ಚಿನ್ನ-ಬೆಳ್ಳಿ ಕಾರ್ಮಿಕರಿಗೂ ಪರಿಹಾರಕ್ಕೆ ಶರವಣ ಆಗ್ರಹ
Team Udayavani, May 7, 2020, 1:53 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ರಾಜ್ಯದ ಜನರ ಪರಿಸ್ಥಿತಿಗೆ ಮಿಡಿದ ಸರ್ಕಾರ, ವಿಶೇಷ ಪ್ಯಾಕೇಜ್ ಘೋಷಿಸಿರುವುದು ಸ್ವಾಗತಾರ್ಹ. ಆದರೆ, ಚಿನ್ನ-ಬೆಳ್ಳಿ ಕಾರ್ಮಿಕರನ್ನು ಕಡೆಗಣಿಸಿರುವುದು ಬೇಸರದ ಸಂಗತಿ ಎಂದು ವಿಪ ಸದಸ್ಯ ಹಾಗೂ ಜ್ಯುವೆಲರಿ ಅಸೋಸಿಯೇಷನ್ ಅಧ್ಯಕ್ಷ ಟಿ.ಎ. ಶರವಣ ಬೇಸರ ವ್ಯಕ್ತಪಡಿಸಿದ್ದಾರೆ.
ಸವಿತಾ ಸಮಾಜ, ರೈತರು, ಆಟೋ ಚಾಲಕರಿಗೆ ಸರ್ಕಾರ ಘೋಷಿಸಿರುವ 1,610 ಕೋಟಿ ರೂ. ಪ್ಯಾಕೇಜ್ ಘೋಷಿಸಿದೆ. ಇದರಿಂದ ಆ ಸಮುದಾಯಗಳಿಗೆ ಅನುಕೂಲ ಆಗಲಿದೆ. ತೀವ್ರ ಸಂಕಷ್ಟದಲ್ಲಿ ರುವ ಚಿನ್ನ-ಬೆಳ್ಳಿ ಕೆಲಸ ಮಾಡುವ ಕಾರ್ಮಿಕರಿಗೂ ಪರಿಹಾರ ಘೋಷಿಸ ಬೇಕಿತ್ತು. ಆದರೆ, ಈ ನಿಟ್ಟಿನಲ್ಲಿ ಸರ್ಕಾರ ಯೋಚಿಸದಿರುವುದು ಅಸಮಾಧಾನ ಉಂಟು ಮಾಡಿದೆ. ರಾಜ್ಯದಲ್ಲಿ ಚಿನ್ನ-ಬೆಳ್ಳಿ ಕೆಲಸ ಮಾಡುವ ಸುಮಾರು ಐದು ಲಕ್ಷ ಕಾರ್ಮಿಕರಿದ್ದಾರೆ. ಪ್ರತಿ ಶುಭ ಸಮಾರಂಭಗಳಿಗೆ ಆಭರಣ ತಯಾರಿಸುವ ಕಾರ್ಮಿಕರು, ಸಿಲುಕಿದ್ದಾರೆ. ಅವರಿಗೆ ಪರಿಹಾರ ಘೋಷಿಸ ಬೇಕು ಎಂದು ಶರವಣ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.