ಮೆಟ್ರೋ 31ರವರೆಗೆ ಇಲ್ಲ


Team Udayavani, May 18, 2020, 5:15 AM IST

metro-31

ಬೆಂಗಳೂರು: ಲಾಕ್‌ಡೌನ್‌ 3.0 ಮುಗಿಯುತ್ತಿದ್ದಂತೆ ವಾಣಿಜ್ಯ ಸಂಚಾರ ಸೇವೆ ಪುನಾರಂಭಿಸಲು ತುದಿಗಾಲಲ್ಲಿ ನಿಂತಿದ್ದ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಉತ್ಸಾಹಕ್ಕೆ ಭಾನುವಾರ ಕೇಂದ್ರ ಹೊರಡಿಸಿದ ಲಾಕ್‌ಡೌನ್‌ 4.0 ಮಾರ್ಗಸೂಚಿ ಸದ್ಯಕ್ಕೆ ತಣ್ಣೀರೆರಚಿದೆ.

“ನಮ್ಮ ಮೆಟ್ರೋ’ ರೈಲು ಮತ್ತು ಬಸ್‌ಗಳ ಸ್ವತ್ಛತೆ, ಗುರುತು ಹಾಕುವಿಕೆ, ಎಲ್ಲಾ ಸಿಬ್ಬಂದಿಗೆ ಕಡ್ಡಾಯವಾಗಿ ಹಾಜರಾಗುವಂತೆ ಸೂಚನೆ, ಥರ್ಮಲ್‌ ಸ್ಕ್ಯಾನರ್‌, ಸ್ಯಾನಿಟೈಸರ್‌ ಮತ್ತಿತರ ಉಪಕರಣಗಳ ಪೂರೈಕೆ ಒಳಗೊಂಡಂತೆ ಪೂರ್ವಸಿದಟಛಿತೆ ಮಾಡಿಕೊಳ್ಳುತ್ತಿತ್ತು.

ಬಿಎಂಟಿಸಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಷರತ್ತುಬದಟಛಿ ಅನುಮತಿ ನೀಡುವಂತೆ ಯೂ ಕೇಂದ್ರಕ್ಕೆ ಮನವಿ ಮಾಡಿತ್ತು.  ಆದರೆ, ಲಾಕ್‌ಡೌನ್‌ ಮುಂದುವರಿದ ಹಿನ್ನೆಲೆಯಲ್ಲಿ ಸಮೂಹ ಸಾರಿಗೆ ಸೇವೆಗಳಿಗೆ ತಾತ್ಕಾಲಿಕ ಬ್ರೇಕ್‌ ಬಿದ್ದಿದೆ. ಬಿಎಂಟಿಸಿ ಬಸ್‌ ಸೇವೆ ಬಗ್ಗೆ ರಾಜ್ಯ ಸರ್ಕಾರ ಸೋಮವಾರ ನಿರ್ಧಾರ ಕೈಗೊಳ್ಳಲಿದೆ.

ಈ ಮಧ್ಯೆ ಕೇಂದ್ರ ಸರ್ಕಾರ ಲಾಕ್‌ಡೌನ್‌ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಿರುವ ಹಿನ್ನೆಲೆಯಲ್ಲಿ,  ಅಲ್ಲಿಯವರೆಗೂ ಮೆಟ್ರೋ ರೈಲು ಸಂಚಾರ ಸ್ಥಗಿತ ಮುಂದುವರಿಯಲಿದೆ. ಮೆಟ್ರೋ ನಿಲ್ದಾಣಗಳ ಬಳಿಯ ವಾಹನ ನಿಲುಗಡೆ ಸ್ಥಳ ಮತ್ತು ನಿಲ್ದಾಣದೊಳಗಿನ ವಾಣಿಜ್ಯ ಮಳಿಗೆಗಳಿಗೂ ಇದು ಅನ್ವಯ ಆಗಲಿದೆ. ರೈಲುಗಳನ್ನು ಸುಸ್ಥಿತಿಯಲ್ಲಿ ಮತ್ತು ಪವರ್‌ ಮೋಡ್‌ನ‌ಲ್ಲಿ ಇರಿಸುವ ಉದ್ದೇಶದಿಂದ ಒಂದು ಪರೀಕ್ಷಾರ್ಥ ರೈಲು ನೇರಳೆ ಹಾಗೂ ಹಸಿರು ಮಾರ್ಗಗಳಲ್ಲಿ ಬೆಳಗ್ಗೆ ಮತ್ತು ಸಂಜೆ ಸಂಚರಿಸಲಿ ದೆ ಎಂದು ಬಿಎಂಆರ್‌ಸಿಎಲ್‌ ಸ್ಪಷ್ಟಪಡಿಸಿದೆ.

ಆದೇಶಕ್ಕಾಗಿ ಕಾಯುತ್ತಿದ್ದೇವೆ: ಕೇಂದ್ರ ಸರ್ಕಾರ ಈಗ ಹೊರಡಿಸಿರುವ ಲಾಕ್‌ಡೌನ್‌ ಮಾರ್ಗಸೂಚಿಗಳಲ್ಲಿ ಬಸ್‌ಗಳು ನಿರ್ಬಂಧಿತ ಪಟ್ಟಿಯಲ್ಲಿ ಇಲ್ಲ. ರಾಜ್ಯ ಸರ್ಕಾರವೇ ಈ ಕುರಿತು ತೀರ್ಮಾನ ಕೈಗೊಳ್ಳಬೇಕು. ಈಗಾಗಲೇ, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಮೇ 19ರವರೆಗೆ ಬಸ್‌ ಸಂಚಾರ ಬೇಡ ಎಂದಿದ್ದಾರೆ. ಆದರೆ, ಸೋಮವಾರ (ಮೇ 18) ಈ ಕುರಿತು ಸಭೆ ನಡೆಯಲಿದ್ದು, ಅಂತಿಮ ತೀರ್ಮಾನ ಹೊರಬೀಳಲಿದೆ. ಯಾವುದಕ್ಕೂ ಮುಂದಿನ ಆದೇಶಕ್ಕಾಗಿ ಕಾಯುತ್ತಿದ್ದೇವೆ ಎಂದು  ಬಿಎಂಟಿಸಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಸರ್ಕಾರಿ ಸಾರಿಗೆ ಬಸ್‌ಗಳ ಸಂಚಾರ ಪುನಾರಂಭದ ಬಗ್ಗೆ (ಮೇ 18)ಸೋಮವಾರ ಬೆಳಗ್ಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು.
-ಲಕ್ಷ್ಮಣ ಸವದಿ, ಸಾರಿಗೆ ಸಚಿವ

ಟಾಪ್ ನ್ಯೂಸ್

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

Bengaluru: ಹಸುಗೂಸನ್ನೂ ಕೊಲ್ಲಲು ಯತ್ಲಿಸಿದ ತಂದೆಯ ಹತ್ಯೆ

4

Arrested: ದುಬೈ ಸೈಬರ್‌ ವಂಚಕರಿಗೆ ನೆರವು: 10 ಮಂದಿ ಸೆರೆ

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರಿಂದ ಅಪ್ರಾಪ್ತೆಯ ಫೋಟೋ ಕೇಸ್‌: ನೋಟಿಸ್‌

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಪೊಲೀಸರ ಬೇಟೆ; 26 ಕೋಟಿ ರೂ. ಮಾದಕ ವಸ್ತು ವಶ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.