ಮಳೆ ನಿಯಂತ್ರಣ: ವಿಪತ್ತು ನಿರ್ವಹಣಾ ತಂಡ ರಚನೆ
Team Udayavani, Jun 3, 2020, 5:50 AM IST
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಮಳೆ ಅನಾಹುತ ತಪ್ಪಿಸುವ ಉದ್ದೇಶ ದಿಂದ ವಲಯವಾರು ವಿಪತ್ತು ನಿರ್ವಹಣಾ ತಂಡಗಳನ್ನು ರಚನೆ ಮಾಡಿ ಬಿಬಿಎಂಪಿ ಆಯುಕ್ತರು ಆದೇಶ ಮಾಡಿದ್ದಾರೆ. ಬಿಬಿಎಂಪಿಯ ಎಂಟು ವಲಯಗಳಲ್ಲಿ ಈಗಾಗಲೇ ವಲಯ ಆಯುಕ್ತರಾಗಿ ರುವವರನ್ನೇ ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದೆ.
ಈ ತಂಡವು ನಗರದಲ್ಲಿ ಮಳೆ ಸಂದರ್ಭದಲ್ಲಿ ತೆಗೆದು ಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ. ಅಲ್ಲದೆ, ಮಳೆ ಸುರಿದ ಮೇಲೆ ನಗರದಲ್ಲಿ ಸೃಷ್ಟಿಯಾಗುವ ಸಮಸ್ಯೆಗಳಿಗೂ ಈ ತಂಡಗಳ ಮೂಲಕ ಪರಿಹಾರ ಕಾರ್ಯಾಚರಣೆ ನಡೆಸಲು ಪಾಲಿಕೆ ಮುಂದಾಗಿದೆ.
ಬಿಬಿಎಂಪಿ ವ್ಯಾಪ್ತಿಯ ಎಂಟು ವಲಯಗಳಲ್ಲಿಯೂ ಪತ್ಯೇಕ ವಿಪತ್ತು ನಿರ್ವಹಣಾ ತಂಡಗಳನ್ನು ರಚನೆ ಮಾಡಲಾಗಿದ್ದು, ಇದರಲ್ಲಿ ಬಿಬಿಎಂಪಿ, ಅರಣ್ಯ ಇಲಾಖೆ, ಬೆಸ್ಕಾಂ, ಅಗ್ನಿಶಾಮಕ ವಿಭಾಗ, ಬೆಂಗಳೂರು ಜಲಮಂಡಳಿ ಹಾಗೂ ಸಂಚಾರ ವಿಭಾಗದ ಹಿರಿಯ ಅಧಿಕಾರಿಗಳು ಈ ತಂಡದಲ್ಲಿ ಇದ್ದಾರೆ. ಈ ತಂಡಗಳಿಗೆ ಆಯಾ ವಲಯದ ವಿಶೇಷ ಆಯುಕ್ತರನ್ನು ನೋಡಲ್ ಅಧಿಕಾರಿಗಳ ನ್ನಾಗಿ ನೇಮಕ ಮಾಡಲಾಗಿದೆ. ಮಳೆ ಯಿಂದ ಸಾರ್ವಜನಿಕ ಹಾಗೂ ಸರ್ಕಾರಿ ಆಸ್ತಿಗೆ, ಸಾರ್ವಜನಿಕರಿಗೆ ಉಂಟಾಗಬಹು ದಾದ ಸವಾಲು ತಪ್ಪಿಸಲು ಈ ತಂಡ ನೆರವಾಗಲಿದೆ.
ಇನ್ನು ಮಳೆ ಅನಾಹುತ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಸಮನ್ವಯತೆ ಸಾಧಿಸುವು ದಕ್ಕಾಗಿ ವಿಪತ್ತು ನಿರ್ವಹಣಾ ತಂಡದಲ್ಲಿ ಬಿಬಿಎಂಪಿ, ಬೆಸ್ಕಾಂ, ಅಗ್ನಿಶಾಮಕ ವಿಭಾಗ, ಜಲಮಂಡಳಿ ಹಾಗೂ ಸಂಚಾರ ವಿಭಾಗದ ಹಿರಿಯ ಅಧಿಕಾರಿಗಳನ್ನು ಸೇರಿಸಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.