ಕೆಎಂಎಫ್: ದಾಖಲೆ ಪ್ರಮಾಣದ ಹಾಲು ಉತ್ಪಾದನೆ
83 .5 ಲಕ್ಷ ಲೀಟರ್‌ನಿಂದ 87 ಲಕ್ಷ ಲೀಟರ್‌ಗೆ ಏರಿಕೆ
Team Udayavani, May 20, 2022, 11:38 AM IST
ಬೆಂಗಳೂರು: ರಾಜ್ಯವ್ಯಾಪಿ ಮಳೆ ಹಿನ್ನೆಲೆಯಲ್ಲಿ ಹಾಲಿನ ಉತ್ಪಾದನೆಯಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಕಳೆದ ವರ್ಷ ಮೇ ತಿಂಗಳಿಗೆ ಹೋಲಿಕೆ ಮಾಡಿದರೆ ಶೇ.3ರಷ್ಟು ಉತ್ಪಾದನೆ ಅಧಿಕವಾಗಿದ್ದು, 83 .5 ಲಕ್ಷ ಲೀಟರ್‌ನಿಂದ 87 ಲಕ್ಷ ಲೀಟರ್‌ಗೆ ಏರಿಕೆಯಾಗಿದೆ.
ಕೆಎಂಎಫ್ ನಲ್ಲಿ 15 ಒಕ್ಕೂಟಗಳಿದ್ದು ಎಲ್ಲ ಒಕ್ಕೂಟಗಳಲ್ಲಿ ಹಾಲು ಉತ್ಪಾದನೆಯಲ್ಲಿ ಹೆಚ್ಚಳ ಕಂಡು ಬಂದಿದೆ. ಹಾಲು ಉತ್ಪಾದನೆ ಪ್ರಮಾಣ ಪ್ರಸ್ತುತ 87 ಲಕ್ಷ ಲೀಟರ್‌ಗೆ ತಲುಪಿದೆ. ಈ ಹಿಂದೆ ಕೆಎಂಎಫ್ ಜೂನ್ 2021ರಲ್ಲಿ 90 ಲಕ್ಷ ಲೀಟರ್ ಹಾಲು ಉತ್ಪಾದನೆಯ ದಾಖಲೆಯಾಗಿತ್ತು.
ಇದೀಗ ಇದೇ ರೀತಿ ಉತ್ಪಾದನೆ ಪ್ರಮಾಣ ಹೆಚ್ಚಾದರೆ ಈ ವರ್ಷ ಹಾಲು ಉತ್ಪಾದನೆ ಪ್ರಮಾಣ 97 ಲಕ್ಷ ಲೀಟರ್‌ಗೆ ತಲುಪುವ ನಿರೀಕ್ಷೆಯಿದೆ. ಈ ಹಾಲಿನ ಪ್ರಮಾಣ 1 ಕೋಟಿ ಲೀಟರ್‌ಗೆ ತಲುಪುವ ನಿರೀಕ್ಷೆಯಿದೆ.
ನಂದಿನಿ ಬ್ರಾಂಡ್ ಉತ್ಪನ್ನಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಅಧಿಕವಿದೆ. ಜತೆಗೆ ಹಾಲು, ಮೊಸರಿಗೂ ಬೇಡಿಕೆ ಇದೆ. ಅಧಿಕ ಹಾಲು ಉತ್ಪಾದನೆ ಆದರೂ ಚೀಸ್ ಸೇರಿದಂತೆ ಮತ್ತಿತರ ಉಪ ಉತ್ಪನ್ನಗಳ ತಯಾರಿಕೆಗೆ ಬಳಕೆ ಮಾಡಲಾ ಗುವುದು ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ್ ಹೇಳುತ್ತಾರೆ. ಅವಧಿಗೆ ಮುನ್ನ ಮಳೆಗಾಲ ಆರಂಭವಾಗಿರುವುದು, ಹಸಿಮೇವು ಅಧಿಕ ಪ್ರಮಾಣದಲ್ಲಿ ದೊರಕುತ್ತಿರುವುದು ಹಾಲಿನ ಉತ್ಪಾದನೆ ಹೆಚ್ಚಳಕ್ಕೆ ಪ್ರಮುಖ ಕಾರಣ ಎಂದು ತಿಳಿಸುತ್ತಾರೆ.
ಬಮೂಲ್, ಹಾಸನ ಡೈರಿಯಲ್ಲಿ ಹಾಲು ಅಧಿಕ: ಜಿಲ್ಲಾ ಹಾಲು ಒಕ್ಕೂಟಗಳ ಪೈಕಿ ಬಮೂಲ್ ಮತ್ತು ಹಾಸನ ಡೈರಿಯಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಹಾಲು ಉತ್ಪಾದನೆ ಆಗುತ್ತಿದೆ. ಬೇಸಿಗೆ ಹಿನ್ನೆಲೆಯಲ್ಲಿ ಕೆಲವು ದಿನಗಳ ಹಿಂದೆ ಬಮೂಲ್ ಹಾಲು ಉತ್ಪಾದನೆ 14.5 ಲಕ್ಷ ಲೀಟರ್‌ಗೆ ಆಗಿತ್ತು. ಆದರೆ ಇದೀಗ 16 ಲಕ್ಷ ಲೀಟರ್‌ಗೆ ಬಂದಿದೆ ಎಂದು ಬಮೂಲ್ ಅಧ್ಯಕ್ಷ ನರಸಿಂಹಮೂರ್ತಿ ಹೇಳುತ್ತಾರೆ.
ಬಮೂಲ್‌ನಲ್ಲಿ ಹಾಲು ಉತ್ಪಾದನೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪೌಡರ್ ಮಾಡಿ ದಾಸ್ತಾನು ಇಟ್ಟುಕೊಂಡು ಮಾರುಕಟ್ಟೆಯಲ್ಲಿ ಬೇಡಿಕೆ ಬಂದಾಗ ಮಾರಾಟ ಮಾಡಲಾಗುವುದು. ಇದರಿಂದ ಒಕ್ಕೂಟಕ್ಕೆ ಲಾಭವಾಗಲಿದೆ. ಆದರೆ, ಯಾವುದೇ ಕಾರಣ ಕ್ಕೂ ಹಾಲು ಉತ್ಪಾದಕರಿಗೆ ರಜೆ ಘೋಷಿಸುವುದಿಲ್ಲ ಎಂದು ತಿಳಿಸುತ್ತಾರೆ.
ಹಾಸನ ಡೈರಿಯಲ್ಲಿ ಈ ಹಿಂದೆ ಪ್ರತಿ ನಿತ್ಯ 9.5 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿತ್ತು. ಈಗ 11.5 ಲಕ್ಷ ಲೀಟರ್ ಉತ್ಪಾದನೆ ಮಾಡಲಾಗುತ್ತಿದೆ ಎಂದು ಹಾಸನ ಹಾಲು ಒಕ್ಕೂಟದ ಹಿರಿಯ ಅಧಿಕಾರಿ ಗಳು ಮಾಹಿತಿ ನೀಡಿದ್ದಾರೆ. ಹೆಚ್ಚಿನ ಪ್ರಮಾಣದಲ್ಲಿ ಉತ್ಪಾದನೆ ಆಗುವ ಹಾಲನ್ನು ನಂದಿನಿ ಬ್ರಾಂಡ್‌ನ ವಿವಿಧ ಉತ್ಪನ್ನಗಳಿಗೆ ಬಳಕೆ ಮಾಡಲಾಗುವುದು. ಜತೆಗೆ ಪೌಡರ್ ರೂಪದಲ್ಲಿ ದಾಸ್ತನು ಮಾಡಲಾಗುವುದು ಎಂದು ಹೇಳುತ್ತಾರೆ.
ಅವಧಿಗೆ ಮುನ್ನ ಮಳೆ ಹಿನ್ನೆಲೆಯಲ್ಲಿ ಕೆಎಂಎಫ್ ವ್ಯಾಪ್ತಿಯ ಹಾಲು ಒಕ್ಕೂಟಗಳಲ್ಲಿ ಹಾಲು ಉತ್ಪಾದನೆಯಲ್ಲಿ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಕೆಎಂಎಫ್ ನಲ್ಲಿ ಪ್ರತಿದಿನ 83.5 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗಿತ್ತು. ಇದೀಗ 87 ಲಕ್ಷ ಲೀಟರ್‌ಗೆ ತಲುಪಿದೆ. ಮುಂದಿನ ದಿನಗಳಲ್ಲಿ ನಿತ್ಯ 97 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುವ ಸಾಧ್ಯತೆಯಿದೆ. ●ಬಿ.ಸಿ.ಸತೀಶ್, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ
●ದೇವೇಶ ಸೂರಗುಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.