ಸಾಮಾಜಿಕ ಅಂತರ, ಮಾಸ್ಕ್ ಇಲ್ಲದಿದ್ದರೆ 200 ರೂ.ದಂಡ
Team Udayavani, Jun 18, 2020, 5:44 AM IST
ಬೆಂಗಳೂರು: ನಗರದ ಪ್ರಮುಖ ಮಾರುಕಟ್ಟೆ, ಹೋಟೆಲ್‌ಗಳಲ್ಲಿ ಮಾಸ್ಕ್ ಧರಿಸದೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವವರ ಮೇಲೆ ಗುರು ವಾರದಿಂದ 200 ರೂ. ದಂಡ ಬೀಳಲಿದೆ. ಈ ಸಂಬಂಧ ಕರ್ನಾಟಕ ರಾಜ್ಯ ಮಿನರಲ್ ಕಾರ್ಪೋರೇಷನ್‌ನ ವ್ಯವಸ್ಥಾಪಕ ನಿರ್ದೇಶಕ ನವೀನ್ ರಾಜ್‌ಸಿಂಗ್ ಅವರ ನೇತೃತ್ವದಲ್ಲಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಬುಧವಾರ ಸಭೆ ನಡೆಯಿತು.
ಈ ಸಂಬಂಧ “ಉದಯವಾಣಿ’ಯೊಂದಿಗೆ ಮಾತನಾಡಿದ ಬಿಬಿಎಂಪಿ ಘನತ್ಯಾಜ್ಯ ವಿಭಾಗದ ಜಂಟಿ ಆಯುಕ್ತ ಸರ್ಫರಾಜ್‌ಖಾನ್, ನಗರದಲ್ಲಿ ಮಾರುಕಟ್ಟೆ ಹಾಗೂ ಹೋಟೆಲ್‌ಗಳಲ್ಲಿ ಹೆಚ್ಚು ಜನ ಸೇರುತ್ತಿದ್ದು, ಕೊರೊನಾ ಸೋಂಕು ಹಬ್ಬುವ ಆತಂಕ ಎದುರಾಗಿದೆ. ಹೀಗಾಗಿ, ಬಿಬಿಎಂಪಿ ವ್ಯಾಪ್ತಿಯ 8 ವಲಯಗಳಲ್ಲಿ ತಲಾ 5 ಜನರನ್ನು ಒಳಗೊಂಡ ಮಾರ್ಷಲ್‌ಗಳ ತಂಡ ಹಾಗೂ ಕಿರಿಯ ಮತ್ತು ಹಿರಿಯ ಆರೋಗ್ಯಾಧಿಕಾರಿಗಳ ಕಣ್ಗಾವಲು ತಂಡ ರಚಿಸಲಾಗಿದೆ ಎಂದರು.
ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸದೆ ಇರುವವರ ಮೇಲೆ ತಲಾ 200 ರೂ. ದಂಡ ವಿಧಿಸಲಾಗುವುದು ಹಾಗೂ ಬಿಬಿಎಂಪಿ ಮಾರ್ಗಸೂಚಿ ಅನುಸರಿಸದ ಹೋಟೆಲ್, ರೆಸ್ಟೋರೆಂಟ್‌ನ ಮಾಲಿಕರ ಮೇಲೂ ಕ್ರಮ ತೆಗೆದುಕೊಳ್ಳಲು ಸಾಮಾಜಿಕ ಅಂತರ ಕಾರ್ಯಪಡೆಯ ಅಧ್ಯಕ್ಷರಾ ದ ನವೀನ್ ರಾಜ್‌ಸಿಂಗ್ ಅವರು ನಿರ್ದೇಶನ ನೀಡಿದ್ದಾರೆ.
ಹೀಗಾಗಿ, ಗುರುವಾರದಿಂದಲೇ ಕಾರ್ಯಾಚರಣೆ ಪ್ರಾರಂಭಿಸಲಾಗುವುದು. ಇದಕ್ಕಾಗಿ ಪ್ರತಿ ವಲಯಕ್ಕೆ ಒಂದು ಪ್ರಹಾರಿ ವಾಹನ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ಬಿಬಿಎಂಪಿ ವಿಶೇಷ ಆಯುಕ್ತ (ಘನತ್ಯಾಜ್ಯ) ವಿಭಾಗ ರಂದೀಪ್, ಚೀಫ್ ಮಾರ್ಷಲ್ ರಾಜಿರ್ ಸಿಂಗ್, ಆರೋಗ್ಯಾಧಿಕಾರಿಗಳಾದ ಸಂಧ್ಯಾ, ಭಾಗ್ಯ ಲಕ್ಷ್ಮೀ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.