ಸರ್ಕಾರ ಕೈಗಾರಿಗೆ ಮತ್ತು ಹೂಡಿಕೆದಾರರ ಪರವಾಗಿದೆ: ಮುರಗೇಶ್ ನಿರಾಣಿ
Team Udayavani, Jan 28, 2021, 5:54 PM IST
ಬೆಂಗಳೂರು. ಇದು ಕೈಗಾರಿಕೆ ಮತ್ತು ಹೂಡಿಕೆದಾರರ ಪರವಾದ ಸರ್ಕಾರವಾಗಿದೆ ನಾವು ಉದ್ದಿಮೆದಾರರಿಗೆ ಕಾನೂನಿನ ವ್ಯಾಪ್ತಿಯಲ್ಲೇ ಉದ್ಯಮ ನಡೆಸಲು ಎಲ್ಲಾ ರೀತಿಯ ಅನುಕೂಲ ಕಲ್ಪಿಸುತ್ತೇವೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವರಾದ ಮುರಗೇಶ್ ನಿರಾಣಿ ಆಶ್ವಾಸನೆ ನೀಡಿದ್ದಾರೆ.
ವಿಧಾನಮಂಡಲದ ಜಂಟಿ ಅಧಿವೇಶನ ಮುಗಿದ ಬಳಿಕ ವಿಕಾಸಸೌಧದಲ್ಲಿ ಸರಣಿ ಸಭೆಗಳನ್ನು ನಡೆಸಿದ ಅವರು, ಮೊದಲು ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಮಾಲೀಕರ ಸಂಘದ ಪದಾಧಿಕಾರಿಗಳ ಜೊತೆ ಚರ್ಚೆ ನಡೆಸಿದರು.
ನಂತರ ಕರ್ನಾಟಕ ಗ್ರಾನೈಟ್ ಕ್ವಾರಿ ಮತ್ತು ಸ್ಟೋನ್ ಉದ್ದಿಮೆದಾರರ ತಂಡವು ಸಚಿವರನ್ನು ಭೇಟಿಯಾಗಿ ಉದ್ಯಮ ನಡೆಸಲು ಅನುಕೂಲವಾಗುವಂತೆ ನಿಯಮಗಳನ್ನು ಜಾರಿ ಮಾಡಬೇಕೆಂದು ಮನವಿ ಮಾಡಿದರು.
ಇದನ್ನೂ ಓದಿ:ಕೃಷಿ ಕಾಯ್ದೆ ಹಿಂಪಡೆಯದಿದ್ದ ರೆ ಸಂಸತ್ ಬಜೆಟ್ ಕಲಾಪಕ್ಕೆ ಅಡ್ಡಿ
ಈಗಾಗಲೇ ಅಧಿಕಾರಿಗಳ ಜೊತೆ ಸಭೆ ನಡೆಸಿ ಗಣಿ ಮತ್ತು ಕಲ್ಲು ಕ್ವಾರಿ ಉದ್ದಿಮೆದಾರರಿಗೆ ಎದುರಾಗಿರುವ ಸಂಕಷ್ಟಗಳನ್ನು ನಿವಾರಿಸುವ ಕುರಿತಂತೆ ಮಾತುಕತೆ ನಡೆಸಲಾಗಿದೆ,ಇದೇ ಮೊದಲ ಬಾರಿಗೆ ರಾಜ್ಯದ ಐದು ಕಂದಾಯ ವಿಭಾಗದಲ್ಲಿ ಅದಾಲತ್ ನಡೆಸಲಾಗುವುದು, ಸಣ್ಣ ಮತ್ತು ಅತಿ ಸಣ್ಣ ಗಣಿ ಹಾಗೂ ಕಲ್ಲು ಕ್ವಾರಿ ಉದ್ದಿಮೆದಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಗುವುದು, ಇದರಿಂದ ಸಾಕಷ್ಟು ಅನುಕೂಲವಾಗಲಿದೆ ಎಂದು ಅವರು ಹೇಳಿದರು.
ಬಳಿಕ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ತಡೆಗಟ್ಟುವಿಕೆ, ಕಲ್ಲು ಕ್ವಾರಿಯಿಂದ ಉಂಟಾಗುತ್ತಿರುವ ಸಮಸ್ಯೆ, ಹೊಸ ನಿಯಮಗಳ ಜಾರಿ ಸೇರಿದಂತೆ ಮತ್ತಿತರ ವಿಷಯಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.