ವರದಿ ಸಲ್ಲಿಸಲು ಸಿಐಡಿಗೆ ಸೂಚನೆ
Team Udayavani, Jul 5, 2020, 5:23 AM IST
ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತ ಹಾಗೂ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ- ಆಪರೇಟಿವ್ ಲಿಮಿಟೆಡ್‌ನ ಠೇವಣಿದಾರರ ಹಣ ದುರ್ಬಳಕೆ ಹಾಗೂ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿ ಸಿದಂತೆ ತನಿಖಾ ವರದಿ ಸಲ್ಲಿಸುವಂತೆ ಹೈಕೋರ್ಟ್ ಸಿಐಡಿಗೆ ನಿರ್ದೇಶಿಸಿದೆ.
ಹಗರಣದ ತನಿಖೆಗೆ ಡಿಐಜಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ಡಿಜಿಪಿಗೆ ನಿರ್ದೇಶಿಸುವಂತೆ ಕೋರಿ ಬಸವನಗುಡಿ ನಿವಾಸಿ ಕೆ.ಆರ್.ನರಸಿಂಹಮೂರ್ತಿ ಮತ್ತಿತರರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿತು
. ಅರ್ಜಿಯ ಹಿಂದಿನ ವಿಚಾರಣೆ ವೇಳೆ ಪ್ರಕರಣದ ಸಂಬಂಧ ಎಸಿಬಿ, ಸಿಐಡಿ ಎರಡೂ ಪ್ರತ್ಯೇಕ ಎಫ್‌ಐಆರ್ ದಾಖಲಿಸಿವೆ. ಅವುಗಳನ್ನು ಒಂದೇ ಕಡೆ ಸೇರಿಸುವ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಬೇಕು ಎಂದು ಹೈಕೋರ್ಟ್ ನಿರ್ದೇಶನ ನೀಡಿತ್ತು. ಅರ್ಜಿ ಶುಕ್ರವಾರ ವಿಚಾರಣೆಗೆ ಬಂದಾಗ, ಅರ್ಜಿದಾರರ ಪರ ವಕೀಲರು, ಸರ್ಕಾರ ಪ್ರಕರಣದ ತನಿಖೆ ಸಿಐಡಿಗೆ ವಹಿಸಿದೆ ಎಂದರು.
ಅದನ್ನು ಪರಿಗಣಿಸಿದ ನ್ಯಾಯಪೀಠ, ಪ್ರಕರಣ ತನಿಖಾ ವರದಿಯನ್ನು ಅರ್ಜಿ ಕುರಿತ ಮುಂದಿನ ವಿಚಾರಣೆ ವೇಳೆ ಸಿಐಡಿ ನ್ಯಾಯಾಲಯಕ್ಕೆ ಸಲ್ಲಿಸಬೇಕು. ಬ್ಯಾಂಕಿನ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಬೇಕೆಂಬ ಅರ್ಜಿದಾರರ ಮನವಿಯನ್ನು ಸಿಐಡಿ ಪರಿಗಣಿಸಬೇಕು. ಬ್ಯಾಂಕಿನ ನಿರ್ವಹಣೆಗಾಗಿ ಸರ್ಕಾರ ನೇಮಿಸಿರುವ ಆಡಳಿತಾಧಿಕಾರಿಯು ಸಾಲ ವಸೂಲಾತಿ ಕುರಿತು ವಸ್ತುಸ್ಥಿತಿ ವರದಿ ಸಲ್ಲಿಸಬೇಕು ಎಂದು ನಿರ್ದೇಶಿಸಿ ವಿಚಾರಣೆ ಜು.20ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಹೊಸ ಸೇರ್ಪಡೆ
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Discipline: ಬದುಕಿನಲ್ಲಿ ಶಿಸ್ತಿರಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.