ಮೇಲ್ಸೇತುವೆಗೆ ಸಾವರ್ಕರ್‌ ಹೆಸರು, ಆಕ್ಷೇಪ: ವಾಕ್ಸಮರ

Team Udayavani, May 28, 2020, 6:04 AM IST

commmis bbmp

ಬೆಂಗಳೂರು: ಯಲಹಂಕದ ಡೇರಿ ವೃತ್ತದ ನೂತನ ಮೇಲ್ಸೇತುವೆ ಉದ್ಘಾಟನೆ ಕಾರ್ಯ ಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್‌.ಅನಿಲ್‌ಕುಮಾರ್‌ ತಿಳಿಸಿದ್ದಾರೆ. ಈ ಸಂಬಂಧ  ಪ್ರತಿಕ್ರಿಯಿಸಿದ ಅವರು, ಯಲಹಂಕ ದ ಡೇರಿ ವೃತ್ತದ ನೂತನ ಮೇಲ್ಸೇತುವೆಗೆ “ವೀರ ಸಾವರ್ಕರ್‌ ಮೇಲ್ಸೇತುವೆ’ ಹೆಸರು ನಾಮಕರಣ ಮಾಡುವ ಸಂಬಂಧ ಕೌನ್ಸಿಲ್‌ನಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ  ಸಾರ್ವಜನಿಕರಿಂದ ಆಕ್ಷೇಪಣೆಯನ್ನು ಕೇಳಲಾಗಿದೆ.

ಸರ್ಕಾರವೂ ಈ ಬಗ್ಗೆ ಅಂತಿಮ ಆದೇಶ ನೀಡಬೇಕಿರುವ ಹಿನ್ನೆಲೆಯಲ್ಲಿ ಯಾವುದೇ ಹೆಸರನ್ನು ಅಂತಿಮ ಮಾಡಿಲ್ಲ ಎಂದರು. ಇನ್ನು ಕೊರೊನಾ ಭೀತಿ ಹಾಗೂ ಲಾಕ್‌ಡೌನ್‌ ಇರುವ ಹಿನ್ನೆಲೆಯಲ್ಲಿ ಮೇಲ್ಸೇತುವೆ ಉದ್ಘಾಟನೆ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿ ದೆ ಎಂದು ಆಯುಕ್ತರು ಸ್ಪಷ್ಟಪಡಿಸಿದರು. ಬುಧವಾರ ವಿವಿಧ ರಾಜಕೀಯ ಪಕ್ಷದ ನಾಯಕರು ಹಾಗೂ ಕೆಲವು ಸಾರ್ವಜನಿಕರು  ವಿರೋಧ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ಬುಧವಾರದ ಸಂಜೆ ವೇಳೆಗೆ ಯಲಹಂಕದ ಡೇರಿ ವೃತ್ತದ ನೂತನ ಮೇಲ್ಸೇತುವೆ ಎಂದಷ್ಟೇ ನಾಮಕರಣ ಮಾಡಲು ಪಾಲಿಕೆ ಮುಂದಾಗಿತ್ತು. ಬಳಿಕ ನಿರ್ಧಾರ ಕೈಬಿಟ್ಟಿದೆ. ಗುರುವಾರ ಬೆಳಗ್ಗೆ  9.30ಕ್ಕೆ ಮುಖ್ಯಮಂತ್ರಿ ಬಿ.ಎಸ್‌ .ಯಡಿಯೂರಪ್ಪ ಉದ್ಘಾಟನೆ ಮಾಡಲು ಅಂತಿಮ ಸಿದಟಛಿತೆ ಮಾಡಿಕೊಳ್ಳಲಾಗಿತ್ತು. ಸದ್ಯ ವಿವಾದ ಸೃಷ್ಟಿಯಾದ ಹಿನ್ನೆಲೆಯಲ್ಲಿ ಕೊರೊನಾ ಭೀತಿ ನೆಪವೊಡ್ಡಿ ಕಾರ್ಯಕ್ರಮ ರದ್ದು  ಮಾಡಲಾಗಿದೆ.

ಸಾರ್ವಜನಿಕ ಆಕ್ಷೇಪಣೆಗೆ ಅವಕಾಶ: “ವೀರ ಸಾವರ್ಕರ್‌ ಮೇಲ್ಸೇತುವೆ’ ಹೆಸರು ನಾಮಕರಣ ಮಾಡುವ ಸಂಬಂಧ ಫೆ.29ರಂದು ನಡೆದ ಪಾಲಿಕೆಯ ಮಾಸಿಕ ಸಭೆಯಲ್ಲಿ ಆಡಳಿತ ಪಕ್ಷ ಸ್ವ- ನಿರ್ಣಯ ತೆಗೆದುಕೊಳ್ಳಲಾಗಿತ್ತು. ನೂತನ  ಮೇಲ್ಸೇತುವೆಗೆ ವೀರ ಸಾವರ್ಕರ್‌ ಹೆಸರು ನಾಮಕರಣಕ್ಕೆ ಸಂಬಂಧಿಸಿದಂತೆ ಮೇ 20 ರಂದು ಬಿಬಿಎಂಪಿ ಆಕ್ಷೇಪಣೆಗಳನ್ನು ಆಹ್ವಾನಿಸಿದೆ.  ಆಕ್ಷೇಪಣೆ ಸಲ್ಲಿಸಲು ಜೂ 20 ವರೆಗೆ ಕಾಲಾವಕಾಶ ನೀಡಿದೆ.

ಈ ಹಂತದಲ್ಲಿ ಸಾರ್ವಜನಿಕರಿಂದ  ಬರುವ ಆಕ್ಷೇಪಣೆಗಳನ್ನು ಪರಿಷ್ಕರಿಸಿ ಬಿಬಿಎಂಪಿಯು ಸರ್ಕಾರಕ್ಕೆ ಕಳುಹಿಸಿಕೊಡಲಾಗಿದೆ. ಪರಿಷ್ಕೃತ ವರದಿಯ ಆಧಾರದ ಮೇಲೆ ಸರ್ಕಾರ ಅಂತಿಮ  ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆ ಇದೆ. ಸಾವರ್ಕರ್‌ ಹೆಸರನ್ನು ನಾಮಕರಣ  ಮಾಡಲು ಕಾಂಗ್ರೆಸ್‌ ವಿರೋಧ ವ್ಯಕ್ತಪಡಿಸಿರುವುದು ನಾಚಿಕೆ ಗೇಡಿನ ಸಂಗತಿ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌. ರವಿಕುಮಾರ್‌ ತಿಳಿಸಿದ್ದಾರೆ.

ಕಾಂಗ್ರೆಸ್‌ ನಾಯಕರಿಂದ ವಾಗ್ಧಾಳಿ: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್‌ ಹೆಸರನ್ನು ನಗರದ ಮೇಲ್ಸೇತುವೆಗೆ ಇಡುವ ಸಂಬಂಧ ಕಾಂಗ್ರೆಸ್‌ ಆಕ್ಷೇಪ ವ್ಯಕ್ತಪಡಿಸಿರುವುದು ಆಡಳಿತ ಹಾಗೂ ಪ್ರತಿಪಕ್ಷಗಳ ವಾಕ್ಸಮರಕ್ಕೆ  ಕಾರಣವಾಗಿದೆ. ಕಾಂಗ್ರೆಸ್‌ ವಾಗ್ಧಾಳಿ ನಡೆಸಿದ್ದರೆ, ಬಿಜೆಪಿ ನಾಯಕರು ಸಮರ್ಥಿಸಿಕೊಂಡಿದ್ದಾರೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ಈ ನಿರ್ಧಾರ  ಮಣ್ಣಿನ ಮಕ್ಕಳಿಗೆ ಮಾಡಿರುವ ಅವಮಾನ ಎಂದು ಆರೋಪಿಸಿದ್ದಾರೆ.

ತಕ್ಷಣ ಈ ನಿರ್ಧಾರವನ್ನು ಕೈಬಿಟ್ಟು ಸ್ಥಳೀಯ ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಹೆಸರಿಡುವಂತೆ ಆಗ್ರಹಿಸಿದ್ದಾರೆ. ಮಾಜಿ ಕೆಪಿಸಿಎ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಮೇಲ್ಮನೆ ಪ್ರತಿಪಕ್ಷದ ನಾಯಕ ಎಸ್‌.ಆರ್‌. ಪಾಟೀಲ್‌, ಮಾಜಿ ಸಂಸದ  ವಿ.ಎಸ್‌.ಉಗ್ರಪ್ಪ ಮೊದಲಾದ ಕಾಂಗ್ರೆಸ್‌ ನಾಯಕರು ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದಾರೆ. ಕಾಂಗ್ರೆಸ್‌ ನಾಯಕರ ಪ್ರತಿಕ್ರಿಯೆಗೆ ತಿರುಗೇಟು ನೀಡಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಾವರ್ಕರ್‌ ಹೆಸರು  ಬದಲು ಸೋನಿಯಾ ಗಾಂಧಿ ಹೆಸರಿಡಬೇಕಿತ್ತೇ ಎಂದು ಪ್ರಶ್ನಿಸಿದ್ದಾರೆ.

ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರೂ ನೇರವಾಗಿ ಸಿದ್ದರಾಮಯ್ಯ ವಿರುದಟಛಿ ವಾಗ್ಧಾಳಿ ನಡೆಸಿದ್ದು, ರಾಜ್ಯದ ವಿಶ್ವ ವಿದ್ಯಾಲಯಗಳು, ಆಸ್ಪತ್ರೆಗಳು,  ರಸ್ತೆಗಳಿಗೆ ಇಂದಿರಾ ಗಾಂಧಿ, ರಾಜೀವ್‌ ಗಾಂಧಿ, ಸಂಜಯ್‌ ಗಾಂಧಿ ಹೆಸರಿಡುವಾಗ ಮಣ್ಣಿನ ಮಕ್ಕಳು ನೆನಪಾಗಲಿಲ್ಲವೇ ಎಂದು ತಿರುಗೇಟು ನೀಡಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ಸೇರಿದಂತೆ ಬಿಜೆಪಿಯ ಬಹುತೇಕ ನಾಯಕರು ರಾಜ್ಯ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿದ್ದಾರೆ.

ಟಾಪ್ ನ್ಯೂಸ್

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Varthur Prakash: ವರ್ತೂರು ಪ್ರಕಾಶ್‌ಗೆ 3 ತಾಸು ಗ್ರಿಲ್‌, 38 ಪ್ರಶ್ನೆ!

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Blackmail: ಸ್ನೇಹಿತೆಯ ವಿಡಿಯೋ, ಫೋಟೋ ಇಟ್ಟುಕೊಂಡು ಹಣಕ್ಕೆ ಬ್ಲ್ಯಾಕ್‌ಮೇಲ್

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Fraud: ಡಿಕೆಸು ಹೆಸರಲ್ಲಿ 8 ಕೋಟಿ ಸಾಲ ಪಡೆದು ವಂಚನೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

Bengaluru: ಸಾಲ ವಾಪಸ್‌ ಕೇಳಿದ್ದಕ್ಕೆ ಮಾಂಸ ಅಂಗಡಿಯಲ್ಲಿ ಭೀಕರ ಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.