Magadi: ಮದುವೆ ನಿಶ್ಚಯವಾಗಿದ್ದ ಯುವ ವಕೀಲೆ ಆತ್ಮಹತ್ಯೆ
Team Udayavani, Aug 24, 2024, 3:12 PM IST
ಮಾಗಡಿ: ಯುವ ವಕೀಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ತಿರುಮಲೆ ಶ್ರೀರಂಗ ಬಡಾವಣೆಯಲ್ಲಿ ನಡೆದಿದೆ.
ಯುವ ವಕೀಲೆ ವಾಸುಕಿ (25) ಸಾವಿಗೆ ಶರಣಾದವರು.
ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಯುವ ವಕೀಲೆ ವಾಸುಕಿ ಮಾಗಡಿಯ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮರಣೋತ್ತರ ಪರೀಕ್ಷೆಗಾಗಿ ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ.
ಈ ಸಂಬಂಧ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇತ್ತೀಚಿಗೆ ಯುವತಿಗೆ ಮದುವೆ ನಿಶ್ಚಯವಾಗಿತ್ತು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.