ನಗರದಲ್ಲಿ ಅಬ್ಬರಿಸಿದ ವರ್ಷಧಾರೆ
Team Udayavani, Jun 26, 2020, 6:07 AM IST
ಬೆಂಗಳೂರು: ನಗರದಲ್ಲಿ ಗುರುವಾರ ಸುರಿದ ಧಾರಾಕಾರ ಮಳೆಗೆ ಐದಕ್ಕೂ ಹೆಚ್ಚು ಮರಗಳು ಧರೆಗುರುಳಿವೆ. ಕೆಂಗೇರಿಯ ಬಿಡಿಎ ಕಾಂಪ್ಲೆಕ್ಸ್ ಮುಂಭಾಗದ ವೃಷಭಾವತಿ ನದಿ ಹರಿದು ಹೋಗುವ ಭಾಗದಲ್ಲಿನ ರಾಜಕಾಲುವೆ ಕುಸಿದು, ಜನಜೀವನ ಅಸ್ತವ್ಯಸ್ತಗೊಂಡಿತು. ಕೆಂಗೇರಿ ಬಳಿ ವೃಷಭಾವತಿ ರಾಜಕಾಲುವೆಯಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿದ ಪರಿಣಾಮ ರಸ್ತೆಯಲ್ಲಿ ನೀರು ಹರಿದು ವಾಹನ ಸವಾರರು ಪರ ದಾಡುವಂತಾಯಿತು.
ವ್ಯಾಲಿಯಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಕೆಂಗೇರಿ ಸಮೀಪ ಕಾಲುವೆಗೆ ಕಟ್ಟಲಾಗಿದ್ದ ತಡೆಗೋಡೆ ಕುಸಿದು ಆತಂಕ ಸೃಷ್ಟಿಯಾಗಿತ್ತು. ರಾಜಕಾಲುವೆ ತುಂಬಿತುಳುಕಿದ್ದರಿಂದ ನೀರು ರಸ್ತೆಗೆ ನುಗ್ಗಿತು. ಎರಡರಿಂದ ಮೂರು ಅಡಿ ನೀರು ನಿಂತು ಈ ಮಾರ್ಗವಾಗಿ ಹೋಗುವ ಸವಾರರು ಆತಂಕದಲ್ಲೇ ಹೋಗುವ ವಾತಾವರಣ ನಿರ್ಮಾಣ ವಾಗಿತ್ತು. ಇದರಿಂದ ಸುತ್ತಲಿನ ಪ್ರದೇಶಗಳಲ್ಲೂ ಸಂಚಾರ ದಟ್ಟಣೆಗೆ ಸಮಸ್ಯೆಯಾಯಿತು.
ಬೆಂಗಳೂರು- ಮೈಸೂರು ರಸ್ತೆಯಲ್ಲಿ ಗಂಟೆಗಟ್ಟಲೆ ವಾಹನಗಳ ಸಂಚಾರ ಸಮಸ್ಯೆ ಎದುರಾಯಿತು. ಮಳೆಯಿಂದ ಅನಾಹುತವಾಗಿರುವ ವೃಷಭಾವತಿ ರಾಜಕಾಲುವೆ ಭಾಗಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಲಾಗುವುದು ಎಂದು ರಾಜರಾಜೇಶ್ವರಿ ನಗರದ ವಿಶೇಷ ಆಯುಕ್ತ ಅನ್ಬುಕುಮಾರ್ ತಿಳಿಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿದ ಅವರು, ಮಳೆಯಿಂದ ರಾಜ ಕಾಲುವೆ ಕುಸಿದಿದ್ದು, ಅದೃಷ್ಟವಶಾತ್ ಯಾವುದೇ ಸಾವು- ನೋವು ಸಂಭವಿಸಿಲ್ಲ.
ಮೈಸೂರು ರಸ್ತೆ ಹಾಗೂ ಕೆಂಗೇರಿ ಭಾಗದಲ್ಲಿ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಲಾಗುವುದು ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಸದ್ಯಕ್ಕೆ ತಾತ್ಕಾಲಿಕವಾಗಿ ಬ್ಯಾರಿಕೇಡ್ ಹಾಕಲಾಗಿದೆ ಎಂದು ಹೇಳಿದರು. ಇನ್ನು ಜಯನಗರದ ಏಳನೇ ಬ್ಲಾಕ್, ಚನ್ನಸಂದ್ರ ಹಾಗೂ ವಿದ್ಯಾಪೀಠದ ಬಳಿ ತಲಾ ಒಂದು ಮರ ಧರೆಗುರುಳಿವೆ. ಇದರ ಹೊರತು ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಬಿಬಿಎಂಪಿಯ ಸಹಾಯವಾಣಿ ಸಿಬ್ಬಂದಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.