ಮಾರುಕಟ್ಟೆ ದರದಲ್ಲಿ ವಾಣಿಜ್ಯ ಮಳಿಗೆ ಬಾಡಿಗೆ ಫಿಕ್ಸ್ ಮಾಡಿ: ಡಾ| ನಾರಾಯಣ ಗೌಡ
Team Udayavani, Sep 8, 2020, 8:07 PM IST
ಬೆಂಗಳೂರು: ಕಸದ ಸಮಸ್ಯೆ ಪರಿಹರಿಸಲು ಬರ್ನಿಂಗ್ ಸಿಸ್ಟಮ್ ಅಳವಡಿಸಬೇಕು ಇದರಿಂದ ಗ್ಯಾಸ್ ಹಾಗೂ ಎಲೆಕ್ಟ್ರಿಕಲ್ ಉತ್ಪಾದನೆ ಕೂಡ ಸಾಧ್ಯವಿದೆ ಮತ್ತು ಪೌರಾಡಳಿತ ಇಲಾಖೆ ವ್ಯಾಪ್ತಿಯಲ್ಲಿ ಇದು ಶೀಘ್ರವೇ ಜಾರಿಗೆ ಬರಬೇಕು ಎಂದು ಪ್ರಗತಿ ಪರಿಶೀಲನಾ ಸಭೆಯಲ್ಲಿ ಪೌರಾಡಳಿತ ಇಲಾಖೆ ಸಚಿವ ಡಾ| ನಾರಾಯಣ ಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವಿಕಾಸ ಸೌಧದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕಸದ ಸಮಸ್ಯೆ ಪರಿಹರಿಸುವ ಸಂಬಂಧ ತೆಗೆದುಕೊಂಡಿರುವ ಕ್ರಮದ ಬಗ್ಗೆ ಮಾಹಿತಿ ಪಡೆದ ಸಚಿವರು, ಹಸಿ ಕಸ ಗೊಬ್ಬರ ಮಾಡಬಹುದು ಆದರೆ ಪ್ಲಾಸ್ಟಿಕ್ ಕಸ ಪರಿಸರಕ್ಕೆ ಮಾರಕವಾಗುತ್ತಿದೆ.
ಇದನ್ನು ತಡೆಗಟ್ಟಲು ಬರ್ನಿಂಗ್ ಸಿಸ್ಟಮ್ ಉತ್ತಮ ಮಾರ್ಗ. ಜರ್ಮನ್ ಟೆಕ್ನಾಲಜಿಯ ಸಿಸ್ಟಮ್ ನಲ್ಲಿ ಬರ್ನಿಂಗ್ ಮಾಡಿದ್ರೆ ಕೆಟ್ಟವಾಸನೆ ಕೂಡ ಹರಡಲ್ಲ. ಜೊತೆಗೆ ವಿದ್ಯುತ್ ಹಾಗೂ ಗ್ಯಾಸ್ ಉತ್ಪಾದನೆ ಸಹ ಮಾಡಬಹುದು. ಇದನ್ನ ಯಾವ ರೀತಿಯಲ್ಲಿ ಕಾರ್ಯರೂಪಕ್ಕೆ ತರಬಹುದು ಎಂದು ಯೋಜನೆ ರೂಪಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ರು.
ಚಾಮರಾಜನಗರದಲ್ಲಿ ಕೇರಳದಿಂದ ಬಂದು ಕಸ ಚೆಲ್ಲಿ ಹೋಗುತ್ತಿದ್ದಾರೆ. ಇದಕ್ಕೆ ಅವಕಾಶ ಕೊಡಬಾರದು. ತಕ್ಷಣ ಇದನ್ನ ತಡೆಗಟ್ಟಬೇಕು. ಹಸಿಕಸ ಗೊಬ್ಬರ ಮಾಡುವ ಬಗ್ಗೆಯೂ ಒಂದು ಸ್ಥಳ ನಿಗದಿಮಾಡಬೇಕು. ರಾಜ್ಯದ ಎಲ್ಲ ಕಡೆಯಲ್ಲೂ ಈ ವ್ಯವಸ್ಥೆ ಜಾರಿಗೆ ಬರಲಿ. ಅದಕ್ಕಿಂತ ಮುಂಚಿತವಾಗಿ ಬರ್ನಿಂಗ್ ಸಿಸ್ಟಮ್ ಅಳವಡಿಸುವ ಬಗ್ಗೆ ನೀಲನಕ್ಷೆ ರೂಪಿಸಿ ಎಂದು ಸಚಿವ ನಾರಾಯಣಗೌಡ ಹೇಳಿದ್ದಾರೆ.
ಇದೆ ವೇಳೆ ರಾಜ್ಯದಲ್ಲಿ ಪೌರಾಡಳಿತ ಇಲಾಖೆ ಅಡಿಯಲ್ಲಿರುವ ವಾಣಿಜ್ಯ ಮಳಿಗೆಗಳಿಗೆ ಅವೈಜ್ಞಾನಿಕ ಬಾಡಿಗೆ ಇದೆ. ಈಗಲೂ ನಾಲ್ಕಾರು ನೂರು ರೂಪಾಯಿ ಬಾಡಿಗೆ ತಿಂಗಳಿಗೆ ನಿಗದಿಯಾಗಿದೆ. ಆದರೆ ಬಹಿರಂಗ ಹರಾಜಿನಲ್ಲಿ ವಾಣಿಜ್ಯ ಮಳಿಗೆ ಪಡೆದವರು ಇದನ್ನ ದುಪ್ಪಟ್ಟು ಬಾಡಿಗೆಗೆ ಬೇರೆಯವರಿಗೆ ನೀಡಿದ್ದಾರೆ.
ಇದರಿಂದ ಸರ್ಕಾರಕ್ಕೆ ಬರಬೇಕಾದ ಬಾಡಿಗೆ ಹಣ ಮದ್ಯವರ್ತಿಗಳ ಪಾಲಾಗುತ್ತಿದೆ. ಎಲ್ಲ ಕಡೆ ಸ್ಥಳಿಯ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಮಳಿಗೆಗೆ ಕನಿಷ್ಟ ಬಾಡಿಗೆ ಫಿಕ್ಸ್ ಮಾಡಬೇಕು. ಕೆಲವು ಕಡೆ ಮನಬಂದಂತೆ ಹರಾಜು ಕೂಗುತ್ತಾರೆ. ತಿಂಗಳ ಬಾಡಿಗೆ 40-50 ಸಾವಿರಕ್ಕೆ ಹರಾಜು ಕೂಗುತ್ತಾರೆ.
ಆ ಬಳಿಕ ಯಾರೂ ಬಂದಿಲ್ಲ ಎಂಬ ನೆಪವೊಡ್ಡಿ ನಾಲ್ಕಾರು ಸಾವಿರಕ್ಕೆ ಬಾಡಿಗೆ ನಿಗದಿ ಮಾಡಿ ತಮ್ಮವರಿಗೇ ಮಳಿಗೆಯನ್ನ ಬಾಡಿಗೆಗೆ ನೀಡುವ ಪ್ರಮೇಯ ಸಹ ನಡೆದ ಉದಾಹರಣೆ ಇದೆ. ಇದಕ್ಕೆಲ್ಲ ಕಡಿವಾಣ ಹಾಕಬೇಕು ಎಂದು ಸಚಿವರು ಹೇಳಿದ್ದಾರೆ.
ತೆರಿಗೆ ಸಂಗ್ರಹ ಕೂಡ ಸರಿಯಾದ ರೀತಿಯಲ್ಲಿ ಆಗಬೇಕು. ಪ್ರತಿ ವರ್ಷ ಸ್ಥಳೀಯ ಮಾರುಕಟ್ಟೆಗೆ ಅನುಗುಣವಾಗಿ ಪರಿಷ್ಕರಣೆ ಕೂಡ ಆಗಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಗಮನ ಹರಿಸಿ ಎಂದು ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ನಾರಾಯಣಗೌಡ ಹೇಳಿದ್ದಾರೆ.
ಇಲಾಖೆ ಕಾರ್ಯದರ್ಶಿ ರವಿಶಂಕರ್, ನಿರ್ದೇಶಕಿ ಕಾವೇರಿ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.