ಪೊಲೀಸ್ ಸೋಗಿನಲ್ಲಿ ಮೊಬೈಲ್ ಕಳವು; ಬಂಧನ
Team Udayavani, Jun 25, 2020, 5:09 AM IST
ಬೆಂಗಳೂರು: ಪೊಲೀಸ್ ಸಿಬ್ಬಂದಿ ಸೋಗಿನಲ್ಲಿ ಬಂದು ಸಾರ್ವಜನಿಕರ ಮೊಬೈಲ್ ಕಳವು ಮಾಡುತ್ತಿದ್ದವನನ್ನು ಸುಬ್ರಹ್ಮಣ್ಯನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ನಕಲಿ ಪೊಲೀಸ್ ಗಾಯಿತ್ರಿನಗರದ ಆರ್. ಮಹೇಶ್ ನಾಯ್ಕ (42). ಆರೋಪಿಯಿಂದ 2.87 ಲಕ್ಷ ಮೌಲ್ಯದ ವಿವಿಧ ಕಂಪನಿಯ 20 ಮೊಬೈಲ್ ಫೋನ್‌ಗಳು ಹಾಗೂ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳ ಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿ ಕೆಲ ವರ್ಷಗಳಿಂದ ಕಳ್ಳತನ ಕೃತ್ಯದಲ್ಲಿ ತೊಡಗಿದ್ದು, ಈ ಮೊದಲು ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ರೋಗಿ ಗಳು ಹಾಗೂ ಅವರ ಸಂಬಂಧಿ ಕರು ಚಾರ್ಜ್‌ಗೆ ಹಾಕುತ್ತಿದ್ದ ಮೊಬೈಲ್‌ಗಳನ್ನು ಕಳವು ಮಾಡುತ್ತಿದ್ದ. 2019 ರಲ್ಲಿ ಜೆ.ಸಿ. ನಗರ ಠಾಣಾ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನ ಕಳವು ಮಾಡಿ, ನಂಬರ್ ಪ್ಲೇಟ್ ಬದಲಾಯಿಸಿ ನಕಲಿ ನಂಬರ್ ಪ್ಲೇಟ್ ಹಾಕಿಕೊಂಡಿ ದ್ದ. ದ್ವಿಚಕ್ರ ವಾಹನದ ಮೇಲೆ ಪೊಲೀಸ್ ಎಂದು ಬರೆಸಿಕೊಂಡು ಸಾರ್ವಜನಿಕರಿಗೆ ಪೊಲೀಸ್ ಎಂದು ಹೇಳಿಕೊಂಡು ಮೊಬೈಲ್ ಫೋನ್‌ಗಳನ್ನು ಕಳವು ಮಾಡುತ್ತಿದ್ದ ಎಂದು ಪೊಲೀಸರು ಹೇಳಿದರು.
ಇತ್ತೀಚೆಗೆ ಆರೋಪಿ ರಸ್ತೆ ಬದಿ ಕಾರು ನಿಲ್ಲಿಸಿಕೊಂಡು ನಿಂತಿದ್ದ ವೇದಮೂರ್ತಿ ಎಂಬವರನ್ನು “ನಾನು ಪೊಲೀಸ್ ಆಗಿದ್ದು, ತಮ್ಮ ಅಧಿಕಾರಿಯವರ ಮನೆಗೆ ಬಾಡಿಗೆ ಕಾರು ಬೇಕಾಗಿರುತ್ತದೆ. ಆದರಿಂದ ನೀವು ನನ್ನ ಜತೆಯಲ್ಲಿ ಬನ್ನಿ’ ಎಂದು ರಾಜಾಜಿನಗರದ 17 ಕ್ರಾಸ್‌ನಲ್ಲಿ ಕರೆದುಕೊಂಡು ಹೋಗಿ ಅಧಿಕಾರಿಗೆ ಕರೆ ಮಾಡಬೇಕೆಂದು ಮೊಬೈಲ್ ಪಡೆದು, ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.