ಎಲ್ಲಾ ಯೋಜನೆಗಳಿಗೆ ನೆಹರೂ, ಗಾಂಧಿ ಹೆಸರನ್ನೇ ಇಡೋಕಾಗುತ್ತಾ?: ಸಚಿವ ಅಶೋಕ್ ತಿರುಗೇಟು
ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು ನಾಮಕರಣ ವಿಚಾರ
Team Udayavani, May 28, 2020, 9:08 PM IST
ಬೆಂಗಳೂರು: ನಗರದಲ್ಲಿರುವ ಯಲಹಂಕ ಮೇಲ್ಸೇತುವೆಗೆ ಸ್ವಾತಂತ್ರ್ಯ ಯೋಧ ವೀರ ಸಾವರ್ಕರ್ ಹೆಸರು ಇಡುವುದಕ್ಕೆ ನಮಗೆ ಸಂತಸವಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಅವರು ಹೇಳಿದ್ದಾರೆ.
ಎಲ್ಲಾ ಯೋಜನೆಗಳಿಗೆ ನೆಹರು, ಗಾಂಧಿ ಇಟ್ಟಿದ್ದಾರೆ ಬೇರೆಯವರ ಹೆಸರು ಇಟ್ಟರೆ ಕಾಂಗ್ರೆಸ್ ನಾಯಕರಿಗೆ ಆಗೋದಿಲ್ಲ. ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರು 25 ವರ್ಷ ಸೆರೆವಾಸ ಅನುಭವಿಸಿದವರು, ಅಂತಹ ಹೋರಾಟಗಾರನ ಬಗ್ಗೆ ವಿರೋಧ ಸರಿಯಲ್ಲ.
ಯಲಹಂಕ ಮೆಲ್ಸೇತುವೆಗೆ ಸ್ವಾತಂತ್ರ್ಯ ಸೇನಾನಿ ದಾಮೋದರ್ ಸಾವರ್ಕರ್ ಹೆಸರನ್ನು ಇರಿಸುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ನಾಯಕರನ್ನು ಸಚಿವ ಆರ್ ಅಶೋಕ್ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.
ಇಂದಿರಾ ಸಂತತಿಯನ್ನು ಹೊರತಾಗಿಸಿ ಬೇರೆ ಯಾರೇ ನಾಯಕರ ಹೆಸರುಗಳನ್ನು ಸಾರ್ವಜನಿಕ ಸ್ಥಳಗಳಿಗೆ ಇಟ್ಟರೆ ಇವರಿಗೆಲ್ಲಾ ಹೊಟ್ಟೆಯಲ್ಲಿ ಮೆಣಸಿನಕಾಯಿ ಇಟ್ಟಂತಾಗುತ್ತದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಅವರು ಕಾಂಗ್ರೆಸ್ ನಾಯಕರನ್ನು ಕಿಚಾಯಿಸಿದ್ದಾರೆ.
ಹಾಗಾದರೆ ಇವರ ಅಧಿಕಾರ ಅವಧಿಯಲ್ಲಿ ಯಾಕೆ ಕೆಂಪೇಗೌಡರ ಹೆಸರು, ಸಂಗೊಳ್ಳಿ ರಾಯಣ್ಣನಂತಹ ವೀರರ ಹೆಸರುಗಳನ್ನು ಯಾಕೆ ಇಡಲಿಲ್ಲ ಎಂದು ಅಶೋಕ್ ಕೈ ನಾಯಕರನ್ನು ಪ್ರಶ್ನಿಸಿದರು.
ಸಾವರ್ಕರ್ ಹೆಸರನ್ನು ಇರಿಸುವುದಕ್ಕೆ ಸಂಪೂರ್ಣ ಬೆಂಬಲವಿದೆ. ಹಿಂದೂ ಸಿದ್ಧಾಂತ ಪ್ರತಿಪಾದಕರೆಂಬ ಕಾರಣಕ್ಕೆ ಅವರ ಹೆಸರಿಡುವುದನ್ನು ವಿರೋಧಿಸುವುದು ಸರಿಯಲ್ಲ. ಹಾಗಾದರೆ ಹಿಂದೂ ಆಗಿ ಹುಟ್ಟುವುದೇ ತಪ್ಪಾ? ಎಂದು ಅಶೋಕ್ ಅವರು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ನವರ ಗೊಡ್ಡು ಬೆದರಿಕೆಗೆ ನಾವು ಹೆದರೋದಿಲ್ಲ, ಸಾವರ್ಕರ್ ಹೆಸರನ್ನು ಇಟ್ಟೇ ಇಡ್ತೇವೆ ಎಂದು ಅಶೋಕ್ ಖಚಿತ ಧ್ವನಿಯಲ್ಲಿ ನುಡಿದಿದ್ದಾರೆ.
ಹೊಟೇಲ್ ಪ್ರಾರಂಭದ ವಿಚಾರ
ಸಂಪನ್ಮೂಲ ಕ್ರೋಡೀಕರಣ ಮಾಡಬೇಕಾದ ಅನಿವಾರ್ಯ ಸ್ಥಿತಿ ಎದುರಾಗಿದೆ. ಹಾಗೆಂದು ಕೋವಿಡ್ ಬಗ್ಗೆ ನಿರ್ಲ್ಯಕ್ಷ್ಯ ವಹಿಸುವುದಿಲ್ಲ. ಈ ಕುರಿತಾಗಿ ಜೂನ್ 1ರ ನಂತರ ಕೇಂದ್ರದ ನಿರ್ದೇಶನವನ್ನು ನೋಡಿಕೊಂಡು ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಸಚಿವ ಅಶೋಕ್ ಅವರು ಹೇಳಿದರು.
ರಾಜ್ಯದಲ್ಲಿ ಹೊಟೇಲ್ ವ್ಯವಹಾರವನ್ನು ಪ್ರಾರಂಭಿಸಲು ನಮ್ಮ ಸರ್ಕಾರ ಮುಕ್ತ ಮನಸ್ಸನ್ನು ಹೊಂದಿದೆ. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಬಾರ್ ಮತ್ತು ರೆಸ್ಟೋರೆಂಟ್ ತೆರೆಯಲು ಅವಕಾಶ ನೀಡುವುದಿಲ್ಲ ಎಂದೂ ಸಚಿವ ಅಶೋಕ್ ಅವರು ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.