ಪ್ರಕಾಶಕರ ಸಮ್ಮೇಳನಾಧ್ಯಕ್ಷರಾಗಿ ಟಿ.ಎಸ್. ಛಾಯಾಪತಿ ಆಯ್ಕೆ: ನಂದೀಶ್ ಹಂಚೆ

Team Udayavani, Feb 17, 2022, 5:27 PM IST

19publishers

ಬೆಂಗಳೂರು: ಮಾರ್ಚ್ ತಿಂಗಳಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಪ್ರಕಾಶಕರ ಸಮ್ಮೇಳನವನ್ನು ಮೈಸೂರಿನಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದು, ಎರಡನೇ ಬಾರಿಗೆ ಆಯೋಜಿಸಲಾಗುತ್ತಿರುವ ಈ ಪ್ರಕಾಶಕರ ಸಮ್ಮೇಳನಕ್ಕೆ ತಳುಕಿನ ವೆಂಕಣ್ಣಯ್ಯ ಗ್ರಂಥಮಾಲೆಯ ಟಿ.ಎಸ್. ಛಾಯಾಪತಿ ಅವರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್. ನಂದೀಶ್ ಹಂಚೆ ಹೇಳಿದ್ದಾರೆ.

ಮಾರ್ಚ್ ಎರಡನೇ ವಾರದಲ್ಲಿ ಈ ಪ್ರಕಾಶಕರ ಸಮ್ಮೇಳನವನ್ನು ಆಯೋಜಿಸಲಾಗುವುದು.  ಇದೇ ಸಂದರ್ಭದಲ್ಲಿ ಮೈಸೂರಿನಲ್ಲಿಯೇ ಆರು ದಿನಗಳ ಕಾಲ ರಿಯಾಯಿತಿ ಕನ್ನಡ ಪುಸ್ತಕ ಮಾರಾಟ ಮೇಳವನ್ನು ಸಹ ಆಯೋಜಿಸಲಾಗುವುದು ಎಂದು ಅವರು ತಿಳಿಸಿದರು.

ಟಿ.ಎಸ್. ಛಾಯಾಪತಿ ಅವರ ಪರಿಚಯ

ಟಿ.ಎಸ್. ಛಾಯಾಪತಿ ಅವರು ಕನ್ನಡ ಪುಸ್ತಕ ಲೋಕ ಕಂಡ ಅಪರೂಪದ ಪ್ರಕಾಶಕ ರಲ್ಲಿ ಒಬ್ಬರು.

ಕನ್ನಡದ ಸುಪ್ರಸಿದ್ಧ ಸಾಹಿತಿ ತ.ಸು. ಶಾಮರಾಯರ ಪುತ್ರರಾದ ಛಾಯಾಪತಿ ಅವರು ಹುಟ್ಟಿದ್ದು 1944 ರಲ್ಲಿ, ಮೈಸೂರು ಇವರ ತವರೂರು, ಸಹಜವಾಗಿಯೇ ಸಾಹಿತ್ಯದಲ್ಲಿ ಆಸಕ್ತಿ ಬೆಳೆಸಿಕೊಂಡವರು.

ಇದನ್ನೂ ಓದಿ:ಜಿಲ್ಲಾ ಮಟ್ಟದ ಕಡತ ಯಜ್ಞಕ್ಕೆ ಮುಂದಾದ ಸುನೀಲ್ ಕುಮಾರ್

ತಳುಕಿನ ವೆಂಕಣ್ಣಯ್ಯ ಗ್ರಂಥಮಾಲೆ ಹೆಸರಿನಲ್ಲಿ 1950ರಲ್ಲಿ ಪ್ರಕಾಶನ ಸಂಸ್ಥೆ ಆರಂಭಿಸಿದರು. ಇದರ ಮೂಲಕ ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನು ಪ್ರಕಟಿಸಿರುವ ಛಾಯಾಪತಿ ಅವರು ಸ್ವತಃ ಲೇಖಕರು, 23ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿ ಪುಸ್ತಕಲೋಕಕ್ಕೆ ತಮ್ಮದೇ ಆದ ಕೊಡುಗೆ ಕೊಟ್ಟಿದ್ದಾರೆ.

ತಮ್ಮ ಪ್ರಕಾಶನ ಸಂಸ್ಥೆಯ ಮೂಲಕ ಕನ್ನಡದ ಅನೇಕ ದಿಗ್ಗಜ ಸಾಹಿತಿಗಳ ಪುಸ್ತಕಗಳನ್ನು ಪ್ರಕಟಿಸಿರುವ ಅವರು ನಾಡಿನ ಉದ್ದಗಲಕ್ಕೂ ಎಲ್ಲ ಪ್ರಕಾರದ ಸಾಹಿತಿಗಳಿಂದ ಮುಕ್ತ ಪ್ರಶಂಸೆಗೆ ಪಾತ್ರರಾದವರು.

ಇವರ ಪ್ರಕಾಶನ ಸಂಸ್ಥೆಗೆ 1999 ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದಿಂದ ಅತ್ಯುತ್ತಮ ಪ್ರಕಾಶನ ಪ್ರಶಸ್ತಿ ಲಭಿಸಿತು. ಕನ್ನಡ ಸಾಹಿತ್ಯ ಪರಿಷತ್ತಿನಿಂದಲೂ ಅತ್ಯುತ್ತಮ ಪ್ರಕಾಶನ ಪ್ರಶಸ್ತಿ ಇವರಿಗೆ ಲಭಿಸಿದೆ. ಇದಲ್ಲದೆ ಅಸಂಖ್ಯಾತ ಪ್ರಶಸ್ತಿ-ಪುರಸ್ಕಾರಗಳನ್ನು ಪಡೆದಿರುವ ಛಾಯಾಪತಿ ನಿಗರ್ವಿ, ಸರಳ ಮತ್ತು ಸಜ್ಜನ ವ್ಯಕ್ತಿ ಎಂದು ಹೆಸರಾಗಿದ್ದಾರೆ.

ಕನ್ನಡ ಪುಸ್ತಕ ಪ್ರಾಧಿಕಾರ ಪ್ರಕಾಶನ ಕ್ಷೇತ್ರಕ್ಕೆ ಇವರು ಸಲ್ಲಿಸಿರುವ ಅನನ್ಯ ಸೇವೆಗಾಗಿ ಇವರನ್ನು ಮೈಸೂರಿನಲ್ಲಿ ಆಯೋಜಿಸಿರುವ ಎರಡನೇ ಪ್ರಕಾಶಕರ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ.

ಟಾಪ್ ನ್ಯೂಸ್

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.