High Court; ಬಸವನಗುಡಿಗೆ ಮರುನಾಮಕರಣ ಬೇಡ ಎಂದು ಸಲ್ಲಿಸಿದ್ದ PIL ವಜಾ
Team Udayavani, Aug 8, 2024, 6:43 PM IST
ಬೆಂಗಳೂರು: ನಗರದ ಬಸವನಗುಡಿ ವಾರ್ಡ್‌ಗೆ ದೊಡ್ಡ ಗಣಪತಿ ಎಂದು ಮರುನಾಮಕರಣ ಮಾಡುವ ಸರಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ(ಆಗಸ್ಟ್ 8 ) ವಜಾಗೊಳಿಸಿದೆ.
ಸತ್ಯಲಕ್ಷ್ಮಿ ರಾವ್ ಮತ್ತು ಇತರರು PIL ಅನ್ನು ಸಲ್ಲಿಸಿ ಮೂಲ ಹೆಸರು ಗಮನಾರ್ಹ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮೌಲ್ಯವನ್ನು ಹೊಂದಿದೆ ಎಂದು ವಾದಿಸಿದ್ದರು.
ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಅರ್ಜಿಯ ವಿರುದ್ಧ ತೀರ್ಪು ನೀಡಿತು.
“ವಾರ್ಡ್ ಅಥವಾ ನಗರವನ್ನು ಮರುನಾಮಕರಣ ಮಾಡುವ ವಿಷಯವು ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಗೆ ಸಂಬಂಧಿಸಿದ ವಿಷಯವಲ್ಲ. ಅರ್ಜಿದಾರರಿಗೆ ಪರಿಹಾರವನ್ನು ನೀಡಲು ಯಾವುದೇ ಸಾರ್ವಜನಿಕ ಹಿತಾಸಕ್ತಿ ಪ್ರದರ್ಶಿಸಲಾಗಿಲ್ಲ. 2023ರ ಸೆಪ್ಟೆಂಬರ್ 25ರಂದು ನಗರಾಭಿವೃದ್ಧಿ ಇಲಾಖೆ ಹೊರಡಿಸಿದ್ದ ಅಧಿಸೂಚನೆಯನ್ನು ನ್ಯಾಯಾಲಯ ರದ್ದುಗೊಳಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದರು.
ವಾರ್ಡ್ ಗಡಿಗಳನ್ನು ಮರುವಿನ್ಯಾಸಗೊಳಿಸುವ ಪ್ರಕ್ರಿಯೆಯ ಭಾಗವಾಗಿ ಅಧಿಕಾರಿಗಳು ಈಗಾಗಲೇ ಬೆಂಗಳೂರಿನ ಹಲವಾರು ವಾರ್ಡ್‌ಗಳಿಗೆ ಮರುನಾಮಕರಣ ಮಾಡಿದ್ದಾರೆ ಎಂದು ನ್ಯಾಯಾಲಯ ಹೇಳಿ ಹೆಚ್ಚಿನ ವಿಚಾರಣೆಯಿಲ್ಲದೆ ಅರ್ಜಿಯನ್ನು ವಜಾಗೊಳಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.