ಸಾಗರೋತ್ತರ ಕನ್ನಡಿಗರಿಗೆ ಉದ್ಯೋಗ: ರತ್ನಪ್ರಭಾ ಭರವಸೆ

Team Udayavani, Jul 5, 2020, 5:32 AM IST

agarottra

ಬೆಂಗಳೂರು: ಕೋವಿಡ್‌ 19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ವಿದೇಶಗಳಲ್ಲಿ ನೆಲೆಸಿರುವ ಅನಿವಾಸಿ ಕನ್ನಡಿಗರು ಉದ್ಯೋಗ ಕಳೆದುಕೊಂಡಿದ್ದರೆ ಸ್ಕಿಲ್‌ ಪೋರ್ಟಲ್‌ ನಲ್ಲಿ ನೋಂದಾಯಿಸಿಕೊಳ್ಳುವಂತೆ ಕರ್ನಾಟಕ ಕೌಶಲ್ಯಾಭಿವೃದ್ಧಿ  ಪ್ರಾಧಿಕಾರದ ಅಧ್ಯಕ್ಷೆ ರತ್ನಪ್ರಭಾ ತಿಳಿಸಿದ್ದಾರೆ.

ಶನಿವಾರ ಸಾಗರೋತ್ತರ ಕನ್ನಡಿಗರೊಂದಿಗೆ ಸಂವಾದ ನಡೆಸಿ, ಕರ್ನಾಟಕ ಕೌಶಲ್ಯಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪ್ರಾರಂಭಿಸಿರುವ “ಸ್ಕಿಲ್‌ ಪೋರ್ಟಲ್‌” ಬಗ್ಗೆ ಮಾಹಿತಿ ನೀಡಿ  ಕೆಲಸ ಕಳೆದುಕೊಂಡಿರುವ ವಲಸೆ ಕಾರ್ಮಿಕರಿಗೆ ಮತ್ತು ಹೊರನಾಡ ಕನ್ನಡಿಗರಿಗೆ ಉದ್ಯೋಗದಾತರು ಮತ್ತು ಉದ್ಯೋಗಾಂಕ್ಷಿಗಳಿಗೆ ಸೇತುವೆಯಾಗಿ ಸಹಾಯ ಮಾಡುತ್ತಿದೆ ಎಂದು ತಿಳಿಸಿ, ಉದ್ಯೋಗ ಕಳೆದುಕೊಂಡಿರುವ ಎಲ್ಲರೂ  ಸ್ಕಿಲ್‌ ಪೋರ್ಟಲ್‌ ಅಲ್ಲಿ ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಿದರು.

ಸೌದಿಯಲ್ಲಿ ಉದ್ಯೋಗ ಕಳೆದು  ಕೊಂಡು ಖನ್ನತೆಗೆ ಒಳಗಾಗಿದ್ದ ಫತೆ ಅಹಮದ್‌ ಅವರಿಗೆ ಕೆಲಸದ ಭರವಸೆ. ಲೋಕೇಶ್‌ ಅನ್ನುವವರಿಗೆ ಉದ್ಯೋಗ ಒದಗಿಸಿಕೊಡುವಲ್ಲಿ ರತ್ನಪ್ರಭಾ ಸ್ಥಳದಲ್ಲಿಯೇ ಪರಿಹಾರ ಒದಗಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೇ ಇದೇ  ತಿಂಗಳಲ್ಲಿ ಈ ಪೋರ್ಟಲ್‌ ಮುಖಾಂತರ ಆನ್‌ಲೈನ್‌ ಜಾಬ್‌ ಮೇಳ ಮಾಡುತ್ತಿದ್ದು ಅದರಲ್ಲಿ ಭಾಗವಹಿಸಿ ಸೂಕ್ತ ಉದ್ಯೋಗ  ಪಡೆದಕೊಳ್ಳುವಂತೆ ಸೂಚಿಸಿದರು.

ಅಲ್ಲದೇ ತಾವು ಮುಖ್ಯ ಕಾರ್ಯದರ್ಶಿ ಆಗಿದ್ದ ಸಮಯದಲ್ಲಿ ಪ್ರಾರಂಭಿಸಲು ಉದ್ದೇಶಿಸಿದ್ದ ಅಂತಾರಾಷ್ಟ್ರೀಯ ವಲಸೆ ಕೇಂದ್ರ ಈಗ ಕಾರ್ಯಾರಂಭವಾಗಿದ್ದು, ಇದರ ಮುಖಾಂತರ ವಿದೇಶಗಳಲ್ಲಿ ಉದ್ಯೋಗ ಕಳೆದುಕೊಂಡಿರುವ ಕಾರ್ಮಿಕರಿಗೆ, ನೌಕರರಿಗೆ ಅಲ್ಲಿಯೇ ಉದ್ಯೋಗ ಕೊಡಿಸುವ ಭರವಸೆ ನೀಡಿದರು. ಅಲ್ಲದೇ ಈಗಾಗಲೇ ಅಲ್ಲಿಂದ ವಾಪಸ್‌ ಬಂದಿರುವ ಕಾರ್ಮಿಕರಿಗೆ ಇಲ್ಲಿನ ಕೈಗಾರಿಕೆಗಳು ಮತ್ತು ಉದ್ಯಮಿಗಳೊಂದಿಗೆ ಸಭೆ ನಡೆಸಿ ಉದ್ಯೋಗ ನೀಡುವ ಭರವಸೆ ನೀಡಿದರು.

ಮತ್ತೇ ಅಲ್ಲಿಂದ ಬಂದು ಇಲ್ಲಿ ಉದ್ಯಮ ಪ್ರಾರಂಭಿಸಲು ಇಚ್ಚಿಸುವ ಎನ್‌ ಆರ್‌ಐ ಉದ್ಯಮಿಗಳಿಗೆ ಇರುವ ಅವಕಾಶಗಳು ಮತ್ತು ಸರ್ಕಾರದಿಂದ ದೊರಕುವ ಸೌಲಭ್ಯ, ಸಬ್ಸಿಡಿ, ಉತ್ತೇಜಕ ಯೋಜನೆಗಳ ಬಗ್ಗೆ ತಿಳಿಸಿದರು.ಸಾಗರೋತ್ತರ ಕನ್ನಡಿಗರ ಸಂವಾದದಲ್ಲಿ ಅಮೆರಿಕಾ, ಇಟಲಿ, ದುಬೈ, ಆಸ್ಟ್ರೇಲಿಯಾ ರಾಷ್ಟ್ರಗಳ ಅನಿವಾಸಿ ಕನ್ನಡಿಗರಾದ, ಗೋಪಾಲ್‌ ಕುಲಕರ್ಣಿ, ರವಿ ಮಹಾದೇವ್‌, ಚಂದ್ರಶೇಖರ್‌ ಲಿಂಗದಳ್ಳಿ ಸೇರಿದಂತೆ  20ಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.