ಹುಂಡಿ ಒಡೆದು ನಗದು ದೋಚಿ ಪರಾರಿಯಾದ ದುಷ್ಕರ್ಮಿಗಳು; ಎರಡು ಪ್ರತ್ಯೇಕ ಘಟನೆ ದಾಖಲು
Team Udayavani, Nov 6, 2024, 3:04 PM IST
ಕೆ.ಆರ್.ಪುರ: ದುಷ್ಕರ್ಮಿಗಳ ಗುಂಪೊಂದು ಶ್ರೀ ವಿದ್ಯಾಗಣಪತಿ ದೇವಾಲಯದ ಹಾಗೂ ಶ್ರೀ ವರಸಿದ್ದಿ ವಿನಾಯಕ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿ ಒಡೆದು ನಗದು ದೋಚಿ ಪರಾರಿಯಾಗಿರುವ ಎರಡು ಪ್ರತ್ಯೇಕ ಘಟನೆ ರಾಮಮೂರ್ತಿ ನಗರ ಪೊಲೀಸ್ ವ್ಯಾಪ್ತಿಯಲ್ಲಿ ನ.5ರ ಮಂಗಳವಾರ ನಡೆದಿದೆ.
ರಾಮಮೂರ್ತಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಿಜಿನಾಪುರದ ಎಫ್.ಸಿ.ಐ. ಗೋದಾಮಿನ ಮುಖ್ಯರಸ್ತೆಯಲ್ಲಿರುವ ಶ್ರೀ ವಿದ್ಯಾಗಣಪತಿ ದೇವಸ್ಥಾನದ ಒಳಗೆ ನ.5ರ ಮಂಗಳವಾರ ತಡರಾತ್ರಿ ಸುಮಾರು 1:15ಕ್ಕೆ ಕೆಂಪುಬಣ್ಣದ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ದೇವಸ್ಥಾನದ ಬಾಗಿಲು ಮುರಿದು ಹುಂಡಿಯನ್ನು ತೆಗೆದುಕೊಂಡು ಹೋಗಿದ್ದು, ಬಳಿಕ ಹುಂಡಿಯಲ್ಲಿನ ನಗದನ್ನು ತೆಗೆದು ಖಾಲಿ ಹುಂಡಿಯನ್ನು ಪಕ್ಕದ ಗ್ಯಾಸ್ ಗೋಡೌನ್ ಬಳಿ ಎಸೆಯಲಾಗಿದೆ.
ಅದೇ ವಾಹನದಲ್ಲಿ ಸುಮಾರು 1.57ಕ್ಕೆ ಬಂದು ದುಷ್ಕರ್ಮಿಗಳು ಪಕ್ಕದ ರಸ್ತೆಯ ವಿನಾಯಕ ಸುಬ್ರಹ್ಮಣ್ಯ ರಸ್ತೆಯಲ್ಲಿರುವ ಶ್ರೀ ವರಸಿದ್ಧಿ ವಿನಾಯಕ ಸುಬ್ರಹ್ಮಣ್ಯ ದೇವಸ್ಥಾನದ ಬಾಗಿಲು ಒಡೆದು ಒಳಪ್ರವೇಶಿಸಿ ದೇವಸ್ಥಾನದ ಹುಂಡಿ ಒಡೆದು ನಗದು ಕಳವು ಮಾಡಿ ಪರಾರಿಯಾಗಿರುವ ಘಟನೆ ಪ್ರತ್ಯೇಕ ಎರಡು ಕಡೆ ನಡೆದಿದೆ.
ಕ್ಷಣಾರ್ಧದಲ್ಲಿ ಇಬ್ಬರು ದುಷ್ಕರ್ಮಿಗಳು ಎರಡು ದೇವಾಲಯದ ಹುಂಡಿ ಒಡೆದು ಕಳವು ಮಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ನ.6ರ ಬುಧವಾರ ಬೆಳಿಗ್ಗೆ ಅರ್ಚಕರು ಎಂದಿನಂತೆ ಪೂಜೆ ನಿಮಿತ್ತವಾಗಿ ದೇವಾಲಯ ಬಳಿ ಬಂದಾಗ ಕಳವು ಆಗಿರುವುದು ಬೆಳಕಿಗೆ ಬಂದಿದೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ರಾಮಮೂರ್ತಿ ನಗರ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್
Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.