Bengaluru: ನಗರದಲ್ಲಿ ಶಂಕಿತ ನಕ್ಸಲ್ ಬಂಧನ ಪ್ರಕರಣ: ಎನ್‌ಐಎಗೆ ವರ್ಗಾವಣೆ
ಬೆಂಗಳೂರಿನಲ್ಲಿ ಗೆಳತಿಯನ್ನು ನೋಡಲು ಬಂದು ಸಿಕ್ಕಿಬಿದ್ದಿದ್ದ ಆರೋಪಿ
Team Udayavani, Oct 25, 2024, 2:58 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ನಿಷೇಧಿತ ಸಿಪಿಐ ಸಂಘಟನೆ ಯಲ್ಲಿ ಸಕ್ರಿಯ ಸದಸ್ಯನಾಗಿದ್ದ ಶಂಕಿತ ನಕ್ಸಲ್ ತಮಿಳುನಾಡು ಮೂಲದ ಅನಿರುದ್ಧ ರಾಜ್ ಬಂಧನ ಪ್ರಕರಣವನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು, ಪ್ರಕರಣವನ್ನು ಎನ್‌ಐಎಗೆ ವರ್ಗಾವಣೆ ಮಾಡಿದ್ದಾರೆ.
ಸೆ. 6 ರಂದು ತಮಿಳುನಾಡು ಮೂಲದ ಅನಿರುದ್ ರಾಜನ್‌ನನ್ನು ಸಿಸಿಬಿ ಮತ್ತು ಎಟಿಸಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮೆಜೆಸ್ಟಿಕ್ ಬಸ್ ನಿಲ್ದಾಣದ ಬಳಿ ಬಂಧಿಸಿದ್ದರು.
ಸಿಪಿಐ ಮಾವೋವಾದಿಗಳ ಪರವಾಗಿ ಕೆಲಸ ಮಾಡುತ್ತಿದ್ದ ಅನಿರುದ್ಧ ನಿಷೇಧಿತ ಬರಹಗಳನ್ನು ಪ್ರಚುರಪಡಿಸುತ್ತಿದ್ದ. ಇದುವರೆಗೂ ಯಾವ ಪೊಲೀಸರಿಗೂ ಸಿಕ್ಕಿಬಿದ್ದಿರಲಿಲ್ಲ. ಗೆಳತಿ ನೋಡಲು ಬೆಂಗಳೂರಿಗೆ ಬಂದಿದ್ದ ಅನಿರುದ್ ನಿಷೇಧಿತ ಸಂಘಟನೆ ಪರ ಕೆಲಸ ಮಾಡುತ್ತಿದ್ದ. ಹಣ ಸಂಗ್ರಹ ಹಾಗೂ ಗುಪ್ತ ಸಭೆ ನಡೆಸುತ್ತಿದ್ದ. ಸೆ. 6 ರ ಬೆಳಗ್ಗೆ ಮೆಜೆಸ್ಟಿಕ್‌ನಿಂದ ಚೆನ್ನೈಗೆ ಹೋಗಲು ಯತ್ನಿಸುತ್ತಿರುವಾಗ ಬಸ್ ನಿಲ್ದಾಣ ಬಳಿ ಆತನನ್ನು ಬಂಧಿಸಲಾಗಿತ್ತು.
ವಿಕಾಸ್ ಘಾಡ್ಗೆ ಎಂಬ ಹೆಸರಿನಲ್ಲಿ ನಕಲಿ ಆಧಾರ್ ಕಾರ್ಡ್ ಮಾಡಿಕೊಂಡಿದ್ದ. ಬಂಧಿತ ನಿಂದ 2 ಬ್ಯಾಗ್‌ಗಳು, ಪೆನ್‌ಡ್ರೈವ್, ಟ್ಯಾಬ್ ವಶಕ್ಕೆ ಪಡೆಯಲಾಗಿತ್ತು. ಆರೋಪಿ ವಿರುದ್ಧ ಉಪ್ಪಾರ ಪೇಟೆ ಪೊಲೀಸ್ ಠಾಣೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ ಯಡಿ (ಯುಎಪಿಎ) ಪ್ರಕರಣ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
KMC: ನವೀಕೃತ ವೈದ್ಯಕೀಯ ಆಂಕೊಲಾಜಿ ಹೊರರೋಗಿ, ಕಿಮೊಥೆರಪಿ ಡೇ ಕೇರ್ ಕೇಂದ್ರ ಉದ್ಘಾಟನೆ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.