ಮಿಸ್ಟ್ ಕೆನಾನ್ ಯಂತ್ರಕ್ಕೆ ಚಾಲನೆ
Team Udayavani, Jun 30, 2020, 6:04 AM IST
ಬೆಂಗಳೂರು: ನಗರದಲ್ಲಿ ಕೋವಿಡ್ 19 ಸೋಂಕು ತಡೆಯಲು ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡುವ ಮಿಸ್ಟ್ ಕೆನಾನ್ ಯಂತ್ರಕ್ಕೆ ಸೋಮವಾರ ಚಾಲನೆ ನೀಡಲಾಯಿತು. ವಿಧಾನಸೌಧ ಪೂರ್ವ ದ್ವಾರದ ಬಳಿ ಅತ್ಯಾಧುನಿಕ ಎರಡು ಯಂತ್ರಗಳ ಕಾರ್ಯಾಚರಣೆಗೆ ಕಂದಾಯ ಸಚಿವ ಆರ್.ಅಶೋಕ್ ಚಾಲನೆ ನೀಡಿದರು.
ಪ್ರತಿ ಯಂತ್ರವೂ 8 ಸಾವಿರ ಲೀ.ಸಾಮರ್ಥ್ಯ ಹೊಂದಿದ್ದು, 50 ಮೀಟರ್ ದೂರದವರೆಗೆ ಹಾಗೂ 320 ಡಿಗ್ರಿ ಸುತ್ತಳತೆಯಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಣೆ ಮಾಡಬಲ್ಲದು. ಇದರ ನಿರ್ವಹಣೆಗೆ ಇಬ್ಬರು ಸಿಬ್ಬಂದಿಯನ್ನು ಬಳಸಿಕೊಳ್ಳಲಾಗುತ್ತಿದೆ. ರಿಮೋಟ್ ಕಂಟ್ರೋಲ್ ತಂತ್ರಜ್ಞಾನ ಬಳಸಿ ಚಾಲ ಕರೇ ಇದನ್ನು ನಿಭಾಯಿಸಬಹುದಾಗಿದೆ. ಯಂತ್ರದ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಧ್ವನಿವರ್ಧಕ ಅಳವಡಿಸಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.
ಸಿಎಂ ರಾಜಕೀಯ ಕಾರ್ಯದರ್ಶಿ ಎಸ್.ಆರ್.ವಿಶ್ವನಾಥ್, ಮೇಯರ್ ಎಂ. ಗೌತಮ್ಕುಮಾರ್, ಉಪ ಮೇಯರ್ ರಾಮಮೋಹನ ರಾಜು, ಅಪೀಲು ಸ್ಥಾಯಿ ಸಮಿತಿ ಅಧ್ಯಕ್ಷ ಲಕ್ಷ್ಮೀನಾರಾಯಣ, ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ ಕುಮಾರ್, ವಿಶೇಷ ಆಯುಕ್ತ ಡಿ.ರಂದೀಪ್, ಮುಖ್ಯ ಆರೋಗ್ಯಾಧಿಕಾರಿ ಡಾ. ವಿಜೇಂದ್ರ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.