಾರಿಕೆಗಳ ಕಾಯ್ದೆಯ ಸೆಕ್ಷನ್ 5ರನ್ವಯ ಕಾರ್ಮಿಕರ ಕೆಲಸದ ಅವಧಿ ಹೆಚ್ಚಿಸಿರುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದಿರುವ ಹೈಕೋರ್ಟ್, ಹೊಸ ನಿರ್ಧಾರ ಕೈಗೊಳ್ಳದಿದ್ದರೆ ತಡೆಯಾಜ್ಞೆ ಜಾರಿ ಮಾಡುವ ಎಚ್ಚರಿಕೆ ನೀಡಿದೆ.
ಕೈಗಾರಿಕೆಗಳಲ್ಲಿ ಕಾರ್ಮಿಕರ ಕೆಲಸದ ಅವಧಿ 9ರಿಂದ 10 ತಾಸುಗಳಿಗೆ ಹೆಚ್ಚಿಸಿ ಸರ್ಕಾರ ಹೊರಡಿಸಿರುವ ಅಧಿಸೂಚನೆ ರದ್ದುಗೊಳಿಸಲು ಬೆಂಗಳೂರಿನ ದೀಪಾಂಜಲಿ ನಗರದ ನಿವಾಸಿ ಎಚ್. ಮಾರುತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾ. ಎ.ಎಸ್. ಓಕಾ ಹಾಗೂ ನ್ಯಾ. ಇ.ಎಸ್.ಇಂದಿರೇಶ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಶುಕ್ರವಾರದೊಳಗೆ ಸರ್ಕಾರ ಹೊಸದಾಗಿ ತೀರ್ಮಾನ ತೆಗೆದುಕೊಳ್ಳದಿದ್ದರೆ ಅಧಿಸೂಚನೆಗೆ ತಡೆಯಾಜ್ಞೆ ನೀಡಲಾಗುವುದು ಎಂದು ಎಚ್ಚರಿಸಿತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.