ಪತ್ರಕರ್ತರಿಗೆ ಸ್ವಯಂ ಮಿತಿ ಅಗತ್ಯ
Team Udayavani, Nov 17, 2021, 11:35 AM IST
ಬೆಂಗಳೂರು: ಪತ್ರಕರ್ತರು ಕೆಲವೊಂದು ಸ್ವಯಂ-ನಿಯಮಗಳನ್ನು ಅಳವಡಿಸಿಕೊಳ್ಳುವ ಮೂಲಕ ಅವುಗಳ ಪಾಲನೆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಜಗದೀಶ್ ಹೇಳಿದರು.
ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಮಾಧ್ಯಮ ಕಂಡರೆ ಯಾರಿಗೆ ಭಯವಿಲ್ಲ? ಎಂಬ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿ, ಸರ್ಕಾರ ಮತ್ತು ಜನರ ನಡುವೆ ಮಾಹಿತಿ ತಲುಪಿಸಲು ಸೇತುವೆಯಾಗಿ ಮಾಧ್ಯಮ ಕೆಲಸ ನಿರ್ವಹಿಸುತ್ತಿದೆ.
ಪತ್ರಕರ್ತರ ವೃತ್ತಿ ಕೆಲಸವನ್ನು ಯಾವುದೇ ರಾಜಕಾರಣಿಗಳು ಅಥವಾ ಅಧಿಕಾರಿಗಳು ಯಾವುದೇ ಮೇಲ್ವಿಚಾರಣೆ ಮಾಡುವುದಿಲ್ಲ. ಆದರೆ ಸ್ವಯಂ ಪ್ರೇರಣೆಯಿಂದ ಪತ್ರಕರ್ತರೇ ಕೆಲ ಇತಿ-ಮಿತಿ ಅರಿತು ಕಾರ್ಯ ನಿರ್ವಹಿಸಿದಾಗ ಮಾತ್ರ ಜನರಿಗೆ ಬೇಕಾದ ಮಾಹಿತಿ ತಲುಪಿಸಲು ಸಾಧ್ಯ ಎಂದರು. ಮಾಧ್ಯಮ ರಂಗದವರು ಇರೋ ವಿಷಯವನ್ನು ಇದ್ದ ಹಾಗೆ ವರದಿ ಮಾಡಿ, ಜನರನ್ನು ಎಚ್ಚರಿಸುವಂತಹ ಕೆಲಸ ಮಾಡಬೇಕು.
ಇದನ್ನೂ ಓದಿ:- ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 10,197 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಇಳಿಕೆ
ಸಾಮಾನ್ಯವಾಗಿ ನೈಜ ಪತ್ರಕರ್ತರನ್ನು ಸರ್ಕಾರದ ರಚನಾತ್ಮಕ ಟೀಕಾಕಾರರು ಎಂದು ಮತ್ತು ಅವರನ್ನು ಪತ್ರಿಪಕ್ಷದ ಸ್ನೇಹಿತರಾಗಿರಬೇಕು. ಆಗ ಮಾತ್ರ ಅಧಿಕಾರಿಗಳು ಅದೆಷ್ಟೋ ಸಮಸ್ಯೆಗಳ ಸುಧಾರಣೆಯಾಗಲು ಸಾಧ್ಯವಾಗುತ್ತದೆ ಎಂದರು. ನಟ, ನಿರ್ದೇಶಕ ರಮೇಶ್ ಅರವಿಂದ್ ಮಾತನಾಡಿ, ಸಮಾಜದಲ್ಲಿನ ಪ್ರತಿಯೊಂದು ಕ್ಷೇತ್ರದಲ್ಲಿಯೂ ಮಾಧ್ಯಮದ ಅವಶ್ಯಕತೆಯಿದೆ.
ಹಾಗೆಯೇ ನನ್ನ ಸಿನಿಮಾ ಮತ್ತು ಜನರ ಮಧ್ಯೆ ಇದ್ದ ಸೇತುವೆ ಎಂದರೆ ಮಾದ್ಯಮ ಎಂದು ತಿಳಿಸಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಸದಾಶಿವ ಶೆಣೈ., ಅಕಾಡೆಮಿ ಸದಸ್ಯರಾದ ಶಿವಾನಂದ ತಗಡೂರು, ಕೆ.ಕೆ. ಮೂರ್ತಿ, ಶಿವಕುಮಾರ್ ಬೆಳ್ಳಿತಟ್ಟೆ, ಕಾರ್ಯದರ್ಶಿ ಸಿ.ರೂಪಾ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.