‘ಕಲಾ ತಪಸ್ವಿ’ ರಾಜೇಶ್ ಇನ್ನಿಲ್ಲ
Team Udayavani, Feb 19, 2022, 8:15 AM IST
ಬೆಂಗಳೂರು: ಚಂದನವನದ ಖ್ಯಾತ ನಟ ‘ಕಲಾ ತಪಸ್ವಿ’ ರಾಜೇಶ್ ಅವರು ಇಂದು ಮುಂಜಾನೆ (ಶನಿವಾರ, ಫೆ.19) ಕೊನೆಯುಸಿರು ಎಳೆದಿದ್ದಾರೆ.
ತೀವ್ರ ಉಸಿರಾಟದ ಸಮಸ್ಯೆ ಮತ್ತು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಫೆ.9ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತರಾಗಿದ್ದಾರೆ. ರಾಜೇಶ್ ಅವರಿಗೆ 89 ವರ್ಷ ವಯಸ್ಸಾಗಿತ್ತು.
ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿದ್ದ ರಾಜೇಶ್ ಅವರಿಗೆ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು. ಕಡೆಗೂ ರಾಜೇಶ್ ಬದುಕುಳಿಯಲಿಲ್ಲ. ಅವರ ಅಗಲಿಕೆಗೆ ಕನ್ನಡ ಚಿತ್ರರಂಗದ ಅನೇಕ ಕಲಾವಿದರು, ಅಭಿಮಾನಿಗಳು ಮತ್ತು ಆಪ್ತರು ಕಂಬಿನಿ ಮಿಡಿಯುತ್ತಿದ್ದಾರೆ.
ಸಂಜೆ 6 ಗಂಟೆಯವರೆಗೆ ಬೆಂಗಳೂರಿನ ವಿದ್ಯಾರಣ್ಯಪುರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.
1932ರ ಏ.15ರಂದು ಬೆಂಗಳೂರಿನಲ್ಲಿ ಜನಿಸಿದ್ದ ರಾಜೇಶ್, ಅಭಿನಯದ ಬಗ್ಗೆ ಚಿಕ್ಕ ವಯಸ್ಸಿನಲ್ಲೇ ಆಸಕ್ತಿ ಹೊಂದಿದ್ದರು. ಶಾಲಾ-ಕಾಲೇಜು ದಿನಗಳಲ್ಲಿ ಮನೆಯವರಿಗೆ ಗೊತ್ತಿಲ್ಲದಂತೆಯೇ ಅವರು ನಾಟಕಗಳಲ್ಲಿ ಅಭಿನಯಿಸುತ್ತಿದ್ದರು. ಅವರ ಮೂಲ ಹೆಸರು ಮುನಿ ಚೌಡಪ್ಪ. ಬಳಿಕ ಅವರು ನಾಟಕಗಳಲ್ಲಿ ಅಭಿನಯಿಸುವಾಗ ವಿದ್ಯಾಸಾಗರ್ ಎಂಬ ಹೆಸರಿನಿಂದ ಗುರುತಿಸಿಕೊಂಡಿದ್ದರು. ಚಿತ್ರರಂಗದಲ್ಲಿ ‘ತಲಾತಪಸ್ವಿ’ ರಾಜೇಶ್ ಎಂದೇ ಜನಮಾನ್ಯತೆಯನ್ನು ಪಡೆದಿದ್ದ ಇವರು 1960ರ ದಶಕದಲ್ಲಿ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಆ ಮೂಲಕ ನೂರಾರು ಸಿನಿಮಾಗಳಲ್ಲಿ ನಟಿಸಿ ಜನಮನ ಗೆದ್ದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.