Bangalore: ಸ್ಕ್ಯಾನಿಂಗ್‌ಗೆ ಬಂದಿದ್ದ ವೃದ್ಧೆಗೆ ಲೈಂಗಿಕ ದೌರ್ಜನ್ಯ: ಟೆಕ್ನಿಶಿಯನ್ ಸೆರೆ
Team Udayavani, Sep 8, 2023, 10:53 AM IST
ಬೆಂಗಳೂರು: ಸ್ಕ್ಯಾನಿಂಗ್ ಮಾಡುವಾಗ ವೃದ್ಧ ಮಹಿಳೆಯ ಖಾಸಗಿ ಭಾಗಗಳನ್ನು ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ ಪಶ್ಚಿಮ ಬಂಗಾಳ ಮೂಲದ ಟೆಕ್ನಿಶಿಯನ್ ಅಶೋಕ್ (24) ಎಂಬಾತನನ್ನು ಕೊಡಿಗೇಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕೆಲ ವರ್ಷ ಹಿಂದೆಯೇ ಬೆಂಗಳೂರಿಗೆ ಬಂದಿರುವ ಆರೋಪಿ, ಹೆಬ್ಟಾಳದಲ್ಲಿ ಬಾಡಿಗೆ ಮನೆಯಲ್ಲಿದ್ದು, ಮುಖ್ಯರಸ್ತೆಯಲ್ಲಿರುವ ಪ್ರತಿಷ್ಠಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಸ್ಕ್ಯಾನಿಂಗ್ ಸೆಂಟರ್‌ನಲ್ಲಿ ಟೆಕ್ನಿಶಿಯನ್ ಆಗಿದ್ದ.
ಇತ್ತೀಚೆಗೆ 60 ವರ್ಷದ ಮಹಿಳೆಯೊಬ್ಬರಿಗೆ ಹಿರಿಯ ವೈದ್ಯರು ಸಿಟಿ ಸ್ಕ್ಯಾನಿಂಗ್‌ಗೆ ಸಲಹೆ ನೀಡಿದರು. ಹೀಗಾಗಿ, ಸೆ.3ರಂದು ಸೆಂಟರ್‌ಗೆ ಬಂದಿದ್ದಾರೆ. ಆಗ ವೃದ್ಧೆಯನ್ನು ವಿವಸ್ತ್ರಗೊಳಿಸಿ ಖಾಸಗಿ ಭಾಗಗಳನ್ನು ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಲ್ಲದೆ, ತನ್ನೊಂದಿಗೆ ದೈಹಿಕ ಸಂಪರ್ಕ ಬೆಳೆಸುವಂತೆ ಒತ್ತಾಯಿಸಿದ್ದಾನೆ ಎನ್ನಲಾಗಿದೆ. ಅದರಿಂದ ಮುಜುಗರಕ್ಕೊಳಗಾದ ವೃದ್ಧೆ ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್ಸ್ಟೇಬಲ್ ಸಾವು
Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ
Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ
Bengaluru: ಬಸ್ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್ ಬಂಧನ
MUST WATCH
ಹೊಸ ಸೇರ್ಪಡೆ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Kinnigoli: ಪಕ್ಷಿಕೆರೆ; ಕೊಲೆ ಪ್ರಕರಣ ಮತ್ತಷ್ಟು ಸಂಗತಿಗಳು ಬೆಳಕಿಗೆ?
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.