ಬೆಂಗಳೂರಿಗೆ ಕಾಲಿಟ್ಟವರೆಲ್ಲಾ ಕ್ವಾರಂಟೈನ್‌?


Team Udayavani, May 12, 2020, 9:04 AM IST

bang bbmp

ಬೆಂಗಳೂರು: ಅನಿವಾಸಿ ಕನ್ನಡಿಗರ ಮಾದರಿಯಲ್ಲೇ ಅಂತರ ಜಿಲ್ಲೆಗಳಿಂದ ಬೆಂಗಳೂರಿಗೆ ಆಗಮಿಸುವ ಪ್ರತಿಯೊಬ್ಬರನ್ನೂ ಹೋಟೆಲ್‌ ಕ್ವಾರಂಟೈನ್‌ಗೆ ಬಿಬಿಎಂಪಿ ಸಿದ್ಧತೆ ನಡೆಸಿದೆ. ಈ ಮೂಲಕ ಕೆಲಸಕ್ಕೆ ಹಾಜರಾಗಲು ಮರಳಿ ಬರುವವರೆಲ್ಲರಿಗೂ ಈಗ “ಗೃಹ ಬಂಧನ’ದ ಮುದ್ರೆ ಬೀಳುವ ಸಾಧ್ಯತೆ ಇದೆ. ಹೀಗೆ ಕ್ವಾರಂಟೈನ್‌ಗೆ ಒಳಪಡುವವರು ತಮ್ಮ ಆರ್ಥಿಕ ಶಕಾನುಸಾರ ಲಾಡ್ಜ್, ಹೋಟೆಲ್‌ಗ‌ಳನ್ನು ಆಯ್ಕೆ ಮಾಡಿ ಕೊಳ್ಳಬೇಕಾಗುತ್ತದೆ.

ಇದಲ್ಲದೆ, ಕಲ್ಯಾಣ ಮಂಟಪ, ಎಲ್ಲ ಹಾಸ್ಟೆಲ್‌ಗ‌ಳು, ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳ ಹಾಸ್ಟೆಲ್‌ ಗಳು, ವಿವಿ ಹಾಸ್ಟೆಲ್‌ಗ‌ಳಲ್ಲಿ ಕ್ವಾರಂಟೈನ್‌ ಮಾಡಲು ಅವಕಾಶ ನೀಡಬೇಕು ಎಂದೂ ಸರ್ಕಾರಕ್ಕೆ ಬಿಬಿಎಂಪಿ ಪ್ರಸ್ತಾವನೆ ಸಲ್ಲಿಸಿದೆ. ಹೊರ ರಾಜ್ಯಗಳಿಂದ  ಬರುವವರು ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಬೆಂಗಳೂರಿಗೆ ಬರುವವರಿಗೆ ವಸತಿ ವ್ಯವಸ್ಥೆ, ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಆಯುಕ್ತ ಬಿ.ಎಚ್‌. ಅನಿಲ್‌ ಕುಮಾರ್‌ ಬೆಂಗ ಳೂರು ನಗರ ಜಿಲ್ಲಾಧಿಕಾರಿಗಳೊಂದಿಗೆ  ಬಿಬಿಎಂಪಿಯ ಕೇಂದ್ರ ಕಚೇರಿಯಲ್ಲಿ ಸೋಮವಾರ ಜಂಟಿ ಸಭೆ ಚರ್ಚೆ ನಡೆಸಿದರು. ನಂತರ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ಸದ್ಯ ವಿದೇಶದಿಂದ ಹಾಗೂ ಹೊರರಾಜ್ಯದಿಂದ ಬೆಂಗಳೂರಿಗೆ ಬರುವವರನ್ನು ಹೋಟೆಲ್‌  ಕ್ವಾರಂಟೈನ್‌ ಮಾಡಲಾಗುತ್ತಿದೆ.

ಇದೇ ಮಾದರಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಮತ್ತೆ ಬೆಂಗಳೂರಿಗೆ ಬರುವವರನ್ನು ಕ್ವಾರಂಟೈನ್‌ ಮಾಡಲು ಸಿದಟಛಿತೆ ಮಾಡಿಕೊಳ್ಳಲಾಗುತ್ತಿದೆ. ಹೊರ ರಾಜ್ಯ ಹಾಗೂ ರಾಜ್ಯದ ಯಾವುದೇ  ಲ್ಲೆಗಳಿಂದ ಬೆಂಗಳೂರಿಗೆ ಮರಳಿ ಬಂದರೂ, ಕಡ್ಡಾಯವಾಗಿ 14 ದಿನಗಳ ಕಾಲ ಕ್ವಾರಂಟೈನ್‌ಗೆ ಒಳಗಾಗಬೇಕು. ಈ ರೀತಿ ಬರುವವರು ಅವರ ಆರ್ಥಿಕ ಶಕ್ತಿಗೆ ಅನುಸಾರವಾಗಿ ಲಾಡ್ಜ್, ಹೋಟೆಲ್‌ಗ‌ಳನ್ನು ಆಯ್ಕೆ ಮಾಡಿಕೊಳ್ಳ ಬಹುದಾಗಿದೆ  ಎಂದರು.

ಮುಂದಿನ ಒಂದು ವಾರಗಳಲ್ಲಿ ಬೆಂಗಳೂರಿಗೆ ಅಂದಾಜು 70ರಿಂದ 80 ಸಾವಿರ ಜನ ಬರುವ ನಿರೀಕ್ಷೆ ಇದೆ. ಇನ್ನು ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಬೆಂಗಳೂರಿಗೆ ಎಷ್ಟು ಜನ ಬರಲಿದ್ದಾರೆ ಎನ್ನುವ ವಿವರ ಸಂಗ್ರಹ ಮಾಡಿ ನೀಡುವಂತೆ ಎಲ್ಲ ಜಿಲ್ಲೆಗಳ ಜಿಲ್ಲಾಧಿ ಕಾರಿಗಳಿಗೆ ಆಯುಕ್ತರು ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆರ್ಥಿಕ ಸಂಕಷ್ಟದಲ್ಲಿ ಇರುವ ವರು ಅಥವಾ ಹೋಟೆಲ್‌ಗ‌ಳನ್ನು ಆಯ್ಕೆ ಮಾಡಿಕೊಳ್ಳಲು ಸಾಧ್ಯವಿಲ್ಲದೆ ಇರುವವರಿಗೆ  ಪ್ರತ್ಯೇಕ ವ್ಯವಸ್ಥೆ ಮಾಡುವ ನಿಟ್ಟಿನಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ.

ನಿರಾಕರಿಸಿದರೆ ನೋಟಿಸ್‌?: ಹೊರ ರಾಜ್ಯದಿಂದ ಹಾಗೂ ವಿವಿಧ ಜಿಲ್ಲೆಗಳಿಂದ ನಗರಕ್ಕೆ ಬರುವವರಿಗೆ ಕ್ವಾರೆಂಟೈನ್‌ ಮಾಡಲು ಅವಕಾಶ ನೀಡಲು ನಿರಾಕರಿ ಸುವ ಹೋಟೆಲ್‌, ಖಾಸಗಿ ಹಾಸ್ಟಲ್‌ ಮತ್ತು ಪಿಜಿ ಮಾಲೀಕರಿಗೆ ನೋಟಿಸ್‌ ಜಾರಿ ಮಾಡಿ ಅವುಗಳನ್ನು ವಶಕ್ಕೆ ಪಡೆದುಕೊಳ್ಳುವಂತೆ ಬಿಬಿಎಂಪಿ ಆಯುಕ್ತ ಬಿ.ಎಚ್‌.ಅನಿಲ್‌ಕುಮಾರ್‌ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಮುಂದಿನ ದಿನಗಳಲ್ಲಿ ಹೊರ ರಾಜ್ಯದಿಂದ ಬರುವವರು ಹಾಗೂ ರಾಜ್ಯದ ವಿವಿಧ  ಜಿಲ್ಲೆಗಳಿಂದ ಬರುವವರ ಸಂಖ್ಯೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಇವರನ್ನೆಲ್ಲ ಕಡ್ಡಾಯವಾಗಿ ಕ್ವಾರಂಟೈನ್‌ ಮಾಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ರೀತಿ ಆದೇಶ ಮಾಡಿದ್ದಾರೆ ಎಂದು ಬಿಬಿಎಂಪಿಯ ಅಧಿಕಾರಿಗಳು ತಿಳಿಸಿ ದ್ದಾರೆ. ಸಭೆಯಲ್ಲಿ ಬಿಬಿಎಂಪಿಯ ಆರೋಗ್ಯಾಧಿ ಕಾರಿಗಳು, ವಿಶೇಷ ಆಯುಕ್ತರು, ಜಂಟಿ ಆಯುಕ್ತರು ಹಾಗೂ ಕಂದಾಯ ವಿಭಾಗದ ಅಧಿಕಾರಿಗಳು ಹಾಜರಿದ್ದರು.

ಕರ್ತವ್ಯಕ್ಕೆ ಹಾಜರಾಗಲು ಉದ್ಯೋಗಿಗಳಿಗೆ ಸೂಚನೆ: ಒಂದೆಡೆ ಕ್ವಾರಂಟೈನ್‌ ಹಿನ್ನೆಲೆಯಲ್ಲಿ ಸಾವಿರಾರು ಉದ್ಯೋಗಿಗಳು ತಮ್ಮೂರಿಗೆ ತೆರಳಿದ್ದಾರೆ. ಸಡಿಲಿಕೆ ಹಿನ್ನೆಲೆಯಲ್ಲಿ ಬಹುತೇಕ ಎಲ್ಲ ಸಂಸ್ಥೆಗಳು ಆ ಉದ್ಯೋಗಿಗಳಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಿವೆ. ಈಗಷ್ಟೇ ಆ  ಉದ್ಯೋಗಿಗಳು ಹಂತಹಂತವಾಗಿ ಬೆಂಗಳೂರಿಗೆ ವಾಪಸಾಗುತ್ತಿದ್ದಾರೆ. ಈ ನಡುವೆ ಬಂದವರಿಗೆಲ್ಲಾ ಕ್ವಾರಂಟೈನ್‌ ಕಡ್ಡಾಯಮಾಡುವ ಚಿಂತನೆ ಅವರನ್ನು ಗೊಂದಲಕ್ಕೆ ಸಿಲುಕಿಸಿದೆ.

ಬಾರದಿದ್ದರೆ ಕಂಪೆನಿಗಳು ವೇತನಕ್ಕೆ ಕತ್ತರಿ ಹಾಕುವ  ಭೀತಿ, ಇನ್ನೊಂದೆಡೆ ಬಂದರೂ ಕರ್ತವ್ಯಕ್ಕೆ ಹಾಜರಾಗದ ಸ್ಥಿತಿ ಇದೆ.  ತುರ್ತು ಕಾರಣಕ್ಕೆ ಊರಿಗೆ ಹೋಗಿ ಮತ್ತೆಬರುವ ಪಾಸ್‌ ಪಡೆದವರಿಗೂ ಇದು ಅನ್ವಯ ಆಗಲಿದೆಯೇ? ಈ ನಿಯಮ ಯಾವಾಗಿನಿಂದ ಜಾರಿಗೆ ಬರುತ್ತದೆ ಎನ್ನುವುದು  ಸೇರಿದಂತೆ ಹಲವು ವಿಷಯಗಳ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಇವೆಲ್ಲ ಗೊಂದಲಗಳಿಗೆ ಮಂಗಳವಾರ ತೆರೆ ಬೀಳುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

virat-Hotel

BBMP Notice: ವಿರಾಟ್‌ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.