ಪಿಎಸ್‌ಐ ಅಕ್ರಮ ಪ್ರಕರಣ: ಆರೋಪಿಗಳ ಜಾಮೀನಿಗೆ ಪ್ರಬಲ ಆಕ್ಷೇಪ

ತಪ್ಪಿತಸ್ಥರನ್ನು ಕಠಿಣವಾಗಿ ದಂಡಿಸುವುದು ಸರ್ಕಾರದ ಜವಾಬ್ದಾರಿಯಲ್ಲವೇ?

Team Udayavani, Jul 21, 2022, 1:19 PM IST

ಪಿಎಸ್‌ಐ ಅಕ್ರಮ ಪ್ರಕರಣ: ಆರೋಪಿಗಳ ಜಾಮೀನಿಗೆ ಪ್ರಬಲ ಆಕ್ಷೇಪ

ಬೆಂಗಳೂರು: ಪಿಎಸ್‌ಐ ನೇಮಕ ಅಕ್ರಮ ಪ್ರಕರಣದ ತನಿಖೆಯನ್ನು ಹೈಕೋರ್ಟ್‌ ಮುಂದೆ ಬಲವಾಗಿ ಸಮರ್ಥಿಸಿ ಕೊಂಡಿರುವ ಸರ್ಕಾರ, ಯಾವುದೇ ಲೋಪಕ್ಕೆ ಅವಕಾಶವಿಲ್ಲದೆ ಪಾರದರ್ಶಕ ರೀತಿಯಲ್ಲಿ ಅತ್ಯಂತ ವೈಜ್ಞಾನಿಕ, ವೃತ್ತಿಪರ ಮತ್ತು ಕಾನೂನಾತ್ಮಕವಾಗಿ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದೆ.

ಪ್ರಕರಣದಲ್ಲಿ ಆರೋಪಿಗಳಾಗಿರುವ ಸಿ.ಎನ್‌. ಶಶಿಧರ್‌, ಆರ್‌. ಶರತ್‌ ಕುಮಾರ್‌, ಎಚ್‌.ಯು.ರಘುವೀರ್‌, ಕೆ.ಸಿ. ದಿಲೀಪ್‌ ಕುಮಾರ್‌, ಎಚ್‌.ಆರ್‌. ಪ್ರವೀಣ್‌ ಕುಮಾರ್‌, ಕೆ.ಸೂರ್ಯ ನಾರಾಯಣ ಅವರು ಸಲ್ಲಿಸಿರುವ ಜಾಮೀನು ಅರ್ಜಿಗಳನ್ನು ನ್ಯಾಯಮೂರ್ತಿ ಎಚ್‌. ಪಿ. ಸಂದೇಶ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರವಾದ ಮಂಡಿಸಿದ ವಿಶೇಷ ಸರ್ಕಾರಿ ಅಭಿಯೋಜಕ (ಎಸ್‌ ಪಿಪಿ) ವಿ.ಎಸ್‌. ಹೆಗ್ಡೆ, ಅರ್ಜಿದಾರರು ಎಸಗಿರುವುದು ಸಾಮಾನ್ಯ ಅಪರಾಧ ಕೃತ್ಯವಲ್ಲ. ಇದೊಂದು ದೊಡ್ಡ ಹಗರಣ ಹಾಗೂ ಸಮಾಜದ ಮೇಲಿನ ಭಯೋತ್ಪಾದನೆಯಾಗಿದೆ. ಒಟ್ಟು 545 ಪಿಎಸ್‌ಐ ಹುದ್ದೆಗಳಿಗೆ 50 ಸಾವಿರಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ.

ಆದರೆ, ಅರ್ಜಿದಾರರು, ಕೆಲ ಪೊಲೀಸ್‌ ಅಧಿಕಾರಿಗಳು, ಮಧ್ಯವರ್ತಿಗಳು ಮತ್ತು ಅಭ್ಯರ್ಥಿಗಳು ಅಕ್ರಮ ನಡೆಸಿ ಇಡೀ ನೇಮಕಾತಿ ಪ್ರಕ್ರಿಯೆ ರದ್ದುಮಾಡುವ ಪರಿಸ್ಥಿತಿ ಸೃಷ್ಟಿಸಿದ್ದಾರೆ. ಅಭ್ಯರ್ಥಿಗಳ ಒಎಂಆರ್‌ ಶೀಟ್‌ಗಳನ್ನು ತಿದ್ದಲಾಗಿದೆ. ತನಿಖೆ ಇನ್ನೂ ಪ್ರಗತಿಯಲ್ಲಿದ್ದು, ಹಲವು ಆಯಾಮಗಳಲ್ಲಿ ತನಿಖೆ ನಡೆಸಬೇಕಿದೆ. ಹೀಗಾಗಿ ಆರೋಪಿಗಳಿಗೆ ಯಾವುದೇ ಕಾರಣಕ್ಕೂ ಜಾಮೀನು ಮಂಜೂರು ಮಾಡಬಾರದು ಎಂದು ನ್ಯಾಯಾಲಯವನ್ನು ಬಲವಾಗಿ ಕೋರಿಕೊಂಡರು.

ಬೇಲಿ ಎದ್ದು ಹೊಲ ಮೇಯಲು ಬಿಟ್ಟಿದ್ದೇಕೆ?: ಎಸ್‌ಪಿಪಿ ವಾದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಅಕ್ರಮ ನಡೆಸಲು ಅಧಿಕಾರಿಗಳೇ ಬಾಗಿಲು ತೆರೆದಿದ್ದಾರಲ್ಲವೇ? ಬೇಲಿಯೇ ಎದ್ದು ಹೊಲ ಮೇಯಲು ಬಿಟ್ಟಿದ್ದೇಕೆ? ಹಗರಣದಲ್ಲಿ ಭಾಗಿಯಾಗಿರುವ “ಕಪ್ಪು ಕುಳಗಳನ್ನು’ ಪತ್ತೆ ಹಚ್ಚುವುದು ಸರ್ಕಾರದ ಕರ್ತವ್ಯವಲ್ಲವೇ? ತಪ್ಪಿತಸ್ಥರನ್ನು ಕಠಿಣವಾಗಿ ದಂಡಿಸುವುದು ಸರ್ಕಾರದ ಜವಾಬ್ದಾರಿಯಲ್ಲವೇ? ಎಂದು ಪ್ರಶ್ನಿಸಿತು.

ಅದಕ್ಕೆ ಉತ್ತರಿಸಿದ ಎಸ್‌ಪಿಸಿ, ಯಾವುದೇ ಲೋಪಕ್ಕೆ ಅವಕಾಶವಿಲ್ಲದೆ ಪಾರದರ್ಶಕ ರೀತಿಯಲ್ಲಿ ಅತ್ಯಂತ ವೈಜ್ಞಾನಿಕ, ವೃತ್ತಿಪರ ಮತ್ತು ಕಾನೂನಾತ್ಮಕವಾಗಿ ತನಿಖೆ ನಡೆಸಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ತೀರ್ಪು ಕಾಯ್ದಿರಿಸಿದ ಹೈಕೋರ್ಟ್‌: ಆರೋಪಿಗಳಿಗೆ ಜಾಮೀನು ನೀಡುವಂತೆ ಅರ್ಜಿದಾರರ ಪರ ವಕೀಲರು ಮನವಿ ಮಾಡಿದರು. ಜಾಮೀನು ನೀಡಬಾರದು. ದಂಡ ವಿಧಿಸಿ ಜಾಮೀನು ಅರ್ಜಿಗಳನ್ನು ವಜಾಗೊಳಿಸಬೇಕು ಎಂದು ಸರ್ಕಾರ ಬಲವಾಗಿ ವಾದಿಸಿತು. ವಾದ-ಪ್ರತಿವಾದ ಆಲಿಸಿ, ವಿಚಾರಣೆ ಪೂರ್ಣಗೊಳಿಸಿದ ನ್ಯಾಯಪೀಠ ತೀರ್ಪು ಕಾಯ್ದಿರಿಸಿತು. ಸಾಧ್ಯವಾದರೆ ಶುಕ್ರವಾರ ತೀರ್ಪು ಪ್ರಕಟಿಸುವುದಾಗಿಯೂ ನ್ಯಾಯಪೀಠ ಹೇಳಿತು.

ಅಮೃತ್‌ ಪೌಲ್‌ ತನಿಖೆಗೆ ಸಹಕರಿಸುತ್ತಿಲ್ಲ
ಪ್ರಕರಣದಲ್ಲಿ ನೇಮಕಾತಿ ವಿಭಾಗದ ಎಡಿಜಿಪಿ ಅಮೃತ್‌ ಪೌಲ್‌, ಸಬ್‌ ಇನ್ಸ್‌ಪೆಕ್ಟರ್‌ ಸೇರಿದಂತೆ ಕೆಲ ಪೊಲೀಸ್‌ ಅಧಿಕಾರಿಗಳೇ ಭಾಗಿಯಾಗಿದ್ದಾರೆ. ಇದರಿಂದ ಇಡೀ ಪೊಲೀಸ್‌ ಇಲಾಖೆಗೆ ಕೆಟ್ಟ ಹೆಸರು ಬಂದಿದೆ. ಇದಲ್ಲದೇ ಇನ್ನೂ ಹಲವು “ಕಪ್ಪು ಕುಳ’ಗಳು ಹಗರಣದಲ್ಲಿ ಭಾಗಿಯಾಗಿದ್ದು, ಅವರನ್ನು ಪತ್ತೆ ಹಚ್ಚಬೇಕಿದೆ.

ಮಧ್ಯವರ್ತಿಗಳೊಂದಿಗಿನ ಮಾತುಕತೆಯ ಸಿಡಿಆರ್‌ ಲಭ್ಯವಾಗಿದೆ. ಅಮೃತ್‌ ಪೌಲ್‌ ತನಿಖೆಗೆ ಸಹಕರಿಸದ ಕಾರಣ ಮಂಪರು ಪರೀಕ್ಷೆಗೆ ಅನುಮತಿ ಕೋರಲಾಗಿದೆ. ಅವರ ಫೋನ್‌ ಅನ್ನು ಎಫ್ಎಸ್‌ ಎಲ್‌ಗೆ ಕಳಿಸಲಾಗಿದೆ. ನೇಮಕಾತಿ ವಿಭಾಗದ ಹೆಡ್‌ ಕಾನ್ಸ್‌ಟೇಬಲ್‌ ಶ್ರೀಧರ್‌ ಎಂಬುವರಿಂದ 2 ಕೋಟಿ ರೂ. ಹಣ ವಶಕ್ಕೆ ಪಡೆಯಲಾಗಿದೆ. ಹಗರಣದಲ್ಲಿ ಆರೋಪಿಯಾಗಿರುವ ಬ್ಯಾಡರಹಳ್ಳಿ ಪೊಲೀಸ್‌ ಠಾಣೆ ಪಿಎಎಸ್‌ಐ ನವೀನ್‌ ಪ್ರಸಾದ್‌ ನಾಪತ್ತೆಯಾಗಿದ್ದಾರೆ. ಹಾಗಾಗಿ ಜಾಮೀನು ಅರ್ಜಿಗಳನ್ನು ದಂಡ ವಿಧಿಸಿ ವಜಾಗೊಳಿಸಬೇಕು ಎಂದು ಎಸ್‌ಪಿಪಿ ವಿ.ಎಸ್‌. ಹೆಗ್ಡೆ ಮನವಿ ಮಾಡಿದರು.

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.