ಗುತ್ತಿಗೆ ಆಸ್ತಿಗಳಿಗೆ ದರ ನಿಗದಿ


Team Udayavani, Jun 11, 2020, 5:20 AM IST

mayor dara

ಬೆಂಗಳೂರು: ನಗರದಲ್ಲಿ ಗುತ್ತಿಗೆ ಅವಧಿ ಮುಗಿದಿರುವ ಹಾಗೂ ಇನ್ನೂ ಚಾಲ್ತಿಯಲ್ಲಿರುವ ಒಟ್ಟು 324 ಆಸ್ತಿಗಳಿಗೆ ಸದ್ಯದ ಮಾರುಕಟ್ಟೆ ದರ ನಿಗದಿ ಮಾಡಲು ನಿರ್ಧರಿಸಲಾಗಿದೆ ಎಂದು ಮೇಯರ್‌ ಎಂ.ಗೌತಮ್‌ಕುಮಾರ್‌ ತಿಳಿಸಿದ್ದಾರೆ. ಪಾಲಿಕೆಯ ಆಸ್ತಿ ಸಂರಕ್ಷಣೆ, ತೆರಿಗೆ ಸಂಗ್ರಹ ಹಾಗೂ ಗುತ್ತಿಗೆ ದರ ನಿಗದಿ ಮಾಡುವ ಸಂಬಂಧ ಬುಧವಾರ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಮೇಯರ್‌ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಬಿಬಿಎಂಪಿಯಿಂದ ವಿವಿಧ ಸಂಘ-ಸಂಸ್ಥೆಗಳು  ಹಾಗೂ ಸೇವಾ ಸಂಸ್ಥೆಗಳಿಗೆ ಕಡಿಮೆ ದರಕ್ಕೆ ಗುತ್ತಿಗೆ ನೀಡಲಾಗಿದೆ. ಈ ರೀತಿ ಒಟ್ಟು 324 ವಿವಿಧ ಸಂಘ ಸಂಸ್ಥೆಗಳು ಹಾಗೂ ಸಮಾಜ ಸೇವಾ ಸಂಸ್ಥೆಗಳಿಗೆ ಗುತ್ತಿಗೆ ನೀಡಲಾಗಿದೆ. ಇವುಗಳಲ್ಲಿ 159  ಆಸ್ತಿಗಳ ಗುತ್ತಿಗೆ ಅವಧಿ ಮುಕ್ತಾಯವಾಗಿದ್ದು, 165 ಆಸ್ತಿಗಳ ಗುತ್ತಿಗೆ ಅವಧಿ ಇನ್ನೂ ಬಾಕಿ ಇದೆ. ಎಲ್ಲವನ್ನೂ ಸದ್ಯದ ಮಾರುಕಟ್ಟೆ ದರಕ್ಕೆ ನಿಗದಿ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ಆಸ್ತಿಗಳ ವಿಭಾಗಕ್ಕೆ  ವಿಶೇಷ ತಂಡ: ಪಾಲಿಕೆಯ ಆಸ್ತಿ ಸಂರಕ್ಷಿಸುವ ನಿಟ್ಟಿನಲ್ಲಿ ವಿಶೇಷ ತಂಡ ರಚಿಸಲು ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ ಎಂದ ಮೇಯರ್‌, ತಹಶೀಲ್ದಾರ್‌ಗಳು, ಸಹಾ  ಯಕ ಕಂದಾಯ ಅಧಿಕಾರಿಗಳು, ಎಂಜಿನಿಯರ್‌ ಗಳು ಹಾಗೂ ಸರ್ವೇಯರ್‌ಗಳ ವಿಶೇಷ ತಂಡ ರಚಿಸಿ ಆಸ್ತಿಗಳ ವಿಭಾಗ ಬಲಪಡಿ ಸಲು ಸೂಚಿಸಲಾಗಿ ದೆ. ಪಾಲಿಕೆ ವ್ಯಾಪ್ತಿಯ ಎಂಟು ವಲಯಗಳ ಉಪ ಆಯುಕ್ತರಿಗೆ ಆಸ್ತಿಗಳ ಜವಾಬ್ದಾರಿ ನೀಡುವು ದು ಹಾಗೂ ಎಲ್ಲ ಆಸ್ತಿಗಳ ದಾಖಲೆಗಳನ್ನು ಡಿಜಿಟಲ್‌ ರೂಪದಲ್ಲಿ ಸಂಗ್ರಹಿಸಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ನಗರದಲ್ಲಿ ವಿವಿಧ ಇಲಾಖೆಗಳಿಂದ ಪಾಲಿಕೆಗೆ ಹಸ್ತಾಂತರವಾಗುವ ಆಸ್ತಿಗಳನ್ನು ಮೇಲ್ವಿಚಾರಣೆ ಮಾಡುವುದು ಹಾಗೂ ಆಸ್ತಿ ಗುರುತಿನ  ಸಂಖ್ಯೆ (ಪಿಐಡಿ) ನೀಡುವುದಕ್ಕೆ ಕ್ರಮ ವಹಿಸುವಂತೆ ಸೂಚನೆ ನೀಡಲಾಗಿದೆ. ನ್ಯಾಯಾಲಯಗಳಲ್ಲಿರುವ ಆಸ್ತಿ ಸಂಬಂಧಿತ ಪ್ರಕರಣಗಳನ್ನು 15 ದಿನಗಳಲ್ಲಿ ಇತ್ಯರ್ಥಪಡಿಸಲು ಕಾನೂನು ಕೋಶ ಸಹಾಯ ಪಡೆಯುವಂತೆ ನಿರ್ದೇಶಿಸಲಾಗಿದೆ ಎಂದು ಮಾಹಿತಿ ನೀಡಿದರು. ಪಾಲಿಕೆ ವಿರೋಧ ಪಕ್ಷದ ನಾಯಕ ಅಬ್ದುಲ್‌ ವಾಜಿದ್‌, ವಿಶೇಷ ಆಯುಕ್ತ (ಆಸ್ತಿ ವಿಭಾಗ) ಮಂಜುನಾಥ್‌, ಕಾನೂನು ಕೋಶದ ಮುಖ್ಯಸ್ಥ ದೇಶಪಾಂಡೆ, ವಲಯ ಜಂಟಿ ಮತ್ತಿತರರು ಹಾಜರಿದ್ದರು.

ಆಸ್ತಿಗಳ ಸಂರಕ್ಷಣೆಗೆ ಬಿಬಿಎಂಪಿ ಬಜೆಟ್‌ನಲ್ಲಿ 20 ಕೋಟಿ ರೂ. ಮೀಸಲಿಡಲಾಗಿದೆ. ಕೆಲವು ಸಂಘ-ಸಂಸ್ಥೆಗಳು ಗುತ್ತಿಗೆ ಆಧಾರದ ಮೇಲೆ ಪಡೆದ ಕಟ್ಟಡಗಳನ್ನು ದುರುಪಯೋಗ ಪಡೆಸಿಕೊಳ್ಳುತ್ತಿರುವುದು ಬೆಳಕಿಗೆ ಬಂದಿದ್ದು, ಅವುಗಳನ್ನು  ವಶಕ್ಕೆಪಡೆಯಲಾಗುವುದು.
-ಬಿ.ಎಚ್‌.ಅನಿಲ್‌ಕುಮಾರ್‌, ಬಿಬಿಎಂಪಿ ಆಯುಕ್ತ

ಟಾಪ್ ನ್ಯೂಸ್

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Delhi-Air

Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!

north

Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್‌ ಪರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.