Bengaluru ಟೆಕ್ಕಿ ಆತ್ಮಹ*ತ್ಯೆ; ಪತ್ನಿ, ಆಕೆಯ ತಾಯಿ, ಸಹೋದರ ಪೊಲೀಸರ ಬಲೆಗೆ
ನಿಖಿತಾ ಸಿಂಘಾನಿಯಾ ಸೇರಿ ಮೂವರು ತಲೆ ಮರೆಸಿಕೊಂಡಿದ್ದರು...
Team Udayavani, Dec 15, 2024, 9:42 AM IST
ಬೆಂಗಳೂರು: ಬೆಂಗಳೂರಿನ ಮಾರತ್ತ ಹಳ್ಳಿಯಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹ*ತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಪತ್ನಿ, ಆಕೆಯ ತಾಯಿ ಮತ್ತು ಸಹೋದರನನ್ನು ಬೆಂಗಳೂರು ಪೊಲೀಸರು ಭಾನುವಾರ(ಡಿ15) ಬಂಧಿಸಿದ್ದಾರೆ.
34 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಅತುಲ್ ಸುಭಾಷ್ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. 24 ಪುಟಗಳ ಡೇ*ತ್ ನೋಟ್ ಮತ್ತು ವೀಡಿಯೊವನ್ನು ಹಂಚಿಕೊಂಡು ತನ್ನ ಪತ್ನಿ ಮತ್ತು ಆಕೆಯ ಕುಟುಂಬದ ಕಿರುಕುಳ ನೀಡಿದ್ದು, ತಾಳಲಾರದೆ ಈ ರೀತಿ ಮಾಡುತ್ತಿದ್ದೇನೆ ಎಂದು ಆರೋಪಿಸಿದ್ದರು.
ಸುಭಾಷ್ ಅವರ ಪತ್ನಿ ನಿಖಿತಾ ಸಿಂಘಾನಿಯಾ ಅವರನ್ನು ಗುರುಗ್ರಾಮ್‌ನಲ್ಲಿ ಬಂಧಿಸಲಾಗಿದ್ದು, ಆಕೆಯ ತಾಯಿ ನಿಶಾ ಸಿಂಘಾನಿಯಾ ಮತ್ತು ಸಹೋದರ ಅನುರಾಗ್ ಸಿಂಘಾನಿಯಾ ಅವರನ್ನು ಪ್ರಯಾಗ್‌ರಾಜ್‌ನಲ್ಲಿ ಬಂಧಿಸಲಾಗಿದೆ. ಬೆಂಗಳೂರು ನಗರ ಪೊಲೀಸರು ನಿಕಿತಾ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಆತ್ಮಹ*ತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿದ ನಂತರ ಬಂಧಿಸಲಾಗಿದೆ.
ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದರು
ಅತುಲ್ ಸುಭಾಷ್ ಅವರ ಆತ್ಮಹ*ತ್ಯೆಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿರುವ ಸುಭಾಷ್ ವಿಚ್ಛೇದಿತ ಪತ್ನಿ ನಿಖಿತಾ ಸಿಂಘಾನಿಯಾ ಮತ್ತವರ ಕುಟುಂಬ ಶನಿವಾರ ಅಲಹಾಬಾದ್ ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ನಿಖಿತಾ ಸಿಂಘಾನಿಯಾ ಜತೆಗೆ ಅವರ ತಾಯಿ ನಿಶಾ ಸಿಂಘಾನಿಯಾ, ಸಹೋದರ ಅನುರಾಗ್ ಸಿಂಘಾನಿಯಾ ಮತ್ತು ಚಿಕ್ಕಪ್ಪ ಸುಶೀಲ್ ಸಿಂಘಾನಿಯಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಶುಕ್ರವಾರವಷ್ಟೇ ಬೆಂಗಳೂರು ಪೊಲೀಸರು ನಿಖಿತಾ ವಿರುದ್ಧ ಸಮನ್ಸ್ ಜಾರಿಗೊಳಿಸಿ, ಸೋಮ ವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು
ಉನ್ನತಮಟ್ಟದ ತನಿಖೆಗೆ ಒತ್ತಾಯ
ಪ್ರಕರಣ ದೇಶಾದ್ಯಂತ ಭಾರೀ ಸುದ್ದಿ ಮಾಡಿದ್ದು ಅತುಲ್ ಸಾ*ವಿಗೆ ನ್ಯಾಯ ಒದಗಿಸಿ ಕೊಡಬೇಕೆಂದು ಅನೇಕರು ಬೀದಿಗಿಳಿದು ಹೋರಾಟವನ್ನೂ ನಡೆಸಿದ್ದರು.
ಪ್ರಕರಣ ಕುರಿತು ಸಮಿತಿ ರಚಿಸಿ ಉನ್ನತಮಟ್ಟದ ತನಿಖೆ ನಡೆಸಬೇಕು. ವಿಚ್ಛೇದನ, ವೈವಾಹಿಕ ವಿವಾದಗಳಿಗೆ ನ್ಯಾಯಾಂಗ ವ್ಯವಸ್ಥೆಯಲ್ಲಿ ಅಗತ್ಯ ಸುಧಾರಣೆ ತರಬೇಕು ಎಂದು ಸೇವ್ ಇಂಡಿಯನ್ ಫ್ಯಾಮಿಲಿ ಫೌಂಡೇಷನ್ ಸಹ ಸಂಸ್ಥಾಪಕ ಅನಿಲ್ ಮೂರ್ತಿ ಒತ್ತಾಯಿಸಿದರು.
ಶನಿವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಕಳೆದ 4 ವರ್ಷದಿಂದ ಸಂಸ್ಥೆ ಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅತುಲ್ ಸುಭಾಷ್ ಆತ್ಮಹ*ತ್ಯೆ ಮಾಡಿಕೊಂಡಿರುವುದು ಬೇಸರ ತಂದಿದೆ ಎಂದು ತಿಳಿಸಿದರು. ವಿಚ್ಛೇದನ ಪಡೆದ ಬಳಿಕ ಪತ್ನಿಗೆ ನೀಡುವ ಜೀವನಾಂಶದ ಹಣ ಎಂಬುದನ್ನು ರದ್ದುಪಡಿಸಿ “ಸಹಾಯನಿಧಿ’ ಎಂದು ಬದಲಿಸಬೇಕು. ದೈಹಿಕ, ಮಾನಸಿಕ ಅಸಮರ್ಥರನ್ನು ಹೊರತುಪಡಿಸಿ ಸಿಎ, ಎಂಬಿಎ, ವೈದ್ಯರು, ಎಂಜಿನಿಯರಿಂಗ್ ಸೇರಿದಂತೆ ತೆರಿಗೆ ಪಾವತಿದಾರರು ಜೀವನಾಂಶಕೋರಿ ಸಲ್ಲಿಸುವ ಅರ್ಜಿಗಳನ್ನು ಆರಂಭದಲ್ಲಿ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಫೌಂಡೇಷನ್ ಸಂಸ್ಥಾಪಕ ಪಾಂಡುರಂಗಶೆಟ್ಟಿ, ವಕೀಲ ಮಂಜುನಾಥ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ
Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ
ವಿವಾಹಕ್ಕೆ 4 ದಿನ ಇರುವಾಗಲೇ ಮಗಳನ್ನು ಪೊಲೀಸರ ಎದುರೇ ಗುಂಡಿಟ್ಟು ಹ*ತ್ಯೆಗೈದ ತಂದೆ!
Kerala: ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾದ ವ್ಯಕ್ತಿ ಶವಾಗಾರದಲ್ಲಿ ಜೀವಂತವಾದ!
Liquor Policy Case:ಕೇಜ್ರಿ, ಸಿಸೋಡಿಯಾ ವಿರುದ್ಧ ಪ್ರಾಸಿಕ್ಯೂಷನ್: EDಗೆ ಕೇಂದ್ರದ ಅನುಮತಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.