ದೇವಾಲಯಗಳಲ್ಲಿ ದಸರಾ ವಿಶೇಷ ಪೂಜೆ
ಚಿತ್ರಕಲಾ ಪರಿಷತ್ತಿನಲ್ಲಿ ಗೊಂಬೆಗಳ ಪ್ರದರ್ಶನ ಮತ್ತು ಮಾರಾಟ ಮೇಳ ರಾಯರ ಬೃಂದಾವನಕ್ಕೆ ವಿಶೇಷ ಅಭಿಷೇಕ
Team Udayavani, Oct 8, 2021, 1:20 PM IST
ಬೆಂಗಳೂರು: ನವರಾತ್ರಿ ಹಿನ್ನೆಲೆಯಲ್ಲಿ ಗುರುವಾರ ನಗರದ ಹಲವು ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆದವು. ಬೆಳಗ್ಗೆಯಿಂದ ಸಂಜೆ ವರೆಗೂ ದೇವರಿಗೆ ವಿಶೇಷ ಆಲಂಕಾರ ಮತ್ತು ಪೂಜೆ ಸಾಗಿದವು. ಜಯನಗರದ 5ನೇ ಬಡಾವಣೆಯಲ್ಲಿರುವ ನಂಜನ ಗೂಡು ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ಶರನ್ನವರಾತ್ರೋತ್ಸವ ಹಿನ್ನೆಲೆಯಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ಗುರುರಾಯರ ಸನ್ನಿಧಿಯಲ್ಲಿ ಶರನ್ನವರಾತ್ರಿ ಉತ್ಸವದ ಅಂಗವಾಗಿ ಬೆಳಗ್ಗೆ 7ಗಂಟೆಗೆ “ಘೃತ ಮತ್ತು ತೈಲ ನಂದಾದೀಪದೊಂದಿಗೆ ಘಟಸ್ಥಾಪನೆ ಹಾಗೂ ರಾಯರ ಬೃಂದಾವನಕ್ಕೆ ವಿಶೇಷ ಅಭಿಷೇಕ, ಕನಕಾಭಿಷೇಕ ಮಂಗಳಾರತಿ ಸೇರಿದಂತೆ ಮತ್ತಿತರ ಕಾರ್ಯಕ್ರಮಗಳು ಜರುಗಿದವು.
ಅ.15ರಂದು “ವಿಜಯ ದಶಮಿಯ”ಹಬ್ಬದ ಪ್ರಯುಕ್ತ ಸಾಮೂಹಿಕ ಶ್ರೀನಿವಾಸ ಕಲ್ಯಾಣ ಮಹೋತ್ಸವ ಮಠದ ಆವರಣದಲ್ಲಿ ಬೆಳಗ್ಗೆ 8 ಗಂಟೆ ವರೆಗೆ ನಡೆಯಲಿದೆ. ಆನ್‌ಲೈನ್ ಸೇರಿದಂತೆ ಇನ್ನಿತರ ಸಾಮಾಜಿಕ ಜಾಲ ತಾಣಗಳ ಮೂಲಕ ಭಕ್ತರು ಭಾಗವಹಿಸ ಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ;- ಅನುದಾನ ಸೂಕ್ತ ಬಳಸಿ ಅರಣ್ಯ ಸಂರಕ್ಷಿಸಿ
ಶರನ್ನವರಾತ್ರಿ ಪ್ರಯುಕ್ತ ಬನಶಂಕರಿ ದೇವಾಲಯದಲ್ಲಿ ಕೂಡ ಗುರುವಾರ ವಿಶೇಷ ಪೂಜೆ ನಡೆಯಿತು.ಅಲ್ಲದೆ ಬನಶಂಕರಿ ಅಮ್ಮನವರಿಗೆ ಅರಿಶಿನ ಕುಂಕುಮ ಅಲಂ ಕಾರ, ಸಹಸ್ರಮೋದಕ ಗಣಪತಿ ಹೋಮ ಸೇರಿದಂತೆ ಮತ್ತಿತರ ಪೂಜಾ ದೇವಾಲಯದ ಅರ್ಚಕರು ಹೇಳಿದ್ದಾರೆ.
ಶರನ್ನವರಾತ್ರಿ ಪ್ರಯುಕ್ತ ಅ.15ರ ವರೆಗೂ ವಿವಿಧಾ ಅಲಂಕಾರಗಳು ದೇವರಿಗೆ ಅರ್ಪಿಸಲಾಗುವುದು ಎಂದು ಹೇಳಿದ್ದಾರೆ. ಚಿತ್ರಕಲಾ ಪರಿಷತ್ತಿನ ಗೊಂಬೆಗಳ ಮಾರಾಟ: ದಸರಾ ಹಬ್ಬದ ಹಿನ್ನೆಲೆಯಲ್ಲಿ ನಗರದ ಚಿತ್ರಕಲಾ ಪರಿಷತ್ತಿನಲ್ಲಿ ಗುರುವಾರದಿಂದ ಗೊಂಬೆಗಳ ಮಾರಾಟ ಮತ್ತು ಪ್ರದರ್ಶನ ಮೇಳ ಆರಂಭವಾಗಿದೆ. ಅ.17ರ ವರೆಗೂ ನಡೆಯಲಿದೆ.ಒಂದೇ ವೇದಿಕೆಯ ಅಡಿಯಲ್ಲಿ ವಿಭಿನ್ನಲಿಯ ಗೊಂಬೆಗಳು ಗ್ರಾಹಕರಿಗೆ ದೊರೆಯಲಿವೆ.
ಇದರ ಜೊತೆಯಲ್ಲಿಯೇ ಹಬ್ಬಕ್ಕೆ ಬೇಕಾಗಿರುವ ಹಲವು ರೀತಿಯ ಸಾಮಗ್ರಿಗಳನ್ನು ಗ್ರಾಹಕರು ಖರೀದಿಸಬಹುದಾಗಿದೆ. ಅಲಂಕಾರಿಕ ವಸ್ತುಗಳ ಜೊತೆಯಲ್ಲಿಯೇ ಮನೆ ಮಂದಿಗೆ ಬೇಕಾಗಿರುವ ಬಟ್ಟೆಗಳು ಹಾಗೂ ಇನ್ನಿತರೆ ವಸ್ತುಗಳನ್ನು ಕೊಳ್ಳಬಹುದಾಗಿದೆ.80ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇರಿಸಿದ್ದಾರೆ.ಮಣ್ಣು, ಕಲ್ಲು, ಮರ ಹಾಗೂ ಲೋಹಗಳನ್ನು ಬಳಸಿ ತಯಾರಿಸಿರುವ ಗೊಂಬೆಗಳು ಇಲ್ಲಿವೆ.
ಗೊಂಬೆಗಳ ಹಬ್ಬ
ದಸರಾ ಹಿನ್ನೆಲೆಯಲ್ಲಿ ತ್ಯಾಗರಾಜನಗರದ ವಿಜಯಲಕ್ಷೀ ರಿಗ್ರೇಟ್ ಅಯ್ಯರ್ ಅವರು ತಮ್ಮ ಮನೆಯಲ್ಲಿ ವಿವಿಧ ರೀತಿಯ ಗೊಂಬೆಗಳನ್ನು ಕೂರಿಸಿದ್ದು ಗಮನ ಸೆಳೆಯುತ್ತಿವೆ. ವಿಜಯನಗರದ ಅರಸರಾದ ಶ್ರೀಕೃಷ್ಣದೇವಾಲಯ ಮತ್ತು ಅವರ ಕುಟುಂಬ ವರ್ಗದ ( ರಾಣಿಯರು ಮತ್ತು ಸೈನಿಕರು)ಗೊಂಬೆಗಳನ್ನು ಇರಿಸಿದ್ದಾರೆ. ಹಾಗೆಯೇ ವಜ್ರಾಂಗಿ ಅಲಂಕೃತ ಲಕ್ಷೀ ನಾರಾಯಣ, ವಿರೂಪಾಕ್ಷಿ ಸ್ವಾಮಿ ಮತ್ತು ಅಮ್ಮನವರ ಗೊಂಬೆ ಕೂಡ ಕೂರಿಸಲಾಗಿದೆ. ಕಳೆದ 34 ವರ್ಷಗಳಿಂದ ಗೊಂಬೆಗಳನ್ನು ಕೂರಿಸುತ್ತಾ ಬಂದಿರುವುದಾಗಿ ವಿಜಯ ಲಕ್ಷೀ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.