ರ್‍ಯಾಂಡಮ್ ಸೋಂಕು ಪರೀಕ್ಷೆ: ಮಂಗಮ್ಮನಪಾಳ್ಯದಲ್ಲಿ ನೆಗೆಟಿವ್!
Team Udayavani, May 16, 2020, 4:42 AM IST
ಬೆಂಗಳೂರು: ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಮಂಗಮ್ಮನಪಾಳ್ಯ ವಾರ್ಡ್‌ನಲ್ಲಿ ಗುರುವಾರ ರ್‍ಯಾಂಡಮ್ ಸೋಂಕು ಪರೀಕ್ಷೆ ಮಾಡಲಾಗಿದ್ದ 21ಜನರ ವರದಿಯೂ ನೆಗೆಟಿವ್ ಬಂದಿದ್ದು, ಈ ಭಾಗದಲ್ಲಿ ಜನ ನಿಟ್ಟುಸಿರು ಬಿಟ್ಟಿದ್ದಾರೆ. ಹೊಂಗಸಂದ್ರದಲ್ಲಿ ಸೋಂಕು ದೃಢಪಟ್ಟ ಮೇಲೆ ಮಂಗಮ್ಮನಪಾಳ್ಯದಲ್ಲೂ ಆರು ಜನರಲ್ಲಿ ಸೋಂಕು ದೃಢಪಟ್ಟಿತ್ತು.
ಸೋಂಕು ದೃಢಪಟ್ಟವರ ಮೂಲದ ಬಗ್ಗೆ ಗೊಂದಲ ಸೃಷ್ಟಿಯಾಗಿದ್ದ ಹಿನ್ನೆಲೆಯಲ್ಲಿ ಗುರುವಾರ 21ಜನರನ್ನು ರ್‍ಯಾಂಡಮ್ ಸೋಂಕು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ಸಂಬಂಧ ಪ್ರತಿಕ್ರಿಯಿಸಿದ ಬೊಮ್ಮನಹಳ್ಳಿಯ ಆರೋಗ್ಯಾಧಿಕಾರಿ ಡಾ.ಸುರೇಶ್ ಅವರು, ಈ ಭಾಗದಲ್ಲಿನ 21ಜನರನ್ನು ಸೋಂಕು ಪರೀಕ್ಷೆಗೆ ಒಳಪಡಿಸಲಾಗಿತ್ತು. ಎಲ್ಲರ ವರದಿ ನೆಗೆಟಿವ್ ಬಂದಿದೆ.
ಶುಕ್ರವಾರ ಈ ಭಾಗದಲ್ಲಿ ರ್‍ಯಾಂಡಮ್ ಸೋಂಕು ಪರೀಕ್ಷೆ ಮಾಡಿಲ್ಲ. ಆದರೆ, ಸುತ್ತಮುತ್ತಲಿನ ಭಾಗದಲ್ಲಿ ಆರೋಗ್ಯ ತಪಾಸಣೆ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ವಿವರಿಸಿದರು. ಇನ್ನು ಹೊಂಗಸಂದ್ರದಲ್ಲಿ ಕ್ವಾರಂಟೈನ್ ಅವಧಿ ಮುಗಿಸಿ ರುವವರನ್ನು ಅವರ ಊರುಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತಿದ್ದು,
ಉತ್ತರ ಪ್ರದೇಶದಿಂದ ವಲಸೆ ಬಂದಿದ್ದ 19ಜನರನ್ನು ಶುಕ್ರವಾರ ಕಳುಹಿಸಲಾಗಿದ್ದು, ಬಿಹಾರದಿಂದ ವಲಸೆ ಬಂದಿದ್ದ 86ಜನರನ್ನು ಮೇ 21ಕ್ಕೆ ಅವರ ಊರು ಗಳಿಗೆ ರೈಲಿನ ಮೂಲಕ ಅವರ ಊರುಗಳಿಗೆ ಕಳುಹಿಸಿಕೊಡಲು ವ್ಯವಸ್ಥೆ ಮಾಡಲಾಗಿದೆ ಎಂದು ಬಿಬಿಎಂಪಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.