ಸಭಾಪತಿ ರಾಜೀನಾಮೆ ತೀರ್ಮಾನ ಸಾಧ್ಯತೆ ?


Team Udayavani, Dec 17, 2020, 12:26 PM IST

ಸಭಾಪತಿ ರಾಜೀನಾಮೆ ತೀರ್ಮಾನ ಸಾಧ್ಯತೆ ?

ಬೆಂಗಳೂರು: ಸಭಾಪತಿ ವಿರುದ್ಧ ಅವಿಶ್ವಾಸ ವಿಚಾರದಲ್ಲಿ ಬಿಜೆಪಿ ಜತೆ ಜೆಡಿಎಸ್‌ ಬಹಿರಂಗವಾಗಿ ನಿಂತಿರುವುದರಿಂದ ಪ್ರತಾಪಚಂದ್ರ ಶೆಟ್ಟಿ ಅವರು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಅನಿವಾರ್ಯವಾಗಬಹುದು.

ರಾಜ್ಯಪಾಲರಸೂಚನೆಅಥವಾಮತ್ತೂಮ್ಮೆವಿಧಾನಪರಿಷತ್‌ ಅಧಿವೇಶನ ನಿಗದಿಗೆ ಮುನ್ನವೇ ಪ್ರತಾಪಚಂದ್ರ ಶೆಟ್ಟಿ ಅವರು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.ಪದಚ್ಯುತಿ ವಿದ್ಯಮಾನಗಳಿಂದ ಬೇಸರಗೊಂಡು

ರಾಜೀನಾಮೆ ನೀಡಲು ಅವರು ತೀರ್ಮಾನಿಸಿದ್ದರು. ಆದರೆ,  ಪಕ್ಷದ ನಾಯಕರು ಬೇರೆ ಬೇರೆ ಕಾರಣಕ್ಕಾಗಿ ರಾಜೀನಾಮೆ ಕೊಡುವುದು ಬೇಡ ಎಂದು ತಿಳಿಸಿದ್ದರು. ಹೀಗಾಗಿ, ಒಲ್ಲದ ಮನಸ್ಸಿನಿಂದಲೇ ನಿರ್ವಹಣೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಮಂಗಳವಾರ ಪರಿಷತ್‌ನಲ್ಲಿ ನಡೆದ ವಿದ್ಯಮಾನಗಳುಕಾಂಗ್ರೆಸ್‌ ಪಕ್ಷಕ್ಕೂ ಮುಜುಗರವುಂಟಾಗಿದೆ ಎಂದು ಹೇಳಲಾಗಿದೆ. ಬಿಜೆಪಿ ಜತೆ ಜೆಡಿಎಸ್‌ನ ಪರಿಷತ್‌ ಸದಸ್ಯರು ರಾಜ್ಯಪಾಲರಿಗೆ ದೂರು ನೀಡಿ ಬಸವರಾಜ ಹೊರಟ್ಟಿ ಅವರು ಬಹಿರಂಗವಾಗಿಯೇ ಬಿಜೆಪಿಗೆ ಬೆಂಬಲ ಸಹ ಘೋಷಿಸಿದ್ದಾರೆ.

ಹೀಗಾಗಿ, ಎರಡೂ ಪಕ್ಷಗಳ ಬಲ 45 ಆಗುವುದರಿಂದ ರಾಜೀನಾಮೆ ನೀಡದೆ ಬೇರೆ ಮಾರ್ಗವಿಲ್ಲ ಎಂದು ಪಕ್ಷದ ವಲಯದಲ್ಲೂ ಅಭಿಪ್ರಾಯ ಪಡಲಾಗಿದೆ. ಇದರ ನಡುವೆ ಸಭಾಪತಿಯವರು ಕಾನೂನು ತಜ್ಞರ ಜತೆ ಸಮಾಲೋಚನೆ ನಡೆಸಿದ್ದಾರೆ. ಆದರೆ, ಕೆಲವು ನಾಯಕರು ಪರಿಷತ್‌ ಅಧಿವೇಶನದಲ್ಲಿ ಸಭಾಪತಿ ವಿಚಾರ ಮತಕ್ಕೆ ಹಾಕಿ ಅಲ್ಲೂ ಜೆಡಿಎಸ್‌ನವರ ಬೆಂಬಲ ದಾಖಲಾಗಲಿ ಎಂಬ ಅನಿಸಿಕೆ ಸಹ ವ್ಯಕ್ತಪಡಿಸಿದ್ದಾರೆ. ಕಾನೂನು ಹೋರಾಟ ಮಾಡೋಣ ಎಂಬ ವಾದ ಮುಂದಿಟ್ಟಿದ್ದಾರೆ. ಆದರೆ, ಆ ಮಟ್ಟದವರೆಗೂ ಮುಂದುವರಿಯುವುದು ಬೇಡ ಎಂಬುದೇ ಬಹುತೇಕ ನಾಯಕರ ಸಲಹೆ ಎಂದು ತಿಳಿದು ಬಂದಿದೆ.¨

ಇದನ್ನೂ ಓದಿ:ಬಜರಂಗದಳ ಕಂಟೆಂಟ್ ಮೇಲೆ ನಿಷೇಧ ಹೇರುವ ಅಗತ್ಯವಿಲ್ಲ: ಆಯೋಗಕ್ಕೆ ಫೇಸ್ ಬುಕ್ ಇಂಡಿಯಾ

ರಾಜ್ಯಪಾಲರಿಗೆ ವರದಿ ನೀಡಲು ಸಿದ್ಧತೆ

ಮಂಗಳವಾರ ವಿಧಾನ ಪರಿಷತ್ತಿನಲ್ಲಿ ನಡೆದ ಘಟನಾವಳಿಗಳ ವಿವರವನ್ನು ವಿಧಾನಪರಿಷತ್‌ ಸಭಾಪತಿ ಕೆ. ಪ್ರತಾಪಚಂದ್ರಶೆಟ್ಟಿ ರಾಜ್ಯಪಾಲರಿಗೆ ವರದಿ ನೀಡಲು ಸಿದ್ದತೆ ಮಾಡಿಕೊಂಡಿದ್ದಾರೆ. ರಾಜ್ಯಪಾಲರು ಘಟನೆಯ ಬಗ್ಗೆ ಮಾಹಿತಿ ನೀಡುವಂತೆ ಕೇಳಿದರೆ ಸಂಪೂರ್ಣ ವರದಿ ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.

ಪರಿಷತ್ತಿನಲ್ಲಿ ಕಲಾಪ ಆರಂಭಕ್ಕೂ ಮುನ್ನ ಬೆಳಗ್ಗೆ 11.15ಕ್ಕೆ ಕಾರ್ಯಕಲಾಪ ಪ್ರಾರಂಭಿಸಲು ಬೆಲ್‌ ಹಾಕಲು ಕಾರ್ಯದರ್ಶಿಗೆ ಸೂಚನೆ ನೀಡಿದ್ದು, ನಾನು ನನ್ನ ಕಚೇರಿಯಲ್ಲಿಕುಳಿತಿರುವಾಗ ಪರಿಷತ್‌ಕಾರ್ಯದರ್ಶಿ ಕೋರಂ ಬೆಲ್‌ ಹಾಕಿದರು. ಬೆಲ್‌ ಕೊನೆಗೊಳ್ಳುವ ಮೊದಲೇ ಉಪಸಭಾಪತಿ ಏಕಾಏಕಿ ಯಾವುದೇ ಸೂಚನೆ ನೀಡದೆ ಸಭಾಪತಿ ಪೀಠ ಅಲಂಕರಿಸಿದರು. ತಕ್ಷಣ  ಸ‌ದನದಲ್ಲಿದ್ದ ಬಹುತೇಕ ಸದಸ್ಯರು ಸಭಾಪತಿ ಪೀಠವನ್ನು ಸುತ್ತುವರೆದು, ತಳ್ಳಾಟ, ನೂಕಾಟದಿಂದ ಗೊಂದಲದವಾತಾವರಣ ನಿರ್ಮಾಣ ಮಾಡಿದರು.

ಕೆಲವರು ಸಭಾಪತಿ ಪ್ರವೇಶಿಸುವ ಕಚೇರಿಯ ಬಾಗಿಲನ್ನು ಒಳಗಡೆಯಿಂದ ಚಿಲಕಹಾಕಿಕೊಂಡು,ಸಭಾಪತಿಗಳು ಸದನದಒಳಗಡೆಬರದಂತೆ ತಡೆಯುವಪ್ರಯತ್ನಗಳು ನಡೆದವು. ಈ ಎಲ್ಲ ಅಂಶಗಳನ್ನುಕಚೇರಿಯಲ್ಲಿಕುಳಿತು ಟಿವಿಯಲ್ಲಿ ವೀಕ್ಷಣೆ ಮಾಡಿದ್ದೇನೆ. ಈ ನಡುವೆ ಸಭಾಪತಿ ಪೀಠದ ಮೇಲೆ ಕುಳಿತುಕೊಂಡಿದ್ದ ಉಪಸಭಾಪತಿಯನ್ನುಕೆಲವು ಸದಸ್ಯರು ಬಲವಂತವಾಗಿ ಆ ಸ್ಥಾನದಿಂದ ತೆರವುಗೊಳಿಸುವುದನ್ನು ಗಮನಿಸಿದ್ದು, ತದ ನಂತರವೂ ಗದ್ದಲ ಮುಂದುವರೆದಿತ್ತು.

ಈ ಹಂತದಲ್ಲಿ ವಿಧಾನ ಪರಿಷತ್‌ ಸಚಿವಾಲಯದ ಕಾರ್ಯದರ್ಶಿಗಳು, ಜಂಟಿ ಕಾರ್ಯದರ್ಶಿ ನನ್ನಕಚೇರಿಗೆ ಬಂದು ಸದನದೊಳಗೆ ಇರುವ ಪರಿಸ್ಥಿತಿಯನ್ನು ನನಗೆ ಮನವರಿಕೆ ಮಾಡಿಕೊಟ್ಟು, ಸದನದ ಅಧಿಕಾರಿಗಳಿಗೂ ಭಯದ ವಾತಾವರಣ ಇದೆ ಎಂದು ತಿಳಿಸಿದರು.

ಆ ಕೂಡಲೇ ಬೆಲ್‌ ಆಫ್ ಮಾಡುವಂತೆ ಕಾರ್ಯದರ್ಶಿಗೆ ಸೂಚಿಸಿ, ದಂಡ ನಾಯಕರ ರಕ್ಷಣೆಯೊಂದಿಗೆ ನಾನು ಪೀಠಕ್ಕೆ ತೆರಳಿದಾಗಲೂ ಸದನದಲ್ಲಿ ಸದಸ್ಯರ ಕೂಗಾಟ, ಜಗ್ಗಾಟ ಮುಂದುವರೆದಿತ್ತು. ಅನಿವಾರ್ಯವಾಗಿ ಸದನವನ್ನು ಅನಿರ್ಧಿಷ್ಠಾ ವಧಿಗೆ ಮುಂದೂಡಲು ಪೀಠದಿಂದ ತೀರ್ಮಾನಿಸಿರುತ್ತೇನೆ. ಈ ಎಲ್ಲ ಅಂಶಗಳನ್ನು ಸದನದ ದೃಶ್ಯಾವಳಿಗಳಿಂದ ಖಾತರಿಪಡಿಸಿ ಕೊಳ್ಳಬಹುದು. ಅದರಂತೆ ಸದನವನ್ನು ಅನಿರ್ದಿಷ್ಠಾವಧಿಗೆ ಮುಂದೂಡುವ ಅಧಿಸೂಚನೆಯನ್ನು ಅನುಮೊದಿಸಿ ರುವುದಾಗಿ ವರದಿಯಲ್ಲಿ ತಿಳಿಸಿಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಈ ಪ್ರಕರಣದಲ್ಲಿ ನಾನು ಯಾವುದೇ ರೀತಿಯಕಾನೂನು ಬಾಹಿರ ತೀರ್ಮಾನ ತೆಗೆದುಕೊಂಡಿಲ್ಲ. ಆದರೂ, ನನ್ನದೇ ತಪ್ಪು ಎನ್ನುವಂತೆ ಬಿಂಬಿಸಲಾಗುತ್ತಿದೆ. ನೋಟಿಸ್‌ಕೊಟ್ಟಾಗ ಬಿಜೆಪಿಗೆ ಬಹುಮತ ಇರಲಿಲ್ಲ. ಈಗಲೂ ನಾನು ನಡೆದುಕೊಂಡಿರುವ ಬಗ್ಗೆ ಯಾರಾದರೂ ಪ್ರಶ್ನೆ ಮಾಡಿದರೆ ಎಲ್ಲದಕ್ಕೂ ಸ್ಪಷ್ಟ ಉತ್ತರ ನೀಡುತ್ತೇನೆ.

ಕೆ. ಪ್ರತಾಪಚಂದ್ರ ಶೆಟ್ಟಿ, ಸಭಾಪತಿ

ಟಾಪ್ ನ್ಯೂಸ್

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.