ಆರು ಮಂದಿಗೆ ಸೋಂಕು, ಒಬ್ಬರು ಸಾವು


Team Udayavani, May 20, 2020, 5:28 AM IST

sonkina

ಬೆಂಗಳೂರು: ನಗರದಲ್ಲಿ ಮಂಗಳವಾರ ಹೊಸದಾಗಿ ಆರು ಕೋವಿಡ್‌ 19 ವೈರಸ್‌ ಸೋಂಕು ಪ್ರಕರಣ ಪತ್ತೆಯಾಗಿವೆ. ಅಲ್ಲದೇ ಸೋಮವಾರ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದ ವ್ಯಕ್ತಿಯೊಬ್ಬರಿಗೆ ಸೋಂಕು ತಗುಲಿರುವುದು  ದೃಢಪಟ್ಟಿದೆ. ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 246ಕ್ಕೆ, ಚಿಕಿತ್ಸೆ ಫ‌ಲಕಾರಿಯಾಗದೇ ಮೃತರಾದವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ಮಂಗಳವಾರ ದೃಢಪಟ್ಟ ಸೋಂಕು ಪ್ರಕರಣಗಳ ಪೈಕಿ ಪಾದರಾಯನಪುರದಲ್ಲಿ ಮೂವರು,  ಮಂಗಮ್ಮನಪಾಳ್ಯ, ಕೆಜಿ ಹಳ್ಳಿಯಲ್ಲಿ ಒಬ್ಬರು, ಜ್ಞಾನಭಾರತಿ ವಾರ್ಡ್‌ ಮೃತ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಹೊರತು ಪಡಿಸಿ ಬಾಕಿ ಐದು ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  ಆರ್‌.ಆರ್‌.ನಗರ ವಲಯದ ಜ್ಞಾನಭಾರತಿ ವಾರ್ಡ್‌ 54 ವರ್ಷದ ವ್ಯಕ್ತಿಯು ಸೋಮವಾರ ಸಂಜೆ ವೇಳೆ ಖಾಸಗಿ ಆಸ್ಪತ್ರೆಯಲ್ಲಿ ಸಂಬಂಧಿಕರ ಮಗುವನ್ನು ನೋಡಲು ತೆರಳಿದ್ದ ಸಂದರ್ಭದಲ್ಲಿ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.

ಆದರೆ, ನಿಯಮದನ್ವಯ ಅವರ ಗಂಟಲು ದ್ರವ ಪರೀಕ್ಷೆ ತೆಗೆದುಕೊಳ್ಳಲಾಗಿತ್ತು. ಮಂಗಳವಾರ ಬಂದ ಸೋಂಕು ಪರೀಕ್ಷಾ ವರದಿ ಪಾಸಿಟಿವ್‌ ಬಂದಿದೆ. ಈ ಮೃತ ವ್ಯಕ್ತಿಯೊಂದಿಗೆ ಪ್ರಥಮ ಸಂಪರ್ಕ ಹೊಂದಿದ್ದ ಆರು ಮಂದಿಯನ್ನು  ಕ್ವಾರಂಟೈನ್‌ ಮಾಡಲಾಗಿದೆ. ಪಾದರಾಯನಪುರದಲ್ಲಿ ಸೋಂಕಿತ 24 ವರ್ಷದ ಯುವಕ (ಪಿ- 608) ಪ್ರಾಥಮಿಕ ಸಂಪರ್ಕ ಹೊಂದಿದ್ದ ಮೂವರಿಗೆ ಸೋಂಕು ಹರಡಿದೆ.

ಸಂಪರ್ಕ ಹಿನ್ನೆಲೆ ಹೋಟೆಲ್‌ನಲ್ಲಿ ಕ್ವಾರಂಟೈನ್‌ ಮಾಡಲಾಗಿತ್ತು.  ನಿಯಮದನ್ವಯ ಕ್ವಾರಂಟೈನ್‌ ಮುಗಿಯುವ ವೇಳೆ ಪರೀಕ್ಷೆ ನಡೆಸಿದಾಗ ಸೋಂಕಿರುವುದು ದೃಢಪಟ್ಟಿದೆ. ಮಂಗಮ್ಮನಪಾಳ್ಯದ ರ್‍ಯಾಂಡಮ್‌ ತಪಾಸಣೆ ವೇಳೆ ಇಪ್ಪತ್ತು ವರ್ಷದ ಮಹಿಳೆಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ. ಮತ್ತೂಂದು ಪ್ರಕರಣದಲ್ಲಿ ತೀವ್ರ ಉಸಿರಾಟ ಸಮಸ್ಯೆಯೊಂದಿದ್ದ ಕೆ.ಜಿ. ಹಳ್ಳಿಯ 32 ವ್ಯಕ್ತಿಗೆ ಸೋಂಕು ದೃಢಪಟ್ಟಿದೆ.

ಇವರ ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಮಾಡಿ ಕ್ವಾರಂಟೈನ್‌ ಮಾಡಲಾಗಿದೆ ಎಂದು ಬಿಬಿಎಂಪಿ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.  ನಗರದ ಸೋಂಕಿತರ ಪೈಕಿ 49 ವರ್ಷದ ಮಹಿಳೆಯೊಬ್ಬರು ಗುಣ ಮುಖರಾಗಿ ಮನೆಗೆ ತೆರಳಿದ್ದಾರೆ. ಒಟ್ಟಾರೆ 246 ಪ್ರಕರಣಗಳ ಪೈಕಿ 123 ಮಂದಿ ಗುಣಮುಖರಾಗಿದ್ದು, 114 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ  ಪಡೆಯುತ್ತಿದ್ದಾರೆ. ಬಾಕಿ ಎಂಟು ಮಂದಿ ಚಿಕಿತ್ಸೆ ಫ‌ಲಕಾರಿಯಾಗದೇ, ಒಬ್ಬ ಸೋಂಕಿತ ಆತ್ಮಹತ್ಯೆ ಮಾಡಿಕೊಂಡು ಸಾವಿಗೀಡಾಗಿದ್ದಾರೆ.

ಕ್ವಾರಂಟೈನ್‌ ಕೇಂದ್ರಗಳ ಲ್ಲಿರುವ ಹೋಟೆಲ್‌ನ ಸಿಬ್ಬಂದಿ ಆರೋಗ್ಯ ದೃಷ್ಟಿ ಹಾಗೂ ಕ್ವಾರಂಟೈನ್‌ನಲ್ಲಿರುವವರು ಅವರ ಸಂಪರ್ಕದಲ್ಲಿ ಬರದೆ ಇರುವಂತೆ ಕ್ರಮವಹಿಸುವ ನಿಟ್ಟಿನಲ್ಲಿ ಪಾಲಿಕೆಯಿಂದ ಶೀಘ್ರ ಮಾರ್ಗಸೂಚಿ ಹೊರಡಿಸಲು ಕ್ರಮ ವಹಿಸಲಾಗುವುದು.
-ಬಿ.ಎಚ್‌.ಅನಿಲ್‌ಕುಮಾರ್‌, ಬಿಬಿಎಂಪಿ ಆಯುಕ್ತ

ಟಾಪ್ ನ್ಯೂಸ್

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

Paper-Reader

Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

23-bng

Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?

22-bng

Bengaluru: ಏರ್ಪೋರ್ಟ್‌ ಟಿ-2ಗೆ ವರ್ಟಿಕಲ್‌ ಗಾರ್ಡನ್‌ ರಂಗು

21-bng

Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ

20-flipama

Bengaluru: 19 ಕಡೆ ಫ್ಲಿಪ್‌ ಕಾರ್ಟ್‌, ಅಮೆಜಾನ್‌ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ

19-bng

Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

Paper-Reader

Golden Jubliee: ಪತ್ರಿಕೆಯ ಓದು ಪ್ರತಿಯೊಬ್ಬರಿಗೂ ಆಹಾ! ಎನಿಸುವಂತಿರಲಿ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

High-Court

High Court: ʼಅಪರಾಧಿ ಪತಿಯೊಂದಿಗೆ ನೆಲೆಸಿದ ಮಾತ್ರಕ್ಕೆ ಪತ್ನಿಯನ್ನೂ ಅಪರಾಧಿ ಮಾಡಲಾಗದುʼ

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Karnataka: ಅರಣ್ಯದಲ್ಲಿ ನಿರಂತರ ಗಣಿ ಚಟುವಟಿಕೆಗೆ ಅನುಮತಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.