ನಿವೇಶನದ ನಕಲಿ ಹಂಚಿಕೆ ಪತ್ರ ಮಾರಾಟ ಜಾಲ ಪತ್ತೆ
Team Udayavani, Jun 13, 2020, 5:38 AM IST
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹೆಸರನ್ನು ದುರುಪಯೋಗ ಪಡಿಸಿಕೊಂಡು ನಾಡಪ್ರಭು ಕೆಂಪೇಗೌಡ ಬಡಾವಣೆಯ ನಿವೇಶನಗಳ ನಕಲಿ ಹಕ್ಕು ಪತ್ರಗಳನ್ನು ಸೃಷ್ಟಿಸಿ ಸಾರ್ವಜನಿಕರಿಗೆ ವಂಚನೆ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚುವಲ್ಲಿ ಬಿಡಿಎ ಯಶಸ್ವಿಯಾಗಿದೆ. ಪ್ರಕರಣದ ಪ್ರಮುಖ ಆರೋಪಿ ಚಾಮರಾಜಪೇಟೆಯ ವಿಜಯಾನಂದಸ್ವಾಮಿ ಎಂಬಾತನನ್ನು ಬಂಧಿಸಿ ಕಾಗದ ಪತ್ರಗಳನ್ನು ಸ್ವಾಧೀನಪಡಿಸಿಕೊಂಡಿದೆ.
ವಿಜಯಾನಂದಸ್ವಾಮಿ ಬಿಡಿಎ ಹೆಸರಿನಲ್ಲಿ ನಿವೇಶನದ ನಕಲಿ ಹಂಚಿಕೆ ಪತ್ರ ತಯಾರಿಸಿದ್ದ. ಬಿಡಿಎ ಹೆಸರಿನ ನಕಲಿ ರಬ್ಬರ್ ಸ್ಟಾಂಪ್ ಹಾಗೂ ಪ್ರಾಧಿಕಾರದ ಆಯುಕ್ತರ ನಕಲಿ ಸಹಿಯನ್ನು ಬಳಸಿದ್ದ. ಈ ರೀತಿ ಈಗಾಗಲೇ 50ಕ್ಕೂ ಹೆಚ್ಚು ಜನರಿಗೆ ನಿವೇಶನದ ನಕಲಿ ಹಕ್ಕುಪತ್ರಗಳನ್ನು ನೀಡಿ 50 ಸಾವಿರದಿಂದ 3 ಲಕ್ಷಗಳವರೆಗೆ ಹಣವನ್ನು ವಸೂಲಿ ಮಾಡಿ ವಂಚಿಸಿದ್ದಾನೆ ಎಂದು ಬಿಡಿಎ ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಕರ್ನಾಟಕ ಪ್ರದೇಶ ರೈತ ಸಂಘದ ರಾಜ್ಯಾಧ್ಯಕ್ಷ ಎಂದು ಹೇಳಿಕೊಂಡಿದ್ದ ಆರೋಪಿಯು ಈ ಸಂಘದ ಮೂಲಕ ಬಿಡಿಎಯ ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ರಚಿಸಿರುವ ನಿವೇಶನಗಳನ್ನು ರಿಯಾಯಿತಿ ದರದಲ್ಲಿ ಹಂಚಿಕೆ ಮಾಡಿಸಿಕೊಡುತ್ತೇನೆ ಎಂದು ರಮೇಶ್ ಎಂಬಾತನ ಜತೆ ಸೇರಿಕೊಂಡು ಜನರನ್ನು ನಂಬಿಸುತ್ತಿದ್ದ. ಸದಸ್ಯತ್ವ ನೋಂದಣಿಗಾಗಿ ಪ್ರತಿಯೊಬ್ಬರಿಂದ 15ಸಾವಿರ ಪಡೆದು ಸುಮಾರು 1ಸಾವಿರ ಜನರನ್ನು ಸದಸ್ಯರನ್ನಾಗಿ ನೋಂದಾಯಿಸಿಕೊಂಡಿದ್ದಾನೆ.
3 ಸಾವಿರ ಜನರನ್ನು ಸದಸ್ಯರನ್ನಾಗಿಕೊಳ್ಳುವ ಯೋಜನೆಯಿತ್ತು ಎಂದು ಆರೋಪಿಯು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ. ಈ ಸಂಬಂಧ ಶೇಷಾದ್ರಿಪುರ ಠಾಣೆಯಲ್ಲಿ ಆರೋಪಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ ಎಂದು ಬಿಡಿಎ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?: 3 ಲಕ್ಷ ಪಾವತಿಸಿ, ಒಟ್ಟು ಆರು ನಿವೇಶನಗಳ ನಕಲಿ ಹಕ್ಕುಪತ್ರಗಳನ್ನು ಪಡೆದಿದ್ದ ವ್ಯಕ್ತಿಯೊಬ್ಬರು ಅದರ ಅಸಲಿಯತ್ತು ಪರಿಶೀಲಿಸಲು ಬಿಡಿಎ ಉಪ ಕಾರ್ಯ ದರ್ಶಿ-1 ಅವರ ಕಚೇರಿಯನ್ನು ಸಂಪರ್ಕಿಸಿದ್ದರು. ತಕ್ಷಣವೇ ಜಾಗೃತಗೊಂಡ ಉಪ ಕಾರ್ಯದರ್ಶಿ, ಈ ವಿಚಾರವನ್ನು ಬಿಡಿಎ ಆಯುಕ್ತ ಡಾ.ಎಚ್. ಆರ್. ಮಹಾದೇವ್ ಅವರ ಗಮನ ತಂದಿದ್ದರು.
ಆಯುಕ್ತರು ತಕ್ಷಣವೇ ಪ್ರಾಧಿಕಾರದ ಜಾಗೃತ ದಳದ ಸೂಪರಿಂ ಟೆಂಡೆಂಟ್ ಆಫ್ ಪೊಲೀಸ್ ಶಿವಕುಮಾರ್ ಗುನಾರೆ ಅವರಿಗೆ ಈ ವಿಚಾರ ತಿಳಿಸಿ ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಸೂಚಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಜಾಗೃತ ದಳ ಆರೋಪಿಯಾದ ವಿಜಯಾನಂದಸ್ವಾಮಿ ಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ನಕಲಿ ಜಾಲದ ಬಗ್ಗೆ ಗೊತ್ತಾಗಿದೆ.
ಘಟನೆ ಸಂಬಂಧ ಆರೋಪಿಗಳ ವಿರುದ್ಧ ಶೇಷಾದ್ರಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇಂತಹ ವಂಚನೆ ಪ್ರಕರಣ ಗಳ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು.
-ಡಾ.ಎಚ್. ಆರ್. ಮಹಾದೇವ್, ಬಿಡಿಎ ಆಯುಕ್ತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.